Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!
ಕರ್ನಾಟಕದೇಶಪ್ರಮುಖ

Karnataka politics ಸಿಎಂ ಬದಲಾವಣೆಗೇ ಒಲವು ತೋರಿ ಡಿಕೆ ಬೆನ್ನಿಗೆ ನಿಂತ ಪ್ರಿಯಾಂಕಾ!

Share
3 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯಲ್ಲಿ ಪ್ರಿಯಾಂಕಾ ಗಾಂಧಿ ನಿರ್ಣಾಯಕ ಪಾತ್ರ ವಹಿಸಿರುವುದು ಬಹಿರಂಗವಾಗಿದೆ.

ದೆಹಲಿಯಲ್ಲಿ ನಡೆದ ಹೈಡ್ರಾಮಾದ ಬಳಿಕ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಹೈಕಮಾಂಡ್ ನಿರ್ಧರಿಸಿದ್ದು, ಸಿದ್ದರಾಮಯ್ಯ ಗೆ ರಾಜ್ಯಸಭಾ ಆಫರ್ ನೀಡಲಾಗಿದೆ.

ನಿಮ್ಮ ಮನೆಯ ಮಿಕ್ಸರ್ ಸರಿಯಾಗಿ ಕೆಲಸ ಮಾಡುತ್ತಿಲ್ಲವೇ? ಜಸ್ಟ್ ಈ ರೀತಿ ಮಾಡಿ

ಕರ್ನಾಟಕ ರಾಜಕಾರಣದಲ್ಲಿ ಭಾರೀ ಸಂಚಲನ ಸೃಷ್ಟಿಸಿರುವ ಮುಖ್ಯಮಂತ್ರಿ ಬದಲಾವಣೆ ಪ್ರಕ್ರಿಯೆಯ ಹಿಂದೆ ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್‌ನ “ಟ್ರಬಲ್ ಶೂಟರ್” ಪ್ರಿಯಾಂಕಾ ಗಾಂಧಿ ಅವರ ಹಸ್ತಕ್ಷೇಪ ಬಹಿರಂಗವಾಗಿದೆ.

ಕಳೆದ ಒಂದು ವರ್ಷದಿಂದ ಮುಖ್ಯಮಂತ್ರಿ ಗಾದಿಗಾಗಿ ತೀವ್ರ ಕಸರತ್ತು ನಡೆಸುತ್ತಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಹಸಿರು ನಿಶಾನೆ ತೋರಿದ್ದು, ಸಿಎಂ ಸಿದ್ದರಾಮಯ್ಯ ಅವರಿಗೆ ದಾರಿ ಮಾಡಿಕೊಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಇದರೊಂದಿಗೆ ಕರ್ನಾಟಕದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರ ಆಯ್ಕೆ ಬಹುತೇಕ ಖಚಿತಗೊಂಡಿದೆ.

ದೆಹಲಿಯ ಇಂದಿರಾ ಭವನದಲ್ಲಿ ಆರಂಭದಲ್ಲಿ ನಡೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಕೆ.ಸಿ. ವೇಣುಗೋಪಾಲ್ ಅವರೊಂದಿಗಿನ ಸಭೆಯು ಕೇವಲ ಸಚಿವ ಸಂಪುಟ ಪುನಾರಚನೆ ಮತ್ತು ಆಡಳಿತಾತ್ಮಕ ವಿಷಯಗಳಿಗಷ್ಟೇ ಸೀಮಿತವಾಗಿತ್ತು. ಆದರೆ, ಮಧ್ಯಾಹ್ನ 3:30ರ ಸುಮಾರಿಗೆ ಇಡೀ ರಾಜಕೀಯ ಚಿತ್ರಣವೇ ಬದಲಾಯಿತು.

ಭಾರತದಲ್ಲಿ 3 ರೆಕ್ಕೆಗಳಿರುವ ಫ್ಯಾನ್‌ಗಳೇ ಫೇಮಸ್‌ ಯಾಕೆ?

ಮಧ್ಯಾಹ್ನ ರಾಹುಲ್ ಗಾಂಧಿ ಅವರು ಸೋನಿಯಾ ಗಾಂಧಿ ಅವರನ್ನು ಭೇಟಿಯಾದರು. ಈ ವೇಳೆ ಅಲ್ಲಿ ಹಾಜರಿದ್ದ ಪ್ರಿಯಾಂಕಾ ಗಾಂಧಿ ಅವರು ಕರ್ನಾಟಕದ ನಾಯಕತ್ವ ಬದಲಾವಣೆಯ ಕುರಿತು ಗಂಭೀರ ಚರ್ಚೆ ನಡೆಸಿದರು.

