Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!
ಕರ್ನಾಟಕದೇಶಪ್ರಮುಖ

Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆಯ ಕೌಂಟ್‌ಡೌನ್ ಅಂತಿಮ ಹಂತಕ್ಕೆ ತಲುಪಿದೆ ಎಂಬ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ವಲಯವೇ ಬೆಚ್ಚಿಬೀಳುವಂತಹ ಭಾರೀ ಆಟವಾಡಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ದೀರ್ಘಕಾಲದಿಂದ ತೀವ್ರ ಸಂಚಲನ ಮೂಡಿಸಿದ್ದ ಬಹುನಿರೀಕ್ಷಿತ ‘ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿ’ಯನ್ನು (ಜಾತಿ ಸಮೀಕ್ಷೆ ವರದಿ) ಸಿದ್ದರಾಮಯ್ಯ ಅವರು ದಿಢೀರ್ ವಿಧಾನಸೌಧದಲ್ಲಿ ಸ್ವೀಕರಿಸಿ ಸಂಚಲನ ಮೂಡಿಸಿದ್ದಾರೆ.

ನಾಯಕತ್ವ ಹಸ್ತಾಂತರದ ಭಾರೀ ಒತ್ತಡದ ಮಧ್ಯೆಯೂ ಸಿಎಂ ನಡೆಸಿರುವ ಈ ರಾಜಕೀಯ ಕಾರ್ಯಾಚರಣೆ, ಕೇವಲ ಕಾಕತಾಳೀಯವಲ್ಲ; ಇದರ ಹಿಂದೆ ಹೈಕಮಾಂಡ್ ಹಾಗೂ ವಿರೋಧಿಗಳಿಗೆ ಏಕಕಾಲದಲ್ಲಿ ಬ್ರೇಕ್ ಹಾಕುವ ಭಾರಿ ತಂತ್ರಗಾರಿಕೆ ಅಡಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

‘ಅಹಿಂದ’ ಕನಸು ನನಸು?

ರಾಜಕೀಯ ಮೂಲಗಳ ಪ್ರಕಾರ, ಹೈಕಮಾಂಡ್ ಸೂಚನೆಯಂತೆ ಒಂದು ವೇಳೆ ತಾವು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿ ಬಂದರೂ, ಅದಕ್ಕೂ ಮುನ್ನ ತಮ್ಮದೇ ಕನಸಿನ ಕೂಸಾದ ‘ಜಾತಿ ಸಮೀಕ್ಷೆ ವರದಿ’ಯನ್ನು ಸ್ವೀಕರಿಸಿ, ಅದರ ಅನುಷ್ಠಾನಕ್ಕೆ ಸ್ಪಷ್ಟ ಆದೇಶ ನೀಡಬೇಕು ಎಂಬುದು ಸಿದ್ದರಾಮಯ್ಯ ಅವರ ತೀವ್ರ ಬಯಕೆಯಾಗಿತ್ತು. ತಾವು ನಂಬಿಕೊಂಡು ಬಂದಿರುವ ‘ಸಾಮಾಜಿಕ ನ್ಯಾಯ’ ಮತ್ತು ‘ಅಹಿಂದ’ (AHINDA) ವರ್ಗಗಳ ಹಿತರಕ್ಷಣೆಯ ಬದ್ಧತೆಯನ್ನು ಸಾಬೀತುಪಡಿಸಲು ಇದಕ್ಕಿಂತ ಸೂಕ್ತ ಸಮಯ ಮತ್ತೊಂದಿಲ್ಲ ಎಂದು ಸಿಎಂ ಭಾವಿಸಿದ್ದಾರೆ ಎನ್ನಲಾಗಿದೆ.

ವರದಿಯನ್ನು ಅಧಿಕೃತವಾಗಿ ಸ್ವೀಕರಿಸಿ, ಜಾರಿಗೆ ಆದೇಶಿಸುವ ಮೂಲಕ ತಾವು ಅಧಿಕಾರದಲ್ಲಿದ್ದರೂ ಇಲ್ಲದಿದ್ದರೂ ಹಿಂದುಳಿದ ವರ್ಗಗಳ ಪರಮೋಚ್ಚ ನಾಯಕ ತಾವೇ ಎಂಬುದನ್ನು ಇಡೀ ರಾಜ್ಯಕ್ಕೆ ಸಾರುವ ಯತ್ನ ಇದಾಗಿದೆ.

