newsics.com/ನ್ಯೂಸಿಕ್ಸ್
ಬೆಂಗಳೂರು: ಕಾಂಗ್ರೆಸ್‌ನಲ್ಲಿನ ಪವರ್ ಶೇರಿಂಗ್ ಬಿಕ್ಕಟ್ಟು ಮತ್ತಷ್ಟು ಕುತೂಹಲಕಾರಿ ಘಟ್ಟಕ್ಕೆ ತಲುಪಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.
ಗುರುವಾರ ಬೆಳಗ್ಗೆ ಸಿಎಂ ನಿವಾಸದಲ್ಲಿ ಸಚಿವರಿಗೆ ಬ್ರೇಕ್‌ಫಾಸ್ಟ್ ಇರಲಿದೆ. ಬ್ರೇಕ್‌ಫಾಸ್ಟ್ ಬಳಿಕ ಸಿಎಂ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ರಾಜಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ನಾಯಕತ್ವವು ಸಿದ್ದರಾಮಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನ ನೀಡಿದ್ದು, ರಾಜ್ಯಸಭೆ ಮೂಲಕ ದೆಹಲಿಗೆ ಬಂದು ಸಂಘಟನಾತ್ಮಕ ಅಥವಾ ಆಡಳಿತಾತ್ಮಕವಾಗಿ ದೊಡ್ಡ ಜವಾಬ್ದಾರಿ ವಹಿಸಿಕೊಳ್ಳುವಂತೆ ಸೂಚಿಸಿದೆ. ಅಲ್ಲದೆ, “ಉಳಿದೆಲ್ಲಾ ವಿಚಾರಗಳು ಮತ್ತು ಅವರ ಸಮಸ್ಯೆಗಳನ್ನು ಬಗೆಹರಿಸಲಾಗುವುದು” ಎಂಬ ಭರವಸೆಯನ್ನೂ ಹೈಕಮಾಂಡ್ ನೀಡಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ಸಾರ್ವತ್ರಿಕ ಚುನಾವಣೆಯ ವೇಳೆಗೆ ದೇಶಾದ್ಯಂತ ಕಾಂಗ್ರೆಸ್‌ನ ಸಾಮಾಜಿಕ ನ್ಯಾಯ ಮತ್ತು ಜಾತಿ ಜನಗಣತಿಯ ಅಸ್ತ್ರವನ್ನು ತೀಕ್ಷ್ಣಗೊಳಿಸಲು ರಾಹುಲ್ ಗಾಂಧಿ ಮಾಸ್ಟರ್ ಪ್ಲಾನ್ ರೂಪಿಸಿದ್ದಾರೆ. ಇದಕ್ಕಾಗಿ ರಾಷ್ಟ್ರ ಮಟ್ಟದಲ್ಲಿ ಪಕ್ಷದ ಪ್ರಮುಖ ಹಿಂದುಳಿದ ವರ್ಗಗಳ (OBC) ಪ್ರಬಲ ಮುಖವಾಗಿ ಸಿದ್ದರಾಮಯ್ಯ ಅವರನ್ನು ಮುಂಚೂಣಿಗೆ ತರಲು ಕಾಂಗ್ರೆಸ್ ನಾಯಕತ್ವ ಬಯಸಿದೆ ಎಂದು ಮೂಲಗಳು ತಿಳಿಸಿವೆ.
RCB won against GT ಗುಜರಾತ್ ಸೋಲಿಸಿ ಸತತ 2ನೇ ಬಾರಿ ಫೈನಲ್ಗೇರಿದ ಆರ್ಸಿಬಿ