Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿಯರಿಗೆ ಶಾಕ್..?
ಕರ್ನಾಟಕ

ರಾಜ್ಯ ಸರ್ಕಾರದಿಂದ ಗೃಹ ಲಕ್ಷ್ಮಿಯರಿಗೆ ಶಾಕ್..?

Share
2 Min Read
SHARE

newsics.com/ನ್ಯೂಸಿಕ್ಸ್

ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ ಬರಿದಾಗುತ್ತಿದೆ, ಅಭಿವೃದ್ದಿ ಯೋಜನೆಗಳಿಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳ ನಡುವೆಯೇ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಮಹತ್ವದ ತೀರ್ಮಾನಕ್ಕೆ ಬಂದಿದೆ.

ರಾಜ್ಯದಲ್ಲಿ ಸರ್ಕಾರದ ಪ್ರಮುಖ ಯೋಜನೆಗಳಾದ ಗೃಹ ಲಕ್ಷ್ಮಿ (ಮಹಿಳೆಯರಿಗೆ ಮಾಸಿಕ 2,000 ರೂ.) ಹಾಗೂ ಗೃಹ ಜ್ಯೋತಿ (ಉಚಿತ ವಿದ್ಯುತ್) ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಸಮಗ್ರವಾಗಿ ಪರಿಶೀಲಿಸಲು ಸರ್ಕಾರ ಮುಂದಾಗಿದೆ. ಈ ಯೋಜನೆಗಳಲ್ಲಿ ಅನರ್ಹರು ಸಹ ಲಾಭ ಪಡೆಯುತ್ತಿರುವುದು ಪತ್ತೆಯಾಗಿದೆ.

ಇದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗುತ್ತಿದೆ. ಹೀಗಾಗಿ ಎಸ್‌ಐಆರ್‌ (Specila Intensive Revision) ಕುರಿತ ಕಾಂಗ್ರೆಸ್‌ ಶಾಸಕರು ಹಾಗೂ ಸಚಿವರ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಈ ಬಗ್ಗೆ ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದ್ದಾರೆ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಪ್ರಮುಖವಾಗಿ ಮೂರು ಕಾರಣಗಳನ್ನು ನೀಡಿ, ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಪ್ರಸ್ತುತ ರಾಜ್ಯದಲ್ಲಿ ಬರೋಬ್ಬರಿ 1 ಕೋಟಿ 24 ಲಕ್ಷಕ್ಕೂ ಅಧಿಕವಾಗಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದಾರೆ. ಇಷ್ಟು ದೊಡ್ಡ ಪ್ರಮಾಣದ ಫಲಾನುಭವಿಗಳ ಪಟ್ಟಿಯಲ್ಲಿ ಕೆಲವು ತಾಂತ್ರಿಕ ದೋಷಗಳ ಕಾರಣ ಹಾಗೂ ಯೋಜನೆಯ ನಿಯಮ ಉಲ್ಲಂಘನೆಗಳು ಪತ್ತೆಯಾಗಿರುವುದು ಸರ್ಕಾರ ಗಮನಿಸಿದೆ. ಈ ಹಿನ್ನೆಲೆಯಲ್ಲಿ ಎಲ್ಲ ವೈಫಲ್ಯಗಳ ಬಗ್ಗೆ ಆಲೋಚಿಸಿರುವ ಸರ್ಕಾರ ಈ ಮಹತ್ವದ ಹೆಜ್ಜೆ ಇಡಲು ಮುಂದಾಗಿದೆ.

ಕಾಂಗ್ರೆಸ್ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳ ಪೈಕಿ ಎರಡು ಅತ್ಯಂತ ಜನಪ್ರಿಯ ಯೋಜನೆಗಳ ಫಲಾನುಭವಿಗಳ ಪಟ್ಟಿಯನ್ನು ಮರು ಪರಿಷ್ಕರಣೆ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ಹಾಗೂ ನಿಜವಾದ ಅರ್ಹ ಬಡ ಜನರಿಗೆ ಮಾತ್ರ ಯೋಜನೆ ತಲುಪಬೇಕು ಎಂಬ ಉದ್ದೇಶದಿಂದ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ತಿಳಿದುಬಂದಿದೆ.

ಇನ್ನೂ ಮೃತಪಟ್ಟವರ ಖಾತೆಗಳಿಗೂ ಗೃಹ ಲಕ್ಷ್ಮಿ ಯೋಜನೆಯ ಹಣ ಸಂದಾಯವಾಗುತ್ತಿದೆ, ಅಲ್ಲದೆ ಯೋಜನೆಯ ನಿಮಯಗಳ ಪ್ರಕಾರ ಆದಾಯ ತೆರಿಗೆ ಪಾವತಿದಾರರು ಯೋಜನೆಯ ಲಾಭ ಪಡೆಯಲು ಅನರ್ಹರು. ಆದರೆ ಅಂತಹ ಲಕ್ಷಾಂತರ ಕುಟುಂಬಗಳು ಸಹ ಈ ಯೋಜನೆಯ ಲಾಭ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಇಷ್ಟೇ ಅಲ್ಲದೆ ಒಂದೇ ಮನೆಯಲ್ಲಿರುವ ಇಬ್ಬರು ಸದಸ್ಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಒಂದೇ ರೇಷನ್‌ ಕಾರ್ಡ್‌ ಇದ್ದರೂ ಸಹ ತಾಂತ್ರಿಕ ದೋಷದಿಂದ ಇಬ್ಬರ ಖಾತೆಗೆ ಹಣ ತಲುಪುತ್ತಿತ್ತು. ಈ ಎಲ್ಲ ವೈಫಲ್ಯಗಳನ್ನು ಗುರುತಿಸಿ ಬಡವರ ಏಳಿಗೆಗಾಗಿ ಜಾರಿಗೆ ತಂದಿರುವ ಕಾರ್ಯಕ್ರಮಗಳು ಅರ್ಹರಿಗೆ ತಲುಪಬೇಕು, ಅವರ ಜೀವನದಲ್ಲಿ ಬದಲಾವಣೆ ತರುವಂತಾಗಬೇಕು ಎಂಬುವುದು ಸರ್ಕಾರದ ಸ್ಪಷ್ಟ ನಿಲುವಾಗಿದೆ.

ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್‌ ಜಂಟಿಯಾಗಿ ಚಿಂತನೆ ನಡೆಸಿ, ತಕ್ಷಣವೇ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸೂಚಿಸಿದ್ದಾರೆ. ಸದ್ಯ ಈ ಕುರಿತು ಸರ್ಕಾರ ತೀರ್ಮಾನಿಸಿದ್ದು, ಇನ್ನೇನು ನೂತನ ಆದೇಶದನ್ವಯ ಅನರ್ಹರನ್ನು ಪತ್ತೆ ಮಾಡಲು ಅವರ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಸೇರಿದಂತೆ ಆದಾಯ ತೆರಿಗೆ ಇಲಾಖೆಯ ದಾಖಲೆಗಳನ್ನು ಪರಿಶೀಲಿಸಲು ಮುಂದಾಗಿದ್ದಾರೆ.

ಅನರ್ಹರಿಗೆ ಈ ಯೋಜನೆಗಳಿಂದ ಶಾಶ್ವತವಾಗಿ ಗೇಟ್‌ ಪಾಸ್‌ ನೀಡಲು ಸಿದ್ದರಾಮಯ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ. ಇನ್ನೂ ಈ ನಿರ್ಧಾರದಿಂದ ಅನಗತ್ಯವಾಗಿ ವ್ಯಯಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಸರ್ಕಾರಕ್ಕೆ ಉಳಿತಾಯವಾಗಲಿದೆ ಎಂಬ ಲೆಕ್ಕಾಚಾರವನ್ನ ರಾಜ್ಯ ಸರ್ಕಾರ ಹಾಕಿದಂತಾಗಿದೆ.

ದೇವರ ಕುರಿತು ISRO ಮಾಜಿ ಅಧ್ಯಕ್ಷ ಸೋಮನಾಥ್ ಹೇಳಿದ್ದೇನು?

 

TAGGED:Shock to householders from the state government..?
Share This Article
Facebook Twitter Copy Link Print
Previous Article ದೇವರ ಕುರಿತು ISRO ಮಾಜಿ ಅಧ್ಯಕ್ಷ ಸೋಮನಾಥ್ ಹೇಳಿದ್ದೇನು?
Next Article ದರ್ಶನ್ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ – ಏನದು?;ವಾರಕ್ಕೆ ನಾಲ್ಕು ದಿನ ವಿಚಾರಣೆಗೆ ಕೋರ್ಟ್ ಪ್ಲಾನ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?