newsics.com/ನ್ಯೂಸಿಕ್ಸ್
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಪದತ್ಯಾಗಕ್ಕೆ ಮುಂದಾಗಿದ್ದಾರೆ. ನಾಳೆ ಬೆಳಿಗ್ಗೆ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಈ ನಡುವೆ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ? ಎಂಬ ಚರ್ಚೆ ಆರಂಭವಾಗಿದೆ.
ದೆಹಲಿಯಲ್ಲಿ ನಡೆದ ಎಐಸಿಸಿ ನಾಯಕರು ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಮ್ಯಾರಥಾನ್ ಸಭೆಯಲ್ಲಿ ಅಧಿಕಾರ ಹಂಚಿಕೆ ಸೂತ್ರದಂತೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಹುಲ್ ಗಾಂಧಿ ರಾಜೀನಾಮೆ ನೀಡುವಂತೆ ಸೂಚಿಸಿದ್ದಾರೆ.
ರಾಹುಲ್ ಗಾಂಧಿ ಮಾತಿಗೆ ಒಪ್ಪಿದ ಸಿದ್ದರಾಮಯ್ಯ ಅಧಿಕಾರ ತ್ಯಾಗಕ್ಕೆ ಸಮ್ಮತಿ ನೀಡಿದ್ದಾರೆ. ಆದರೆ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಹೆಸರಿನ ಬದಲು ಪರಮೇಶ್ವರ್ ಹೆಸರನ್ನು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.
ಮುಂದಿನ ಸಿಎಂ ರೇಸ್ ಗೆ ಜಿ. ಪರಮೇಶ್ವರ್ ಅವರ ಹೆಸರನ್ನು ಸಿದ್ದರಾಮಯ್ಯ ಹೈಲೈಟ್ ಮಾಡಿರುವುದರ ಹಿಂದೆ ದೊಡ್ಡ ರಾಜಕೀಯ ತಂತ್ರಗಾರಿಕೆಯೇ ಅಡಗಿದೆ. ಪರಮೇಶ್ವರ್ ಅವರಿಗೆ ಇರುವ ದಶಕಗಳ ರಾಜಕೀಯ ಅನುಭವ, ಈ ಹಿಂದೆ ಸುದೀರ್ಘ ಕಾಲ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನು ಯಶಸ್ವಿಯಾಗಿ ಮುನ್ನಡೆಸಿದ ಇತಿಹಾಸ ಮತ್ತು ಅವರ ಕ್ಲೀನ್ ಇಮೇಜ್ ಆಡಳಿತವನ್ನು ಸಿದ್ದರಾಮಯ್ಯ ಹೈಕಮಾಂಡ್ ನಾಯಕರಿಗೆ ನೆನಪಿಸಿದ್ದಾರೆ. ಅನುಭವ ಮತ್ತು ಅರ್ಹತೆಯ ಆಧಾರದ ಮೇಲೆ ಪರಮೇಶ್ವರ್ ಅವರೇ ಈ ಸ್ಥಾನಕ್ಕೆ ನೂರಕ್ಕೆ ನೂರು ಸೂಕ್ತ ವ್ಯಕ್ತಿ ಎಂಬುದು ಸಿಎಂ ಹೇಳಿದ್ದಾರೆ ಎನ್ನಲಾಗಿದೆ.
Salman Khan ನಟ ಸಲ್ಮಾನ್ ಖಾನ್ ರಹಸ್ಯ ವಿಡಿಯೋ ಲೀಕ್ : ಫ್ಯಾನ್ಸ್ ಗೆ ಆತಂಕ