newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಕುತೂಹಲ ಮೂಡಿಸಿದ್ದ ಹೈಡ್ರಾಮಾ ಇದೀಗ ಅಂತಿಮ ಹಂತಕ್ಕೆ ತಲುಪಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸುವ ಮೂಲಕ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದಾರೆ.
ಇಂದು ನಡೆದ ಸಚಿವರ ಮಹತ್ವದ ‘ಬ್ರೇಕ್ಫಾಸ್ಟ್ ಮೀಟಿಂಗ್’ನಲ್ಲಿ ಸಿದ್ದರಾಮಯ್ಯ ಅವರು ತಾವಾಗಿಯೇ ಪದತ್ಯಾಗ ಮಾಡಲಿರುವ ನಿರ್ಧಾರವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ರಾಜಭವನಕ್ಕೆ ತೆರಳಿ ಅವರು ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ. ಒಂದು ವೇಳೆ ರಾಜ್ಯಪಾಲರು ಲಭ್ಯವಿಲ್ಲದಿದ್ದರೆ, ಅವರ ಕಾರ್ಯದರ್ಶಿಗೆ ಪತ್ರ ಹಸ್ತಾಂತರಿಸಲು ನಿರ್ಧರಿಸಿದ್ದಾರೆ.
ಮುಂದಿನ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಅವರೇ ಖುದ್ದಾಗಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಸ್ತಾಪಿಸಲಿದ್ದಾರೆ ಎಂದು ತಿಳಿದುಬಂದಿದೆ.