newsics.com/ನ್ಯೂಸಿಕ್ಸ್
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಸಿಎಂ ಹುದ್ದೆಗೆ ರಾಜೀನಾಮೆ ಘೋಷಿಸಿ ಕಣ್ಣೀರಿಟ್ಟಿದ್ದಾರೆ.
ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಮಾತನಾಡುತ್ತಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ಈ ಭಾವುಕ ಕ್ಷಣಕ್ಕೆ ಸಚಿವರು ಸಾಕ್ಷಿಯಾದರು.ಸಿಎಂ ಸಿದ್ದರಾಮಯ್ಯ ಕಣ್ಣೀರಿಡುತ್ತಿದ್ದಂತೆ ಸಚಿವ ಸಂತೋಷ್ ಲಾಡ್ ಸೇರಿದಂತೆ ಹಲವರು ಸಚಿವರು ಕೂಡ ಭಾವುಕರಾದರು.
ತಾವು ಸ್ವಇಚ್ಛೆಯಿಂದಲೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಅವರು ಸಭೆಯಲ್ಲಿ ಪುನರುಚ್ಚರಿಸಿದ್ದಾರೆ.ಈ ಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರ ಪಾದ ಮುಟ್ಟಿ ನಮಸ್ಕರಿಸುವ ಮೂಲಕ ಪಕ್ಷದ ಒಗ್ಗಟ್ಟನ್ನು ಪ್ರದರ್ಶಿಸಿದ್ದಾರೆ.ಸಭೆಯ ನಂತರ ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಘೋಷಿಸಿದ್ದಾರೆ ಮತ್ತು ಈ ನಿರ್ಧಾರಕ್ಕೆ ಎಲ್ಲಾ ಸಚಿವರು ಸಮ್ಮತಿ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 3:30ಕ್ಕೆ ದೆಹಲಿಗೆ ತೆರಳಲಿದ್ದಾರೆ. ಪಕ್ಷದ ಹೈಕಮಾಂಡ್‌ನ ನಿರ್ದೇಶನದಂತೆ ಈ ಬದಲಾವಣೆಗಳು ನಡೆಯುತ್ತಿದ್ದು, ರಾಜ್ಯ ರಾಜಕೀಯದಲ್ಲಿ ಈ ದಿನವು ಒಂದು ಐತಿಹಾಸಿಕ ಘಟ್ಟವಾಗಿದೆ.