ಮುಂದಿನ ನಾಯಕನಿಗೆ ಮುಳ್ಳಿನ ಹಾದಿ?

ವಿಧಾನಸೌಧದಲ್ಲಿ ಬುಧವಾರ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂದನ್ ನಾಯಕ್ ಅವರಿಂದ ಸಚಿವರಾದ ಎಚ್.ಸಿ. ಮಹದೇವಪ್ಪ ಮತ್ತು ಶಿವರಾಜ್ ತಂಗಡಗಿ ಅವರ ಸಮ್ಮುಖದಲ್ಲೇ ವರದಿ ಪಡೆದ ಸಿದ್ದರಾಮಯ್ಯ, ತಮ್ಮ ರಾಜಕೀಯ ಭವಿಷ್ಯದ ಕೊನೆಯ ಕಾರ್ಡ್ ಪ್ಲೇ ಮಾಡಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಈ ವರದಿ ಜಾರಿಗೆ ಆದೇಶ ನೀಡಿ ಹುದ್ದೆಯಿಂದ ಕೆಳಗಿಳಿದರೆ, ಮುಂದಿನ ಮುಖ್ಯಮಂತ್ರಿಯಾಗುವವರಿಗೆ ಇದು ದೊಡ್ಡ ಸವಾಲಾಗಿ ಪರಿಣಮಿಸಲಿದೆ.

ವೀರಶೈವ-ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯಗಳ ತೀವ್ರ ವಿರೋಧದ ನಡುವೆ, ಈ ವರದಿಯನ್ನು ಅನುಷ್ಠಾನಕ್ಕೆ ತರುವುದು ಮುಂದಿನ ಸಿಎಂಗೆ ಕತ್ತಿಯ ಮೇಲಿನ ನಡಿಗೆಯಾಗಲಿದೆ.

ಹೈಕಮಾಂಡ್‌ಗೆ ಪರೋಕ್ಷ ಸಂದೇಶ:

ರಾಷ್ಟ್ರೀಯ ಮಟ್ಟದಲ್ಲಿ ರಾಹುಲ್ ಗಾಂಧಿ ಅವರು ದೇಶಾದ್ಯಂತ ಜಾತಿ ಸಮೀಕ್ಷೆ ನಡೆಸಬೇಕು ಎಂದು ಪ್ರತಿಪಾದಿಸುತ್ತಿದ್ದಾರೆ. ಹೀಗಿರುವಾಗ ಕರ್ನಾಟಕದಲ್ಲಿ ತಾವು ಅದನ್ನು ಜಾರಿಗೆ ತರುತ್ತಿರುವುದನ್ನು ಹೈಕಮಾಂಡ್ ಕೂಡ ವಿರೋಧಿಸಲು ಸಾಧ್ಯವಿಲ್ಲ ಎಂಬ ಜಾಣ್ಮೆಯ ಲೆಕ್ಕಾಚಾರ ಸಿದ್ದರಾಮಯ್ಯ ಅವರದ್ದಾಗಿದೆ. ಒಟ್ಟಾರೆಯಾಗಿ, “ನಾಳೆ ಮಾತನಾಡುತ್ತೇನೆ” ಎಂದು ಸಸ್ಪೆನ್ಸ್ ಕಾಯ್ದುಕೊಂಡಿದ್ದ ಸಿದ್ದರಾಮಯ್ಯ, ರಾಜೀನಾಮೆಗೆ ಮುನ್ನವೇ ಈ ಐತಿಹಾಸಿಕ ವರದಿಗೆ ಮುದ್ರೆ ಒತ್ತುವ ಮೂಲಕ ಇಡೀ ರಾಜ್ಯ ರಾಜಕಾರಣದ ದಿಕ್ಕನ್ನೇ ಬದಲಿಸುವ ಬಿರುಗಾಳಿ ಎಬ್ಬಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್; ಮನವೊಲಿಕೆಗೂ ಜಗ್ಗದ ರಾಹುಲ್​​ ಗಾಂಧಿ

 

ಸಿದ್ದರಾಮಯ್ಯ ಸಿಎಂ ಸ್ಥಾನ ತ್ಯಜಿಸಲು ಒಪ್ಪಿದ್ದು ಇದೆ ಕಾರಣಕ್ಕೆ

 

ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್

TAGGED:Siddaramaiah gave a masterstroke by accepting the caste survey report!
Share This Article
Facebook Twitter Copy Link Print
Previous Article ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್
Next Article Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?