newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯದಾದ್ಯಂತ ಮುಂಗಾರು ಪೂರ್ವ ಚಟುವಟಿಕೆಗಳು ಚುರುಕಾಗಿದ್ದು, ಜೂನ್ 2ರವರೆಗೆ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಸೇರಿದಂತೆ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ
ವಿಶೇಷವಾಗಿ ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಲಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಕರಾವಳಿ ಭಾಗದಲ್ಲಿ ಜೂನ್ 3 ರಿಂದ 6ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಸಮುದ್ರದಲ್ಲಿ ಗಾಳಿಯ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಮೀನುಗಾರರಿಗೆ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಅಥವಾ ರಸ್ತೆ ಸಂಚಾರಕ್ಕೆ ಅಡಚಣೆಯಾಗುವ ಸಾಧ್ಯತೆಯಿದೆ. ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ.
LPG Cylinder Rules ಇಂದಿನಿಂದ LPG ಸಿಲಿಂಡರ್ ನಿಯಮದಲ್ಲಿ ಮಹತ್ವದ ಬದಲಾವಣೆ