ಸಿದ್ದರಾಮಯ್ಯಗೆ ರಾಜ್ಯಸಭಾ ಆಫರ್

ಈ ಚರ್ಚೆಯ ಬೆನ್ನಲ್ಲೇ, ಸಂಜೆ 4:20ಕ್ಕೆ ಪುನಃ ಸಭೆಗೆ ಆಗಮಿಸಿದ ರಾಹುಲ್ ಗಾಂಧಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೌರವಯುತವಾಗಿ ‘ರಾಜ್ಯಸಭಾ ಸದಸ್ಯತ್ವದ ಆಫರ್’ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ, ಸಿದ್ದರಾಮಯ್ಯ ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತರುವ ಈ ತಂತ್ರದ ಹಿಂದೆ ಪ್ರಿಯಾಂಕಾ ಗಾಂಧಿ ಅವರದ್ದೇ ಮುಖ್ಯಪಾತ್ರ ಎಂಬುದು ಸ್ಪಷ್ಟವಾಗಿದೆ.

ಗಾಂಧಿ ಕುಟುಂಬದ ಅತ್ಯಂತ ನಂಬಿಕಸ್ಥ ನಾಯಕರಾಗಿ ಗುರುತಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಗೆ ಪ್ರಿಯಾಂಕಾ ಗಾಂಧಿ ಹಾಗೂ ರಾಬರ್ಟ್ ವಾದ್ರಾ ಅವರೊಂದಿಗೆ ದಶಕಗಳ ನಿಕಟ ಸಂಬಂಧವಿದೆ. ಸಿಎಂ ಹುದ್ದೆಯ ಕನಸು ಹೊತ್ತು ದೆಹಲಿಗೆ ಹಲವು ಬಾರಿ ಭೇಟಿ ನೀಡಿದ್ದರೂ ಸೂಕ್ತ ರಾಜಕೀಯ ಸ್ಪಷ್ಟನೆ ಸಿಗದೆ ಡಿ.ಕೆ. ಶಿವಕುಮಾರ್ ತೊಂದರೆ ಅನುಭವಿಸುತ್ತಿದ್ದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಿಯಾಂಕಾ ಗಾಂಧಿ ಅವರೇ ಖುದ್ದಾಗಿ ಶಿವಕುಮಾರ್ ಅವರ ಪರವಾಗಿ ವಾದ ಮಂಡಿಸಿ, ಹೈಕಮಾಂಡ್ ಮಟ್ಟದಲ್ಲಿ ಅವರ ಸ್ಥಾನವನ್ನು ಬಲಪಡಿಸಿದ್ದಾರೆ.

ಪಕ್ಷ ಸಂಘಟನೆಯಲ್ಲಿ ಶಿವಕುಮಾರ್ ಅವರು ಅಪ್ರತಿಮ ಸಾಮರ್ಥ್ಯ ಹೊಂದಿರುವ ನಾಯಕ. ಅದನ್ನು ಡಿಕೆಶಿ ಸಾಬೀತು ಮಾಡಿದ್ದಾರೆ. ಚುನಾವಣಾ ಸಮಯದಲ್ಲಿ ಮತ್ತು ಪಕ್ಷದ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಎಲ್ಲವನನೂ ಯಶಸ್ವಿಯಾಗಿ ನಿರ್ವಹಿಸುವ ಕಲೆ ಡಿಕೆಶಿ ಅವರಿಗಿದೆ. ಪ್ರಭಾವಿ ಒಕ್ಕಲಿಗ ಸಮುದಾಯದ ಸಂಪೂರ್ಣ ಬೆಂಬಲ ಹೊಂದಿದ್ದು, ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್ ಭದ್ರಕೋಟೆ ನಿರ್ಮಿಸಿರುವುದು ಕೂಡ ಪ್ರಮುಖವಾಗಿ ಕಾಣಿಸುತ್ತಿದೆ.

ಕಾಂಗ್ರೆಸ್ ಪಕ್ಷದ ಇತಿಹಾಸದಲ್ಲಿ ಕಷ್ಟದ ಸಮಯದಲ್ಲಿ ಪಕ್ಷದ ಕೈ ಹಿಡಿದ ನಾಯಕರಿಗೆ ಸೋನಿಯಾ ಗಾಂಧಿ ಯಾವಾಗಲೂ ವಿಶೇಷ ಸಹಾನುಭೂತಿ ಹೊಂದಿದ್ದಾರೆ. ಡಿ.ಕೆ. ಶಿವಕುಮಾರ್ ಸಹ ಅಂತಹದ್ದೇ ಒಂದು ನಿದರ್ಶನ.

