Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸೈನಿಕನ ತಾಯಿಗೆ ನ್ಯಾಯ ದೊರಕಿಸಿಕೊಡಲು ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗಿದ ಶಸ್ತ್ರಸಜ್ಜಿತ ಐಟಿಬಿಪಿ ಸೈನಿಕರು
ದೇಶಪ್ರಮುಖ

ಸೈನಿಕನ ತಾಯಿಗೆ ನ್ಯಾಯ ದೊರಕಿಸಿಕೊಡಲು ಪೊಲೀಸ್ ಕಮಿಷನರ್ ಕಚೇರಿಗೆ ನುಗ್ಗಿದ ಶಸ್ತ್ರಸಜ್ಜಿತ ಐಟಿಬಿಪಿ ಸೈನಿಕರು

Share
2 Min Read
SHARE

newsics.com/ನ್ಯೂಸಿಕ್ಸ್

ಉತ್ತರ ಪ್ರದೇಶ :  ವೈದ್ಯರ ಬೇಜವಾಬ್ದಾರಿತನದಿಂದಾಗಿ ಸಹೋದ್ಯೋಗಿಯ ತಾಯಿಯ ಕೈ ಕತ್ತರಿಸಿದ ಪ್ರಕರಣದಲ್ಲಿ ಆರೋಗ್ಯ ಇಲಾಖೆ ಆಸ್ಪತ್ರೆಗೆ ಕ್ಲೀನ್ ಚಿಟ್ ನೀಡಿರುವುದನ್ನು ಖಂಡಿಸಿ, ಐಟಿಬಿಪಿ (ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್) ಸೈನಿಕರು ಪೊಲೀಸ್ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿದ ಘಟನೆ ಕಾನ್ಪುರದಲ್ಲಿ ಭಾರಿ ಆತಂಕ ಹಾಗೂ ಕೋಲಾಹಲಕ್ಕೆ ಕಾರಣವಾಗಿದೆ.

ಶನಿವಾರ ಬೆಳಿಗ್ಗೆ ಐಟಿಬಿಪಿ ಕಮಾಂಡೆಂಟ್ ಗೌರವ್ ಪ್ರಸಾದ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಶಸ್ತ್ರಸಜ್ಜಿತ ಸೈನಿಕರು ಪೊಲೀಸ್ ಕಮಿಷನರ್ ಕಚೇರಿಗೆ ಲಗ್ಗೆ ಇಟ್ಟಿದ್ದರಿಂದ ಇಡೀ ಪೊಲೀಸ್ ಸಂಕೀರ್ಣವು ಕೆಲಕಾಲ ಮಿಲಿಟರಿ ಕಂಟೋನ್ಮೆಂಟ್ ಆಗಿ ಮಾರ್ಪಟ್ಟಿತ್ತು.

ಮಹಾರಾಜಪುರದ 32ನೇ ಬೆಟಾಲಿಯನ್‌ನಲ್ಲಿ ನಿಯೋಜಿತರಾಗಿರುವ ಐಟಿಬಿಪಿ ಕಾನ್ಸ್‌ಟೇಬಲ್ ವಿಕಾಸ್ ಸಿಂಗ್ ಅವರ ತಾಯಿ ನಿರ್ಮಲಾ ದೇವಿ ಅವರನ್ನು ಉಸಿರಾಟದ ತೊಂದರೆಯಿಂದಾಗಿ ಮೇ 13 ರಂದು ಟಾಟಾ ಮಿಲ್ಸ್ ರಸ್ತೆಯಲ್ಲಿರುವ ಕೃಷ್ಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಯ ಸಮಯದಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಅವರ ಕೈಗೆ ಗಂಭೀರ ಸೋಂಕು ತಗುಲಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ತಾಯಿ ನಿರ್ಮಲಾ ದೇವಿ ಅವರ ಸ್ಥಿತಿ ಅತ್ಯಂತ ಹದಗೆಟ್ಟಾಗ, ಅವರನ್ನು ತಕ್ಷಣ ಪ್ಯಾರಾಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ, ಅಲ್ಲಿನ ವೈದ್ಯರು ಸೋಂಕು ಇಡೀ ದೇಹಕ್ಕೆ ಹರಡುವುದನ್ನು ತಡೆಯಲು ಮೇ 17 ರಂದು ಅವರ ಕೈಯನ್ನು ಕತ್ತರಿಸಿ ತೆಗೆದಿದ್ದಾರೆ.

