newsics.com/ನ್ಯೂಸಿಕ್ಸ್
ನವದೆಹಲಿ: ಜೂನ್ ಅಥವಾ ಜುಲೈನಲ್ಲಿ ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಶೇ.2ರಷ್ಟು ಷೇರುಗಳನ್ನು ಮಾರಾಟ ಮಾಡಲು ಸರ್ಕಾರ ಮುಂದಾಗಿದೆ ಎಂದು ವರದಿಯಾಗಿದೆ.
ಸಾಂಸ್ಥಿಕ ಹೂಡಿಕೆದಾರರಿಗೆ ಷೇರುಗಳನ್ನು ಮಾರಾಟ ಮಾಡುವ ಮೂಲಕ 10,000 ಕೋಟಿ ರೂ.ಗಳನ್ನು ಸಂಗ್ರಹಿಸಲು ಸರ್ಕಾರ ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನು ನಿರ್ವಹಿಸಲು ಹೂಡಿಕೆ ಮತ್ತು ಸಾರ್ವಜನಿಕ ಆಸ್ತಿ ನಿರ್ವಹಣಾ ಇಲಾಖೆಯು ವಿವಿಧ ಖಾಸಗಿ ಸಂಸ್ಥೆಗಳೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎನ್ನಲಾಗಿದೆ.
ಷೇರು ಮಾರಾಟಕ್ಕೆ ಸರ್ಕಾರ ಮುಂದಾಗಿದೆ ಎಂಬ ವರದಿಗಳ ಬೆನ್ನಲ್ಲೇ ಎಲ್‌ಐಸಿ ಷೇರುಗಳು ಶೇ.3ರಷ್ಟು ಕುಸಿತ ಕಂಡು ರೂ.831ರಂತೆ ವಹಿವಾಟು ನಡೆಸಿವೆ. ಸರ್ಕಾರವು 2022ರಲ್ಲಿ ಎಲ್‌ಐಸಿಯ ಶೇ.3.5ರಷ್ಟು ಪಾಲನ್ನು ಮಾರಾಟ ಮಾಡಿತ್ತು.
ಜೂನ್ 1 ಅಥವಾ 3 ರಂದು ಡಿ.ಕೆ. ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಸಾಧ್ಯತೆ
CLP meeting ಹೊಸ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಚುರುಕು: ನಾಳೆ ಕಾಂಗ್ರೆಸ್ ಶಾಸಕಾಂಗ ಸಭೆ
Governor accepts CM’s resignation ರಾಜ್ಯಪಾಲರಿಂದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