Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?
ಕರ್ನಾಟಕಪ್ರಮುಖ

Siddaramaiah ಸಿಎಂ ಸ್ಥಾನ ತೊರೆದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹಿನ್ನಡೆ ಆಯ್ತಾ?

Share
2 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸಿದ್ದರಾಮಯ್ಯಗೆ ಹೈಕಮಾಂಡ್ ಮಟ್ಟದಲ್ಲಿ ಮೊದಲ ಹಿನ್ನಡೆಯಾಗಿದೆಯೇ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ತೀವ್ರವಾಗಿ ಗರಿಗೆದರಿವೆ.

ಹೊಸ ಸರ್ಕಾರ ರಚನೆಗೂ ಮುನ್ನ ಪಕ್ಷ ಮತ್ತು ಸರ್ಕಾರದ ನಡುವೆ ಉತ್ತಮ ಸಮನ್ವಯಕ್ಕಾಗಿ ‘ಸಮನ್ವಯ ಸಮಿತಿ’ ರಚನೆ ಮಾಡಬೇಕು ಎಂದು ನಿರ್ಗಮಿತ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್​ಗೆ ಮನವಿ ಮಾಡಿದ್ದಾರೆ.ಆದರೆ, ಸಿದ್ದರಾಮಯ್ಯ ಪ್ರಸ್ತಾವನೆಯನ್ನು ಕಾಂಗ್ರೆಸ್ ನಾಯಕತ್ವ ನಿರಸ್ಕರಿಸಿದೆ. ಈ ಬೆಳವಣಿಗೆಯು ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸಂಚಲನ ಮೂಡಿಸಿದೆ.

ನೂತನ ಸಚಿವ ಸಂಪುಟದಲ್ಲಿ ಸಾಕಷ್ಟು ಸಂಖ್ಯೆಯ ಹಿರಿಯ ಸಚಿವರು ಇರಲಿದ್ದಾರೆ. ಹೀಗಾಗಿ ಸರ್ಕಾರ ಮತ್ತು ಪಕ್ಷದ ನಡುವೆ ಯಾವುದೇ ರೀತಿಯ ಗೊಂದಲಗಳು ಉಂಟಾಗಬಾರದು ಎನ್ನುವ ದೂರದೃಷ್ಟಿಯಿಂದ ಸಿದ್ದರಾಮಯ್ಯ ಸಮನ್ವಯ ಸಮಿತಿಯ ಅಗತ್ಯತೆಯನ್ನು ಪ್ರತಿಪಾದಿಸಿದ್ದಾರೆ. ಆದರೆ, ಈ ಮನವಿಯನ್ನು ನಿರಾಕರಿಸಿರುವ ಕಾಂಗ್ರೆಸ್ ಹೈಕಮಾಂಡ್, ‘ರಾಜ್ಯದಲ್ಲಿ ಯಾವುದೇ ಮೈತ್ರಿ ಸರ್ಕಾರ ಅಸ್ತಿತ್ವದಲ್ಲಿಲ್ಲ. ಕಾಂಗ್ರೆಸ್ ಪಕ್ಷವೇ ಸ್ವತಂತ್ರವಾಗಿ ಅಧಿಕಾರ ನಡೆಸುತ್ತಿರುವುದರಿಂದ ಪ್ರತ್ಯೇಕ ಸಮನ್ವಯ ಸಮಿತಿಯ ಅಗತ್ಯವೇ ಇಲ್ಲ. ಪಕ್ಷ ಮತ್ತು ಸರ್ಕಾರದ ನಡುವಿನ ಸಮನ್ವಯದ ಜವಾಬ್ದಾರಿಯನ್ನು ಕೆಪಿಸಿಸಿ ಅಧ್ಯಕ್ಷರೇ ನಿಭಾಯಿಸಲಿದ್ದಾರೆ’ ಎಂದು ಸ್ಪಷ್ಟಪಡಿಸಿದೆ. ಸಿಎಂ ಪಟ್ಟದಿಂದ ಕೆಳಗಿಳಿಯುತ್ತಿದ್ದಂತೆಯೇ ಹೈಕಮಾಂಡ್ ಸಿದ್ದರಾಮಯ್ಯ ಅವರ ಮಾತಿಗೆ ಮೊದಲಿನಷ್ಟು ಮನ್ನಣೆ ನೀಡುತ್ತಿಲ್ಲವೇ ಎಂಬ ಅನುಮಾನಕ್ಕೆ ಇದು ಆಸ್ಪದ ಮಾಡಿಕೊಟ್ಟಿದೆ.

