newsics.com/ನ್ಯೂಸಿಕ್ಸ್
ಕಲಬುರಗಿ: ಹಾಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿ.ಕೆ. ಶಿವಕುಮಾರ್ ಸಿಎಂ ಆಗಿ ಆಯ್ಕೆಯಾಗುತ್ತಿದ್ದಂತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಪೈಪೋಟಿ ಶುರುವಾಗಿದೆ. ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ನೀಡಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆಶಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಹಜವಾಗಿ ಬದಲಾವಣೆ ಆಗುತ್ತೆ.
ಜನ ಬೆಂಬಲ ಇರುವ ಸೂಕ್ತ ವ್ಯಕ್ತಿಗೆ ಪಕ್ಷದ ಅಧ್ಯಕ್ಷ ಸ್ಥಾನ ನೀಡುತ್ತೇವೆ. ಸಿಎಂಗೆ ಉತ್ತಮ ಸಮನ್ವಯ ಇರಬೇಕು, ಅಂತವರನ್ನು ಆಯ್ಕೆ ಮಾಡ್ತೇವೆ.
ವಿಧಾನಸಭಾ ಚುನಾವಣೆಗೆ ಕೇವಲ 24 ತಿಂಗಳು ಮಾತ್ರ ಬಾಕಿಯಿರುವ ಕಾರಣ ಎಲೆಕ್ಷನ್ ಮತ್ತು ಪಕ್ಷ ಕಟ್ಟುವ ದೃಷ್ಟಿಯಿಂದ ಆಯ್ಕೆ ಮಾಡಬೇಕಾಗುತ್ತೆ. ಸ್ಪೀಡ್ ಆಗಿ, ಕಲೆಕ್ಟಿವ್ ಆಗಿ ಎಲ್ಲರನ್ನೂ ಒಗ್ಗಟ್ಟಾಗಿ ತೆಗೆದುಕೊಂಡು ಹೋಗುವ ನಾಯಕನನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾವು ಹುಡುಕಬೇಕಿದೆ. ಜೊತೆಗೆ ಅವರಿಗೆ ಕೋ-ಆಪರೇಟ್ ಮಾಡುವ ಜನರೂ ಇರಬೇಕಾಗುತ್ತದೆ. ಇವೆಲ್ಲವನ್ನೂ ವಿಚಾರ ಮಾಡಿ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.