newsics.com/ನ್ಯೂಸಿಕ್ಸ್
ಬೆಂಗಳೂರು: ಮುಂಬೈ ಮೂಲದ ರೇಡಿಯೋ ಜಾಕಿ ನೇಣು ಬಿಗಿದು ಆತ್ಮಹತ್ಯೆಗೆ ಮಾಡಿಕೊಂಡ ಘಟನೆ ಮಾನ್ಯತಾ ಟೆಕ್ ಪಾರ್ಕ್ ಬಳಿ ಇರುವ ಅಪಾರ್ಟ್ಮೆಂಟ್‌ನ ಫ್ಲಾಟ್‌ನಲ್ಲಿ ನಡೆದಿದೆ.
ಮನೀಷಾ (49) ಆತ್ಮಹತ್ಯೆ ಮಾಡಿಕೊಂಡ ರೇಡಿಯೋ ಜಾಕಿ.ಸ್ನೇಹಿತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದು, ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಮುಂಬೈನಲ್ಲಿ ರೇಡಿಯೋ ಜಾಕಿಯಾಗಿದ್ದ ಮನೀಷಾ ಅವರು, 2024ರಲ್ಲಿ ತಮ್ಮ ಪತಿಯಿಂದ ವಿಚ್ಛೇದನ ಪಡೆದಿದ್ದರು. ತದನಂತರ ಕಳೆದ ಏಪ್ರಿಲ್ ತಿಂಗಳಷ್ಟೇ ಬೆಂಗಳೂರಿಗೆ ಆಗಮಿಸಿದ್ದ ಅವರು, ಮಾನ್ಯತಾ ಟೆಕ್ ಪಾರ್ಕ್ ಬಳಿ ಹೊಸದಾಗಿ ಫ್ಲಾಟ್ ಖರೀದಿಸಿ ಒಂಟಿಯಾಗಿ ವಾಸಿಸುತ್ತಿದ್ದರು. ಕಳೆದ ಮೇ 23ರಂದು ಮನೀಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಸಂಬಂಧಿಕರು ಫೋನ್ ಮಾಡಿದಾಗ ಕರೆ ಸ್ವೀಕರಿಸದ ಹಿನ್ನೆಲೆಯಲ್ಲಿ ಮನೆಗೆ ಬಂದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.
ಇನ್ನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಮನೀಷಾ ಅವರು ಡೆತ್‌ನೋಟ್ ಬರೆದಿಟ್ಟಿದ್ದು, ಅದರಲ್ಲಿ ತಮ್ಮ ಸಾವಿಗೆ ಹರ್ಷವರ್ಧನ್ ಸಿಂಗ್ ಬನ್ಸಾಲ್ ಕಾರಣ ಎಂದು ಉಲ್ಲೇಖಿಸಿದ್ದಾರೆ. ‘ನಾನು ಮತ್ತು ಹರ್ಷವರ್ಧನ್ ಸಿಂಗ್ ರಿಲೇಷನ್‌ಶಿಪ್‌ನಲ್ಲಿದ್ದೆವು. ಈ ವಿಷಯ ಆತನ ಮನೆಯವರಿಗೂ ತಿಳಿದಿತ್ತು. ಆದರೆ ಆತ ಪ್ರತಿದಿನ ನನಗೆ ತೀವ್ರ ಮಾನಸಿಕ ಕಿರುಕುಳ ನೀಡುತ್ತಿದ್ದ. ಆತನ ಕಿರುಕುಳವನ್ನು ತಡೆಯಲಾರದೆ ಮನನೊಂದು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ’ ಎಂದು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಅಮೃತಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಸದ್ಯ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.
ಹೌಸ್ ಪಾರ್ಟಿ ಪ್ರಿಯರಿಗೆ ಬಿಗ್ ಶಾಕ್: ಮದ್ಯದ ಪರ್ಮಿಟ್ ಶುಲ್ಕ ದುಪ್ಪಟ್ಟು ಮಾಡಿದ ಸರ್ಕಾರ!