ಈ ಹಿಂದೆ ಗುಜರಾತ್‌ನಲ್ಲಿ ನಡೆದ ಕಠಿಣ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ದಿವಂಗತ ಅಹ್ಮದ್ ಪಟೇಲ್ ಅವರ ಗೆಲುವಿಗಾಗಿ ಮತ್ತು ಕಾಂಗ್ರೆಸ್ ಶಾಸಕರ ರಕ್ಷಣೆಗಾಗಿ ನಿಂತಿದ್ದಕ್ಕೆ ತಾವೇ ಸ್ವತಃ ಕಾನೂನುಾತ್ಮಕ ತೊಂದರೆ ಹಾಗೂ ಜೈಲು ವಾಸವನ್ನು ಅನುಭವಿಸಬೇಕಾಯಿತು ಎಂಬುದನ್ನು ಶಿವಕುಮಾರ್ ಹಲವು ಬಾರಿ ಬಹಿರಂಗವಾಗಿಯೇ ಸ್ಮರಿಸಿದ್ದಾರೆ. ಕೇಂದ್ರದ ತನಿಖಾ ಸಂಸ್ಥೆಗಳ ರಾಜಕೀಯ ಒತ್ತಡ, ಸವಾಲುಗಳ ಹೊರತಾಗಿಯೂ ಅವರು ಕಾಂಗ್ರೆಸ್ ಜತೆಗಿನ ನಿಷ್ಠೆಯನ್ನು ಎಂದಿಗೂ ಬದಲಾಯಿಸಲಿಲ್ಲ.

ಗುಜರಾತ್ ಮಾತ್ರವಲ್ಲದೆ ಹಿಮಾಚಲ ಪ್ರದೇಶ ಹಾಗೂ ತೆಲಂಗಾಣದಂತಹ ರಾಜ್ಯಗಳಲ್ಲಿ ಉಂಟಾಗಿದ್ದ ಸಾಂಸ್ಥಿಕ ಬಿಕ್ಕಟ್ಟುಗಳನ್ನು ಪರಿಹರಿಸುವಲ್ಲಿ ಡಿ.ಕೆ. ಶಿವಕುಮಾರ್ ಅವರು ಗಾಂಧಿ ಕುಟುಂಬದ ಪ್ರಮುಖ ‘ಸಮಸ್ಯೆ ನಿವಾರಕ’ (Trouble Shooter) ಆಗಿ ಕೆಲಸ ಮಾಡಿದ್ದಾರೆ. ಶಿವಕುಮಾರ್ ಅವರು ಸಂಕಷ್ಟದಲ್ಲಿದ್ದಾಗ ಗಾಂಧಿ ಕುಟುಂಬ ಬೆಂಬಲವಾಗಿ ನಿಂತಿತ್ತು, ಈಗ ಅಧಿಕಾರ ಹಂಚಿಕೆಯ ಸರದಿಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಶಿವಕುಮಾರ್ ಅವರಿಗೆ ಬೆಂಬಲವಾಗಿ ನಿಂತಿದ್ದಾರೆ ಎನ್ನಲಾಗಿದೆ.

ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ರೀತಿಯ ಬಂಡಾಯ ಏಳದಂತೆ, ಪ್ರಾದೇಶಿಕ ಹಾಗೂ ಸಾಮಾಜಿಕ ಸಮೀಕರಣಗಳನ್ನು ಸರಿದೂಗಿಸಿಕೊಂಡು ಅತ್ಯಂತ ಸುಗಮವಾಗಿ ಅಧಿಕಾರ ಹಸ್ತಾಂತರ ಮಾಡಲು ಹೈಕಮಾಂಡ್ ತೀವ್ರವಾಗಿ ಶ್ರಮಿಸುತ್ತಿದೆ.

ಸಿಎಂ ಸಿದ್ದರಾಮಯ್ಯಗೆ ಭರ್ಜರಿ ಶಾಕ್​​ ಕೊಟ್ಟ ಹೈಕಮಾಂಡ್; ಮನವೊಲಿಕೆಗೂ ಜಗ್ಗದ ರಾಹುಲ್​​ ಗಾಂಧಿ

ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!

 

ರಾಜ್ಯದಲ್ಲಿ ಮೇಜರ್​​ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್

Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!

TAGGED:favoring a change in CM!Priyanka stands behind DK
Share This Article
Facebook Twitter Copy Link Print
Previous Article Master stroke ಜಾತಿ ಸಮೀಕ್ಷೆ ವರದಿ ಸ್ವೀಕರಿಸಿ ಮಾಸ್ಟರ್ ಸ್ಟ್ರೋಕ್ ಕೊಟ್ಟ ಸಿದ್ದರಾಮಯ್ಯ!
Next Article ಲೈಂಗಿಕ ಕ್ಷೇಮ ಉತ್ಪನ್ನವನ್ನು ಆರ್ಡರ್ ಮಾಡಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಡೆಲಿವರಿ ಏಜೆಂಟ್

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?