newsics.com/ನ್ಯೂಸಿಕ್ಸ್
ರಾಜ್ಯದ ಜನತೆಗೆ ಕಡು ಬೇಸಿಗೆಯ ಬಳಿಕ ತಂಪಾದ ಸುದ್ದಿ ಸಿಕ್ಕಿದೆ. ನೈಋತ್ಯ ಮುಂಗಾರು ಅರಬ್ಬೀ ಸಮುದ್ರ ಹಾಗೂ ಬಂಗಾಳ ಕೊಲ್ಲಿಯ ಹಲವು ಭಾಗಗಳಲ್ಲಿ ಅತ್ಯಂತ ವೇಗವಾಗಿ ಮುನ್ನಡೆಯುತ್ತಿದ್ದು, ಕರ್ನಾಟಕಕ್ಕೆ ಪ್ರವೇಶಿಸಲು ಪೂರಕ ವಾತಾವರಣ ಸೃಷ್ಟಿಯಾಗಿದೆ.
ರಾಜ್ಯದ 19 ಜಿಲ್ಲೆಗಳಲ್ಲಿ ಇಂದಿನಿಂದ ಮುಂದಿನ ಐದು ದಿನಗಳವರೆಗೆ ಭಾರಿ ಬಿರುಗಾಳಿ ಹಾಗೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ವಿಜಯನಗರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಪ್ರತಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದ ಗಾಳಿಯೊಂದಿಗೆ ಮಳೆ ಸುರಿಯುವ ಸಾಧ್ಯತೆಯಿದೆ. ದಾವಣಗೆರೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೋಲಾರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿಲೋಮೀಟರ್ ಇರಲಿದ್ದು, ಹಗುರದಿಂದ ಸಾಧಾರಣ ಮಳೆಯ ಮುನ್ಸೂಚನೆ ಇದೆ.
Breakfast Recipe ಬೆಳಗ್ಗಿನ ತಿಂಡಿಗೆ ಬಿಸಿ ಬಿಸಿ ಹಲಸಿನ ದೋಸೆ! ಸಿಂಪಲ್ ರೆಸಿಪಿ ಇಲ್ಲಿದೆ