Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RCB won against GT ಗುಜರಾತ್ ಸೋಲಿಸಿ ಸತತ 2ನೇ ಬಾರಿ ಫೈನಲ್​ಗೇರಿದ ಆರ್​ಸಿಬಿ
ದೇಶಪ್ರಮುಖ

RCB won against GT ಗುಜರಾತ್ ಸೋಲಿಸಿ ಸತತ 2ನೇ ಬಾರಿ ಫೈನಲ್​ಗೇರಿದ ಆರ್​ಸಿಬಿ

Share
3 Min Read
SHARE

newsics.com/ನ್ಯೂಸಿಕ್ಸ್

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆದ ಗುಜರಾತ್ ವಿರುದ್ಧದ ಈ ಪಂದ್ಯದಲ್ಲಿ ಕೆಚ್ಚೆದೆಯ ಆಟ ಪ್ರದರ್ಶಿಸಿದ ಆರ್​ಸಿಬಿ ದಾಖಲೆಯ ಗೆಲುವು ದಾಖಲಿಸಿ ಸತತ ಎರಡನೇ ಬಾರಿಗೆ ಐಪಿಎಲ್ ಫೈನಲ್​ಗೇರಿದೆ.

ಸತತ ಎರಡನೇ ಬಾರಿಗೆ ಐಪಿಎಲ್ (IPL 2026) ಟ್ರೋಫಿ ಎತ್ತಿಹಿಡಿಯುವ ತವಕದಲ್ಲಿರುವ ಹಾಲಿ ಚಾಂಪಿಯನ್ ಆರ್​ಸಿಬಿ (RCB), ತಾನು ಏಕೆ ಮತ್ತೊಮ್ಮೆ ಚಾಂಪಿಯನ್ ಆಗಬೇಕು ಎಂಬುದನ್ನು ಕ್ವಾಲಿಫೈಯರ್ 1 ಪಂದ್ಯದಲ್ಲಿಯೇ ಸಾಬೀತುಪಡಿಸಿದೆ.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಆರ್​ಸಿಬಿ ನಾಯಕ ರಜತ್ ಪಾಟಿದರ್ (Rajat Patidar) ಅವರ ಸಿಡಿಲಬ್ಬರದ ಬ್ಯಾಟಿಂಗ್​ನಿಂದಾಗಿ ದಾಖಲೆಯ 255 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಗುಜರಾತ್, ಆರ್​ಸಿಬಿ ಬೌಲರ್​ಗಳಿಗೆ ದಾಳಿಗೆ ನಲುಗಿ 162 ರನ್​ಗಳಿಗೆ ಆಲೌಟ್ ಆಯಿತು. ಆದಾಗ್ಯೂ ಗುಜರಾತ್​ಗೆ ಫೈನಲ್​ಗೇರಲು ಇನ್ನೊಂದು ಅವಕಾಶವಿದ್ದು, ಕ್ವಾಲಿಫೈಯರ್ 2 ಅನ್ನು ಆಡಲಿದೆ. ಆ ಪಂದ್ಯದಲ್ಲಿ ಗೆದ್ದರೆ ಮತ್ತೆ ಫೈನಲ್​ನಲ್ಲಿ ಆರ್​ಸಿಬಿಯನ್ನು ಎದುರಿಸಲಿದೆ.ಮೇಲೆ ಹೇಳಿದಂತೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಸತತ ಎರಡನೇ ಬಾರಿಗೆ ಮತ್ತು ಐಪಿಎಲ್ ಇತಿಹಾಸದಲ್ಲಿ ಐದನೇ ಬಾರಿಗೆ ಫೈನಲ್ ತಲುಪಿದ ಸಾಧನೆ ಮಾಡಿದೆ.

ಆರ್​ಸಿಬಿಗೆ ಉತ್ತಮ ಆರಂಭ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್​ಸಿಬಿಗೆ ಸಾಧಾರಣ ಆರಂಭ ಸಿಕ್ಕಿತು. ವೆಂಕಟೇಶ್ ಅಯ್ಯರ್ 19 ರನ್​ಗಳ ಇನ್ನಿಂಗ್ಸ್ ಆಡಿ ಔಟಾದರು. ಆದರೆ ಆ ಬಳಿಕ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ದೇವದತ್ ಪಡಿಕ್ಕಲ್ ಅರ್ಧಶತಕದ ಜೊತೆಯಾಟವನ್ನಾಡುವ ಮೂಲಕ ತಂಡವನ್ನು ಪವರ್​ಪ್ಲೇನಲ್ಲಿಯೇ 70 ರನ್​ಗಳ ಗಡಿ ದಾಟಿಸಿದರು. ಜೊತೆಗೆ ಇವರಿಬ್ಬರು ಅರ್ಧಶತಕದತ್ತ ದಾಪುಗಾಲಿಟ್ಟಿದ್ದರು. ಆದರೆ ಈ ವೇಳೆ ದಾಳಿಗಿಳಿದ ಜೇಸನ್ ಹೊಲ್ಡರ್ ಒಂದೇ ಓವರ್​ನಲ್ಲಿ ಇವರಿಬ್ಬರನ್ನು ಔಟ್ ಮಾಡಿದರು.

