Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡಿಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ; ಮಂತ್ರಿಗಿರಿಗಾಗಿ ಲಾಬಿ ಜೋರು
ಕರ್ನಾಟಕಪ್ರಮುಖ

ಡಿಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ; ಮಂತ್ರಿಗಿರಿಗಾಗಿ ಲಾಬಿ ಜೋರು

Share
2 Min Read
SHARE

newsics.com/ನ್ಯೂಸಿಕ್ಸ್

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಆಯ್ಕೆಯಾಗಿರುವ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಉಪ ಮುಖ್ಯಮಂತ್ರಿ ಹಾಗೂ ಸಚಿವ ಸ್ಥಾನಗಳಿಗಾಗಿ ತೀವ್ರ ಲಾಬಿ ಆರಂಭವಾಗಿದೆ. ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ಚರ್ಚೆಗಳು ಜೋರಾಗಿರುವ ನಡುವೆ ಡಿಸಿಎಂ ಹುದ್ದೆಗಾಗಿ ಹಲವು ನಾಯಕರು ತೆರೆಮರೆಯಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ.

ಉಪ ಮುಖ್ಯಮಂತ್ರಿ ಹುದ್ದೆಗಳ ಕುರಿತು ಇನ್ನೂ ಅಂತಿಮ ನಿರ್ಧಾರವಾಗಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದರೂ, ಕಾಂಗ್ರೆಸ್ ಪಾಳಯದಲ್ಲಿ ಹುದ್ದೆಗಳಿಗಾಗಿ ಪೈಪೋಟಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ವಿಶೇಷವಾಗಿ ದಲಿತ ಕೋಟಾದಡಿ ಡಿಸಿಎಂ ಸ್ಥಾನಕ್ಕಾಗಿ ಹಿರಿಯ ನಾಯಕ ಡಾ. ಜಿ. ಪರಮೇಶ್ವರ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ಪೈಪೋಟಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಡಾ. ಜಿ. ಪರಮೇಶ್ವರ್ ಅವರು ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಡಿಸಿಎಂ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿ ಸ್ಥಾನ ಜತೆಗೆ ಮಹತ್ವದ ಖಾತೆಯನ್ನೂ ನೀಡಬೇಕು ಎಂದು ಒತ್ತಾಯಿಸಿರುವುದಾಗಿ ಮೂಲಗಳು ತಿಳಿಸಿವೆ. ಸೂಕ್ತ ಸ್ಥಾನಮಾನ ಸಿಗದಿದ್ದರೆ ಸಚಿವ ಸಂಪುಟ ಸೇರುವ ಆಸಕ್ತಿ ಇಲ್ಲ, ಶಾಸಕರಾಗಿಯೇ ಮುಂದುವರೆಯುತ್ತೇನೆ ಎಂಬ ನಿಲುವನ್ನೂ ಅವರು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಮತ್ತೊಂದೆಡೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಪ್ರಮುಖ ಖಾತೆ ನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರ ಹೆಸರೂ ಡಿಸಿಎಂ ಹುದ್ದೆಯ ರೇಸ್‌ನಲ್ಲಿ ಮುಂಚೂಣಿಯಲ್ಲಿದೆ. ದಲಿತ ಸಮುದಾಯದ ಯುವ ನಾಯಕನಾಗಿ ಗುರುತಿಸಿಕೊಂಡಿರುವ ಅವರು ಕೂಡ ಪ್ರಮುಖ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ಡಿಸಿಎಂ ಹುದ್ದೆ ಮಾತ್ರವಲ್ಲದೆ ಸಚಿವ ಸ್ಥಾನಗಳಿಗೂ ಭಾರೀ ಪೈಪೋಟಿ ಏರ್ಪಟ್ಟಿದೆ. ಹಿಂದಿನ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದವರು ಮತ್ತೆ ಅವಕಾಶ ಪಡೆಯಲು ಪ್ರಯತ್ನಿಸುತ್ತಿದ್ದರೆ, ಹಿರಿಯ ಶಾಸಕರು ಹಾಗೂ ಹೊಸ ಮುಖಗಳೂ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ. ಈ ಬೆಳವಣಿಗೆಗಳಿಂದ ಆಕಾಂಕ್ಷಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದೆ.

ಇದೇ ವೇಳೆ, ನೂತನ ಸಚಿವ ಸಂಪುಟ ರಚನೆಗೆ ಸಂಬಂಧಿಸಿದಂತೆ ಕೆಲವು ನಾಯಕರ ಹೆಸರನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆ ಪಟ್ಟಿಯಲ್ಲಿ ಎ.ಎಸ್. ಪೊನ್ನಣ್ಣ, ಶಿವರಾಜ್ ತಂಗಡಗಿ, ಪುಟ್ಟರಂಗ ಶೆಟ್ಟಿ, ಕೆ. ವೆಂಕಟೇಶ್, ಬಸವರಾಜ್ ರಾಯರೆಡ್ಡಿ, ಬಿ.ಕೆ. ಹರಿಪ್ರಸಾದ್, ಸಂತೋಷ್ ಲಾಡ್, ಹೆಚ್.ಸಿ. ಮಹದೇವಪ್ಪ ಹಾಗೂ ಜಮೀರ್ ಅಹಮದ್ ಖಾನ್ ಅವರ ಹೆಸರುಗಳಿವೆ ಎನ್ನಲಾಗಿದೆ.

ಸಚಿವ ಸಂಪುಟದ ಅಂತಿಮ ಪಟ್ಟಿಗೆ ಹೈಕಮಾಂಡ್ ಯಾವ ಮಾನದಂಡ ಅನುಸರಿಸಲಿದೆ ಹಾಗೂ ಡಿಸಿಎಂ ಹುದ್ದೆಗಳ ಸಂಖ್ಯೆಯನ್ನು ಎಷ್ಟು ನಿಗದಿಪಡಿಸಲಿದೆ ಎಂಬುದು ಮುಂದಿನ ದಿನಗಳಲ್ಲಿ ಸ್ಪಷ್ಟವಾಗಲಿದೆ.

Water sports banned ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ 3 ತಿಂಗಳು ಜಲಸಾಹಸ ಕ್ರೀಡೆಗಳಿಗೆ‌ ನಿಷೇಧ

TAGGED:Fierce competition for DCM post; Lobbying for ministerial berths in full swing
Share This Article
Facebook Twitter Copy Link Print
Previous Article Water sports banned ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ 3 ತಿಂಗಳು ಜಲಸಾಹಸ ಕ್ರೀಡೆಗಳಿಗೆ‌ ನಿಷೇಧ
Next Article VASTU ಈ ಗಿಡಗಳನ್ನು ಯಾವತ್ತೂ ಗಿಫ್ಟ್ ಕೊಡಬೇಡಿ, ಇದರಿಂದ ಅಪಾಯವೇ ಹೆಚ್ಚು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?