newsics.com/ನ್ಯೂಸಿಕ್ಸ್
ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಖಾಸಗಿ ಬಸ್‌ಗಳ ಪ್ರಯಾಣ ದರ ಏರಿಕೆಗೆ ನಿರ್ಧಾರಿಸಲಾಗಿದೆ ಎಂದು ಜಿಲ್ಲಾ ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಹೇಳಿದರು.
ಆಯಿಲ್, ಟೈಯರ್, ವಾಹನಗಳ ಬಿಡಿ ಭಾಗಗಳ ಬೆಲೆ ಗಗನಕ್ಕೆ ಏರಿವೆ. ಬಸ್‌ಗಳನ್ನು ಓಡಿಸಲು ಸಾಧ್ಯವಾಗುತ್ತಿಲ್ಲ ಹಾಗೂ ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು ಖಾಸಗಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿಲ್ಲ. ಆರ್‌ಟಿಒ ಕಚೇರಿಯ ಎಲ್ಲ ರೀತಿಯ ಶುಲ್ಕವನ್ನೂ ಶೇ.೧೦೦ರಷ್ಟು ಹೆಚ್ಚಿಸಲಾಗಿದೆ ಎಂದು ಲಿಂಗಾರೆಡ್ಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದ ಖಾಸಗಿ ಬಸ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಸರ್ಕಾರ ಯಾವುದೇ ರೀತಿಯ ತೆರಿಗೆ, ಶುಲ್ಕ ಕಡಿಮೆ ಮಾಡುವ ನಿಟ್ಟಿನಲ್ಲಿ ಸಹಕರಿಸುತ್ತಿಲ್ಲ. ಈ ಹಿಂದೆ ಸರ್ಕಾರಿ ಬಸ್‌ಗಳ ಪ್ರಯಾಣ ದರ ಹೆಚ್ಚಳವಾದಾಗ ಖಾಸಗಿ ಬಸ್‌ಗಳಲ್ಲಿ ಹಳೆಯ ದರವೇ ಇದೆ.
ಇದರಿಂದ ನಿತ್ಯ ಒಂದು ಬಸ್‌ಗೆ ೨ ಸಾವಿರ ರೂ. ಹೆಚ್ಚಿನ ಆರ್ಥಿಕ ಹೊರೆಯಾಗುತ್ತಿದೆ. ಆದ್ದರಿಂದ ಬಸ್ ಪ್ರಯಾಣ ದರ ಹೆಚ್ಚಳ ಅನಿವಾರ್ಯವಾಗಿದೆ. ಶೀಘ್ರದಲ್ಲೇ ದರ ಏರಿಕೆ ಪ್ರಕಟಿಸಲು ನಿರ್ಧರಿಸಲಾಗಿದೆ ಎಂದು ಲಿಂಗಾರೆಡ್ಡಿ ಹೇಳಿದರು.
Pankaj Tripathi ನನ್ನ ಭಾಷೆಯನ್ನು ನೋಡಿ ಜನರು ತಕ್ಷಣವೇ ನನ್ನನ್ನು ಜಡ್ಜ್ ಮಾಡುತ್ತಿದ್ದರು : ಪಂಕಜ್ ತ್ರಿಪಾಠಿ