ಈ ಘೋರ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕಾನ್ಸ್‌ಟೇಬಲ್ ವಿಕಾಸ್ ಸಿಂಗ್ ಅಧಿಕಾರಿಗಳ ಬಳಿ ಅಲೆದಾಡಿದರೂ ಯಾರೂ ಸ್ಪಂದಿಸಿರಲಿಲ್ಲ. ಇದರಿಂದ ಮನನೊಂದ ವಿಕಾಸ್ ಸಿಂಗ್, ಮೇ 20 ರಂದು ಆಸ್ಪತ್ರೆಯವರು ಕತ್ತರಿಸಿ ಕೊಟ್ಟಿದ್ದ ತನ್ನ ತಾಯಿಯ ಕೈಯನ್ನೇ ಪ್ಲಾಸ್ಟಿಕ್‌ನಲ್ಲಿ ಹಿಡಿದುಕೊಂಡು ನೇರವಾಗಿ ಪೊಲೀಸ್ ಆಯುಕ್ತರ ಕಚೇರಿಗೆ ಬಂದು ಧರಣಿ ಕುಳಿತಿದ್ದರು. ಈ ಆಘಾತಕಾರಿ ದೃಶ್ಯ ಕಂಡು ಬೆಚ್ಚಿಬಿದ್ದ ಪೊಲೀಸ್ ಆಯುಕ್ತರು, ತಕ್ಷಣ ಪ್ರಕರಣದ ತನಿಖೆ ನಡೆಸುವಂತೆ ಆರೋಗ್ಯ ಇಲಾಖೆಗೆ ಆದೇಶಿಸಿದ್ದರು.ಆದರೆ, ಆರೋಗ್ಯ ಇಲಾಖೆಯು ನೀಡಿದ ತನಿಖಾ ವರದಿಯು ದೋಷಿ ವೈದ್ಯರು ಮತ್ತು ಕೃಷ್ಣ ಆಸ್ಪತ್ರೆಯ ಆಡಳಿತ ಮಂಡಳಿಯನ್ನು ರಕ್ಷಿಸುವ ರೀತಿಯಲ್ಲಿತ್ತು. ವರದಿಯಲ್ಲಿ ಸೋಂಕು ಹೇಗೆ ಹರಡಿತು ಎಂಬ ನಿಖರ ಕಾರಣ ನೀಡದೆ, ಕೇವಲ ಕಾಲ್ಪನಿಕ ಸಾಧ್ಯತೆಗಳನ್ನು ಉಲ್ಲೇಖಿಸಿ ಆಸ್ಪತ್ರೆಗೆ ಕ್ಲೀನ್ ಚಿಟ್ ನೀಡಲಾಗಿತ್ತು.

ಇದರಿಂದ ಕೆರಳಿದ ಐಟಿಬಿಪಿ ಅಧಿಕಾರಿಗಳು ಹಾಗೂ ಸೈನಿಕರು ಶನಿವಾರ ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಆಯುಕ್ತ ಡಾ. ವಿಪಿನ್ ಟಾಡಾ ಅವರನ್ನು ಭೇಟಿ ಮಾಡಿ ತೀವ್ರ ಪ್ರತಿಭಟನೆ ನಡೆಸಿದರು. ತನಿಖಾ ತಂಡದ ಪಕ್ಷಪಾತ ಧೋರಣೆಯನ್ನು ತರಾಟೆಗೆ ತೆಗೆದುಕೊಂಡರು.

ಪ್ರಕರಣದ ಮರು ತನಿಖೆ ನಡೆಸಿ ಹೊಸ ವರದಿ ನೀಡುವಂತೆ ಮುಖ್ಯ ವೈದ್ಯಕೀಯ ಅಧಿಕಾರಿ  ಅವರಿಗೆ ಸೂಚಿಸಲಾಗಿದೆ. ವೈದ್ಯಕೀಯ ನಿರ್ಲಕ್ಷ್ಯ ಸಾಬೀತಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದೇ ವೇಳೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಸಿಎಂಒ ಅವರ ಬಳಿ ಮಾಧ್ಯಮಗಳು ಪ್ರಶ್ನೆ ಕೇಳಲು ಹೋದಾಗ, ಅವರು ಉತ್ತರ ನೀಡಲಾಗದೆ ಕ್ಯಾಮೆರಾಗಳಿಂದ ಮುಖ ಮುಚ್ಚಿಕೊಂಡು ಓಡಿಹೋಗಿರುವುದು ಸಾರ್ವಜನಿಕರ ಅನುಮಾನವನ್ನು ಮತ್ತಷ್ಟು ಬಲಪಡಿಸಿದೆ.ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಐಟಿಬಿಪಿ ಕಮಾಂಡೋ ಅಧಿಕಾರಿಗಳು, ಇದೊಂದು ಪೊಲೀಸ್ ಅಧಿಕಾರಿಗಳ ಜೊತೆಗಿನ ಪೂರ್ವ ನಿಯೋಜಿತ ಭೇಟಿ ಎಂದು ಹೇಳಿದ್ದಾರೆ.

ಚೀನಾ ಸೌಂದರ್ಯದಾಸೆಗೆ ಕಣ್ಮರೆಯಾಗುತ್ತಿವೆ ಕತ್ತೆ ಸಂತತಿ

TAGGED:Armed ITBP soldiers storm Police Commissioner's office to ensure justice for soldier's mother
Share This Article
Facebook Twitter Copy Link Print
Previous Article ಚೀನಾ ಸೌಂದರ್ಯದಾಸೆಗೆ ಕಣ್ಮರೆಯಾಗುತ್ತಿವೆ ಕತ್ತೆ ಸಂತತಿ
Next Article Bengaluru Traffic ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಈ ರಸ್ತೆಗಳಲ್ಲಿ 60 ದಿನ ಸಂಚಾರ ನಿರ್ಬಂಧ

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?