newsics.com/ನ್ಯೂಸಿಕ್ಸ್
ಒಂದು ಹಿಟ್ ಸಿನಿಮಾ ಕೊಟ್ಟು ಬಿಟ್ಟರೆ ಮುಂದಿನ ಹತ್ತು ವರ್ಷ ಅದರ ಬಲದಲ್ಲೇ ನಟರ ಜೀವನ ನಡೆದು ಹೋಗುತ್ತಿತ್ತು. ಇದೇ ಕಾರಣಕ್ಕ ನಟರುಗಳು ಯಾವುದೇ ದೊಡ್ಡ ಬಜೆಟ್ನ, ಭಿನ್ನ ಕತೆಯುಳ್ಳ ಸಿನಿಮಾಗಳನ್ನು ಯಾವ ಕಾರಣಕ್ಕೂ ಬಿಡುವುದಿಲ್ಲ. ಆದರೆ ಇಲ್ಲೊಬ್ಬ ಸ್ಟಾರ್ ನಟ, ಸಿನಿಮಾ ದೊಡ್ಡ ಹಿಟ್ ಆಗುತ್ತದೆ ಎಂದು ಗೊತ್ತಿದ್ದರೂ ಸಿನಿಮಾದಲ್ಲಿ ತಮಗೆ ಆಫರ್ ಮಾಡಲಾಗಿದ್ದ ಪ್ರಮುಖ ಪಾತ್ರದಲ್ಲಿ ನಟಿಸಲು ಒಲ್ಲೆ ಎಂದರಂತೆ.
ಬಾಲಿವುಡ್‌ನ ಬಹುಮುಖ ಪ್ರತಿಭೆಯ ನಟ ರಣದೀಪ್ ಹೂಡಾ ತಮ್ಮ ವಿಭಿನ್ನ ಪಾತ್ರಗಳ ಮೂಲಕ ಚಿತ್ರರಂಗದಲ್ಲಿ ವಿಶೇಷ ಗುರುತು ಮೂಡಿಸಿದ್ದಾರೆ. ಹಲವು ಸೂಪರ್ ಹಿಟ್ ಸಿನಿಮಾಗಳಲ್ಲಿ ರಣ್ದೀಪ್ ನಟಿಸಿದ್ದಾರೆ. ನಾಯಕನಾಗಿ, ಪೋಷಕ ನಟನಾಗಿ, ವಿಲನ್ ಆಗಿ ಎಲ್ಲ ರೀತಿಯ ಪಾತ್ರಗಳಲ್ಲೂ ರಣ್ದೀಪ್ ನಟಿಸಿದ್ದಾರೆ.
2025 ರಲ್ಲಿ ಬಿಡುಗಡೆ ಆಗಿ ಭಾರಿ ದೊಡ್ಡ ಹಿಟ್ ಆದ ‘ಛಾವಾ’ ಸಿನಿಮಾನಲ್ಲಿ ಅತ್ಯಂತ ಪ್ರಮುಖ ಪಾತ್ರದಲ್ಲಿ ನಟಿಸುವ ಆಫರ್ ರಣ್ದೀಪ್ ಹೂಡ ಅವರಿಗೆ ನೀಡಲಾಗಿತ್ತು. ಆದರೆ ಅವರು ಒಲ್ಲೆ ಎಂದರು. ‘ಛಾವಾ’ ಸಿನಿಮಾದ ವಿಲನ್, ಕ್ರೂರ ಮೊಘಲ್ ದೊರೆ ಔರಂಗಜೇಬ್ ಪಾತ್ರಕ್ಕಾಗಿ ಮೊದಲು ರಣದೀಪ್ ಹೂಡಾ ಅವರನ್ನು ಸಂಪರ್ಕಿಸಲಾಗಿತ್ತು. ಆದರೆ, ಅವರು ಈ ಬ್ಲಾಕ್‌ಬಸ್ಟರ್ ಚಿತ್ರದ ಆಫರ್ ಅನ್ನು ತಿರಸ್ಕರಿಸಿದ್ದರು. ಇತ್ತೀಚಿನ ಸಂದರ್ಶನವೊಂದರಲ್ಲಿ ಅವರು ಈ ನಿರ್ಧಾರದ ಹಿಂದಿನ ಅಸಲಿ ಕಾರಣವನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಮಾತನಾಡಿದ ರಣದೀಪ್ ಹೂಡಾ, ‘ನನಗೆ ‘ಛಾವಾ’ ಚಿತ್ರದಲ್ಲಿ ಔರಂಗಜೇಬ್ ಪಾತ್ರದ ಆಫರ್ ಬಂದಿದ್ದು ನಿಜ. ಚಿತ್ರದ ಕಥೆ ಮತ್ತು ಆ ಪಾತ್ರ ಎರಡೂ ತುಂಬಾ ಬಲವಾಗಿದ್ದವು. ಆದರೆ ಆ ಸಮಯದಲ್ಲಿ ನಾನು ನನ್ನದೇ ಆದ ಸ್ವಂತ ಸಿನಿಮಾ ‘ಸ್ವಾತಂತ್ರ್ಯ ವೀರ್ ಸಾವರ್ಕರ್’ ಚಿತ್ರದ ನಿರ್ದೇಶನ ಮತ್ತು ನಟನೆಯಲ್ಲಿ ಸಂಪೂರ್ಣವಾಗಿ ಬ್ಯುಸಿಯಾಗಿದ್ದೆ, ಸಾವರ್ಕರ್ ಚಿತ್ರಕ್ಕಾಗಿ ನಾನು ತುಂಬಾ ತೂಕ ಇಳಿಸಿಕೊಂಡಿದ್ದೆ ಮತ್ತು ದೈಹಿಕವಾಗಿ ಸಾಕಷ್ಟು ಬದಲಾಗಿದ್ದೆ. ಆ ಒಂದು ಯೋಜನೆಯ ಮೇಲೆ ನಾನು ಎಷ್ಟು ಗಮನ ಹರಿಸಿದ್ದೆ ಎಂದರೆ, ಅದೇ ಸಮಯದಲ್ಲಿ ಮತ್ತೊಂದು ದೊಡ್ಡ ಸಿನಿಮಾಗೆ ಹಾಗೂ ಅಷ್ಟೇ ತೂಕದ ಪಾತ್ರಕ್ಕೆ ನ್ಯಾಯ ಒದಗಿಸುವುದು ನನಗೆ ಸಾಧ್ಯವಿರಲಿಲ್ಲ. ಆ ಕಾರಣದಿಂದಾಗಿಯೇ ನಾನು ‘ಛಾವಾ’ ಚಿತ್ರದ ಆಫರ್ ಅನ್ನು ಅತ್ಯಂತ ಗೌರವಪೂರ್ವಕವಾಗಿ ನಿರಾಕರಿಸಬೇಕಾಯಿತು’ ಎಂದು ಸ್ಪಷ್ಟಪಡಿಸಿದ್ದಾರೆ.
ಉತ್ತರ ಪ್ರದೇಶದದಲ್ಲಿ ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸ್ಪರ್ಶ