ಕಾವೇರಿ ನಿವಾಸಕ್ಕೆ ನಾಯಕರ ದಂಡು

ಈ ಎಲ್ಲಾ ರಾಜಕೀಯ ವಿದ್ಯಮಾನಗಳ ನಡುವೆಯೂ ಬೆಂಗಳೂರಿನ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ಶಾಸಕರು ಮತ್ತು ಪ್ರಮುಖ ನಾಯಕರ ಭೇಟಿ ಮುಂದುವರಿದಿದೆ. ಹಿರಿಯ ನಾಯಕ ಕೆಜೆ ಜಾರ್ಜ್, ಶಾಸಕ ಪೊನ್ನಣ್ಣ, ಪುಟ್ಟರಂಗಶೆಟ್ಟಿ ಹಾಗೂ ಬಿಲ್ಕಿಸ್ ಬಾನು ಸೇರಿದಂತೆ ಹಲವು ಪ್ರಮುಖರು ಕಾವೇರಿ ನಿವಾಸಕ್ಕೆ ಧಾವಿಸಿ ಸಿದ್ದರಾಮಯ್ಯ ಅವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದಾರೆ.

ಇಂದು ಸಂಜೆ ಸಿಎಲ್‌ಪಿ ಸಭೆ

ಇಂದು ಸಂಜೆ 4 ಗಂಟೆಗೆ ಕರೆಯಲಾಗಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆಯಲ್ಲಿ ಹೊಸ ಇತಿಹಾಸ ಬರೆಯಲು ಹೈಕಮಾಂಡ್ ಮುಂದಾಗಿದೆ. ಶಿಷ್ಟಾಚಾರದಂತೆ ಶಾಸಕಾಂಗ ಪಕ್ಷದ ನೂತನ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ಶಾಸಕರ ಮೇಲಿದ್ದರೂ, ಯಾವುದೇ ಭಿನ್ನಾಭಿಪ್ರಾಯ ಮೂಡದಂತೆ ತಡೆಯಲು ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗಿದೆ. ಸಭೆಯಲ್ಲಿ ಖುದ್ದು ಸಿದ್ದರಾಮಯ್ಯ ಅವರ ಮೂಲಕವೇ ಡಿಕೆ ಶಿವಕುಮಾರ್ ಅವರ ಹೆಸರನ್ನು ನೂತನ ಸಿಎಲ್‌ಪಿ ನಾಯಕ ಸ್ಥಾನಕ್ಕೆ ಪ್ರಸ್ತಾಪಿಸಲು ಹೈಕಮಾಂಡ್ ಸಿದ್ಧತೆ ನಡೆಸಿದೆ. ಸಿದ್ದರಾಮಯ್ಯ ಅವರು ಹೆಸರು ಸೂಚಿಸಿದ ಬಳಿಕ ಅದಕ್ಕೆ ಶಾಸಕರು ಅಧಿಕೃತ ಅನುಮೋದನೆ ನೀಡಲಿದ್ದಾರೆ. ಪ್ರಸ್ತಾವನೆ ಪ್ರಕ್ರಿಯೆ ಮುಗಿದ ಬಳಿಕ ಸಿದ್ದರಾಮಯ್ಯ ಅವರು ಧನ್ಯವಾದ ಭಾಷಣ ಮಾಡಲಿದ್ದಾರೆ. ತದನಂತರ ನೂತನ ಶಾಸಕಾಂಗ ಪಕ್ಷದ ನಾಯಕರು ಸರ್ಕಾರ ರಚನೆಯ ಹಕ್ಕು ಮಂಡಿಸಲು ಲೋಕಭವನ (ರಾಜಭವನ) ಕ್ಕೆ ಅಧಿಕೃತ ಮಾಹಿತಿ ರವಾನಿಸಲಿದ್ದಾರೆ.

ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!

TAGGED:Did Siddaramaiah suffer a setback immediately after leaving the CM post?
Share This Article
Facebook Twitter Copy Link Print
Previous Article ಡಿಕೆ ಶಿವಕುಮಾರ್​​ ಪಟ್ಟಾಭಿಷೇಕಕ್ಕೆ ಅಜ್ಜಯ್ಯನ ಮುಹೂರ್ತ ಫಿಕ್ಸ್!
Next Article ಡಿಕೆಶಿ ಸರಳವಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದ್ಯಾಕೆ?

Popular Posts

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

You Might Also Like

ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ಕರ್ನಾಟಕಪ್ರಮುಖಮನರಂಜನೆ

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read
ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?