ನಾಯಕನ ಇನ್ನಿಂಗ್ಸ್ ಆಡಿದ ರಜತ್

ವಿರಾಟ್ ಕೊಹ್ಲಿ 25 ಎಸೆತಗಳಲ್ಲಿ 43 ರನ್‌ ಬಾರಿಸಿದರೆ, ದೇವದತ್ ಪಡಿಕ್ಕಲ್ 30 ರನ್​ಗಳ ಕಾಣಿಕೆ ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ನಾಯಕನ ಇನ್ನಿಂಗ್ಸ್ ಆಡಿದ ರಜತ್ ಪಾಟಿದಾರ್ ಕೇವಲ 33 ಎಸೆತಗಳಲ್ಲಿ ಅಜೇಯ 93 ರನ್ ಬಾರಿಸಿದರು. ಅವರು ತಮ್ಮ ಇನ್ನಿಂಗ್ಸ್‌ನಲ್ಲಿ ಒಂಬತ್ತು ಸಿಕ್ಸರ್‌ಗಳು ಮತ್ತು ಐದು ಬೌಂಡರಿಗಳನ್ನು ಬಾರಿಸಿದರು. ಪಾಟಿದಾರ್ ಅವರ ಸ್ಟ್ರೈಕ್ ರೇಟ್ 281 ಕ್ಕಿಂತ ಹೆಚ್ಚಿತ್ತು. ಪಾಟಿದಾರ್ ಜೊತೆಗೆ, ಕೃನಾಲ್ ಪಾಂಡ್ಯ ಕೂಡ 43 ರನ್ ಗಳಿಸಿ ಆರ್​​ಸಿಬಿ 254 ತಲುಪಲು ಸಹಾಯ ಮಾಡಿದರು.

ಗುಜರಾತ್ ಬ್ಯಾಟಿಂಗ್  ವೈಫಲ್ಯ

255 ರನ್‌ಗಳ ಗುರಿ ಬೆನ್ನಟ್ಟಿದ ಗುಜರಾತ್‌ನ ಬ್ಯಾಟಿಂಗ್ ಸಂಪೂರ್ಣವಾಗಿ ಕುಸಿಯಿತು. ಸಾಯಿ ಸುದರ್ಶನ್ 14 ರನ್‌ಗಳಿಗೆ ಹಿಟ್ ವಿಕೆಟ್ ಆದರೆ, ನಾಯಕ ಶುಭ್​ಮನ್ ಗಿಲ್ ಕೇವಲ 2 ರನ್‌ಗಳಿಗೆ ಬೌಲ್ಡ್ ಆದರು. ವಿಕೆಟ್ ಕೀಪರ್ ಜೋಸ್ ಬಟ್ಲರ್ 11 ಎಸೆತಗಳಲ್ಲಿ 29 ರನ್ ಗಳಿಸಿ ಔಟಾದರು. ನಿಶಾಂತ್ ಸಿಂಧು 5 ರನ್ ಗಳಿಸಿ ಔಟಾದರೆ, ವಾಷಿಂಗ್ಟನ್ ಸುಂದರ್ ಕೂಡ 8 ರನ್ ಗಳಿಸಿ ಔಟಾದರು. ಜೇಸನ್ ಹೋಲ್ಡರ್​ಗೆ ತಮ್ಮ ಖಾತೆಯನ್ನು ತೆರೆಯಲೂ ಸಾಧ್ಯವಾಗಲಿಲ್ಲ. ಆದಾಗ್ಯೂ ತಂಡದ ಪರ ಏಕಾಂಗಿ ಹೋರಾಟ ನಡೆಸಿದ ರಾಹುಲ್ ತೆವಾಟಿಯಾ 68 ರನ್​ಗಳ ಇನ್ನಿಂಗ್ಸ್ ಆಡಿದರಾದರೂ ತಂಡವನ್ನು ಗೆಲುವಿನ ದಡ ಮುಟ್ಟಿಸಲು ಸಾಧ್ಯವಾಗಲಿಲ್ಲ. ಇತ್ತ ಆರ್‌ಸಿಬಿ ಪರ ವೇಗಿ ಜಾಕೋಬ್ ಡಫಿ ಮೂರು ವಿಕೆಟ್‌ಗಳನ್ನು ಪಡೆರೆ, ಜೋಶ್ ಹ್ಯಾಜಲ್‌ವುಡ್, ರಸಿಕ್ ಸಲಾಂ ದಾರ್ ಮತ್ತು ಕೃನಾಲ್ ಪಾಂಡ್ಯ ತಲಾ 2 ವಿಕೆಟ್ ಪಡೆದರು. ಇವರಲ್ಲದೆ, ಭುವನೇಶ್ವರ್ ಕುಮಾರ್ 1 ವಿಕೆಟ್ ಪಡೆದರು.

 

ಶುಕ್ರವಾರ ಸಿಎಂ ರಾಜೀನಾಮೆ: ಮುಗಿಯಿತಾ ಸಿದ್ದು ಪರ್ವ?

TAGGED:RCB defeated Gujarat and reached the final for the 2nd time in a row
Share This Article
Facebook Twitter Copy Link Print
Previous Article ಶುಕ್ರವಾರ ಸಿಎಂ ರಾಜೀನಾಮೆ: ಮುಗಿಯಿತಾ ಸಿದ್ದು ಪರ್ವ?
Next Article GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 27-05-2026, ಬುಧವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?