newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆಯ ಜತೆಗೆ ಸಂಪುಟ ರಚನೆಯ ಕಸರತ್ತು ಅಂತಿಮ ಘಟ್ಟ ತಲುಪಿದೆ.ಈ ನಡುವೆ ಸಚಿವ ಸಂಪುಟ ರಚನೆಯ ಕಸರತ್ತು ಕೂಡ ಆರಂಭವಾಗಿದೆ.
ಮಂತ್ರಿಗಿರಿಗಾಗಿ ಸಚಿವಾಕಾಂಕ್ಷಿಗಳಿಂದ ಭಾರಿ ಲಾಭಿ ಕೂಡ ನಡೆಯುತ್ತಿದೆ. ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣ ಪ್ರವೇಶಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರ ಪತ್ನಿಗೆ ಹೈಕಮಾಂಡ್ ನಾಯಕರು ಆಫರ್ ನೀಡಿದ್ದರು ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರಿಗೆ ರಾಜೀನಾಮೆಗೆ ಸೂಚಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಿದ್ದರಮಾಯ್ಯ ಅವರಿಗೆ ರಾಷ್ಟ್ರ ರಾಜಕಾರಣಕ್ಕೆ ಬರುವಂತೆ ಆಹ್ವಾನಿಸಿದ್ದರು. ಆದರೆ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗಲು ನಿರಾಕರಿಸ್ದು, ತಾವು ರಾಜ್ಯದಲ್ಲಿಯೇ ಇರುವುದಾಗಿ ತಿಳಿಸಿದ್ದಾರೆ. ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಬರಲು ನಿರಾಕರಿಸಿದ ಬೆನ್ನಲ್ಲೇ ರಾಹುಲ್ ಗಾಂಧಿ, ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದರು ಎಂಬ ವಿಚಾರ ತಿಳಿದುಬಂದಿದೆ.
ಒಂದು ವೇಳೆ ಸಿದ್ದರಾಮಯ್ಯಗೆ ದೆಹಲಿ ರಾಜಕಾರಣಕ್ಕೆ ಬರಲು ಸಾಧ್ಯವಾಗದಿದ್ದರೆ, ಅವರ ಪತ್ನಿಯನ್ನು ರಾಜ್ಯಸಭೆಗೆ ಕಳುಹಿಸಿಕೊಡುವಂತೆ ಗೌರವಯುತ ಆಫರ್ ನೀಡಿದ್ದರು. ಆದರೆ, ಇದನ್ನು ನಯವಾಗಿಯೇ ನಿರಾಕರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ. ನನ್ನ ಪತ್ನಿ ಎಂದಿಗೂ ರಾಜಕೀಯದಲ್ಲಿ ಇಲ್ಲ, ಆಕೆ ಹೊರಜಗತ್ತಿಗೂ ಬಂದಿಲ್ಲ. ಹೀಗಾಗಿ ಆಕೆ ರಾಜ್ಯಸಭೆ ಪ್ರವೇಶಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.
Suman Kalyanapura passes away ಖ್ಯಾತ ಹಿರಿಯ ಗಾಯಕಿ, ಕನ್ನಡತಿ ಸುಮನ್ ಕಲ್ಯಾಣಪುರ ನಿಧನ