newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ಗದಗ, ಕೊಪ್ಪಳ, ಧಾರವಾಡ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಬಿರುಗಾಳಿ (ಗಂಟೆಗೆ 40-50 ಕಿ.ಮೀ ವೇಗ) ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಹಾಸನ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಬಲವಾದ ಗಾಳಿಯೊಂದಿಗೆ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ.