Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಜಿರಳೆ ಪಕ್ಷದಿಂದ ‘ಲೈಫ್‌ ಆಫ್‌ ಕಾಕ್ರೋಚ್‌’ ಅಭಿಯಾನ ಆರಂಭ!
ಪ್ರಮುಖದೇಶ

ಜಿರಳೆ ಪಕ್ಷದಿಂದ ‘ಲೈಫ್‌ ಆಫ್‌ ಕಾಕ್ರೋಚ್‌’ ಅಭಿಯಾನ ಆರಂಭ!

Share
1 Min Read
SHARE

newsics.com/ನ್ಯೂಸಿಕ್ಸ್

ಸಿಜೆಐ ಅವರು ನಿರುದ್ಯೋಗಿ ಯುವಕರ ಬಗ್ಗೆ ನೀಡಿದ ಹೇಳಿಕೆಯಿಂದ ಹುಟ್ಟಿಕೊಂಡು ಸಾಮಾಜಿಕ ಜಾಲತಾಣದ ಮೂಲಕ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿರುವ ಜಿರಳೆ ಪಕ್ಷ(ಸಿಜೆಪಿ) ತನ್ನ ಅಭಿಯಾನವನ್ನು ಅಧಿಕೃತವಾಗಿ ಆರಂಭ ಮಾಡಿದ್ದು, ಅದಕ್ಕೆ ‘ಜಿರಳೆಯ ಜೀವನ’ (ಲೈಫ್‌ ಆಫ್‌ ಕಾಕ್ರೋಚ್‌) ಎಂದು ಹೆಸರಿಟ್ಟಿದೆ.

ಈ ಬಗ್ಗೆ ಪಕ್ಷದ ಎಕ್ಸ್‌ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದ್ದು, ಅದರಲ್ಲಿ, ‘ಸರ್ಕಾರದ ದುಃಸ್ಥಿತಿಯಿಂದ ಬೇಸತ್ತಿದ್ದರೂ ಅದರ ವಿರುದ್ಧ ಧ್ವನಿ ಎತ್ತಲಾಗದ ಅಥವಾ ಆ ಕೂಗನ್ನು ಸರಿಯಾದವರಿಗೆ ತಲುಪಿಸಲಾಗದ ಈ ಅಭಿಯಾನವನ್ನು ಆರಂಭ ಮಾಡಲಾಗುತ್ತಿದೆ. ಇದು, ಯುವಕರ ಸ್ಥಿತಿಯನ್ನು ನಾಯಕರಿಗೆ ತೋರಿಸುತ್ತದೆ ಹಾಗೂ ಕಾರ್ಯಪ್ರವೃತ್ತರಾಗುವಂತೆ ಅವರ ಮೇಲೆ ಒತ್ತಡ ಹೇರುತ್ತದೆ’ ಎಂದು ಜಿರಳೆಯೊಂದು ಹೇಳುತ್ತಿರುವಂತೆ ತೋರಿಸಲಾಗಿದೆ.

#LifeOfACockroach ಹ್ಯಾಷ್‌ಟ್ಯಾಗ್‌ ಬಳಸಿ ಪೋಸ್ಟ್‌

ಅಭಿಯಾನದ ಭಾಗವಾಗಿ, ಸರ್ಕಾರಿ ಶಾಲೆ, ಆಸ್ಪತ್ರೆಗಳ ದುಸ್ಥಿತಿ, ಕಚೇರಿಗಳಲ್ಲಾಗುತ್ತಿರುವ ಭ್ರಷ್ಟಾಚಾರ, ರಸ್ತೆಯಲ್ಲಿರುವ ಕಸದ ರಾಶಿ, ಗುಂಡಿಬಿದ್ದ ರಸ್ತೆ, ಕುಡಿವ ನೀರು, ಹಿಂದುಳಿದ ವರ್ಗದವರು ಅಥವಾ ಮಹಿಳೆಯರ ಮೇಲೆ ವ್ಯವಸ್ಥೆಯ ದಬ್ಬಾಳಿಕೆ ಇತ್ಯಾದಿಗಳ ಫೋಟೋ/ವಿಡಿಯೋ ಮಾಡಿ, ಸಿಜೆಪಿಯನ್ನು ಟ್ಯಾಗ್‌ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ #LifeOfACockroach ಹ್ಯಾಷ್‌ಟ್ಯಾಗ್‌ ಬಳಸಿ ಪೋಸ್ಟ್‌ ಮಾಡಲು ಯುವಕರಲ್ಲಿ ವಿನಂತಿಸಲಾಗಿದೆ. ಜತೆಗೆ ಇಂತಹ ಸಮಸ್ಯೆಗಳನ್ನು ಮುನ್ನೆಲೆಗೆ ತಂದು, ಆರ್‌ಟಿಐ ಅರ್ಜಿ ಸಲ್ಲಿಸಿ, ಮಾಧ್ಯಮಗಳ ಗಮನಕ್ಕೆ ತಂದು ನಾಯಕರ ಮೇಲೆ ಒತ್ತಡ ಹೇರಲಾಗುವುದು ಎನ್ನಲಾಗಿದೆ.

ಸಾಮಾಜಿಕ ಮಾಧ್ಯಮ ಖಾತೆಗಳು ಬ್ಯಾನ್‌ ಆದರೂ ಹೊಸ ಖಾತೆಗಳ ಮೂಲಕ ಮತ್ತೆ ಪುಟಿದೆದ್ದಿರುವ ಪಕ್ಷವು ದಿನೇದಿನೇ ಬೆಂಬಲಿಗರನ್ನು ಹೆಚ್ಚಿಸಿಕೊಳ್ಳುತ್ತಲೇ ಸಾಗಿದೆ.

ಧಕ್ ಧಕ್ ಬೆಡಗಿ ಮಾಧುರಿ ದೀಕ್ಷಿತ್ ಗೂ AI ಕಾಟ!

TAGGED:'Life of Cockroach' campaign launched by Jirale Paksha!
Share This Article
Facebook Twitter Copy Link Print
Previous Article ರಾಷ್ಟ್ರೀಯ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ಆಟಗಾರನ ಗುಂಡಿಕ್ಕಿ ಹತ್ಯೆ
Next Article ಬೆಂಗಳೂರಿನ ಯುವಜನತೆಯಲ್ಲಿ ಕ್ಯಾನ್ಸರ್ ಭೀತಿ ಹೆಚ್ಚಳ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?