Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?
ಕರ್ನಾಟಕಪ್ರಮುಖ

ಕೆಲವೇ ದಿನಗಳಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ?

Share
2 Min Read
SHARE

ಕರ್ನಾಟಕಕ್ಕೆ ನೂತನ ಬಿಜೆಪಿ ರಾಜ್ಯಾಧ್ಯಕ್ಷರನ್ನು ಬಿಜೆಪಿ ವರಿಷ್ಠರು ನೇಮಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದು, ಇತ್ತೀಚೆಗೆ ಬಿಜೆಪಿಯ ರಾಷ್ಟ್ರಾಧ್ಯಕ್ಷರಾದ ನಿತಿನ್ ನಬಿನ್, ರಾಜ್ಯಕ್ಕೆ ಭೇಟಿ ನೀಡಿದ ನಂತರದ ಬೆಳವಣಿಗೆ ಎನ್ನುವ ಚರ್ಚೆ ಬಿಜೆಪಿ ವಲಯದಲ್ಲಿ ನಡೆಯುತ್ತಿದೆ.

ಇತ್ತೀಚೆಗೆ ನಾಲ್ಕು ರಾಜ್ಯಗಳಿಗೆ ಬಿಜೆಪಿಯ ವರಿಷ್ಠರು ನೂತನ ಅಧ್ಯಕ್ಷರನ್ನು ನೇಮಿಸಿದ್ದರು, ಆದರೆ, ಕರ್ನಾಟಕದ ಅಧ್ಯಕ್ಷರ ಘೋಷಣೆಯನ್ನು ಹಾಗೆಯೇ ಪೆಂಡಿಂಗ್ ಇಟ್ಟಿತ್ತು. ಈಗ, ಜೂನ್ ಮಧ್ಯ ಭಾಗದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿಯಾಗಲಿದೆ ಎನ್ನುವ ಸುದ್ದಿ, ಈಗಾಗಲೇ ಹರಿದಾಡುತ್ತಿದೆ. ಇದರ ಜೊತೆಗೆ, ರಾಜ್ಯ ಬಿಜೆಪಿಗೆ ನೂತನ ಬಾಸ್ ಬರಲಿದ್ದಾರೆ ಎನ್ನುವ ಸುದ್ದಿಗೆ ರೆಕ್ಕೆಪುಕ್ಕ ಹುಟ್ಟಿಕೊಳ್ಳುತ್ತಿದೆ.

ಜೂನ್ 15 – 18ರ ಮಧ್ಯದಲ್ಲಿ ಕೇಂದ್ರ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ

ಜೂನ್ ಹದಿನೈದರಿಂದ ಹದಿನೆಂಟರ ಮಧ್ಯೆ, ಕೇಂದ್ರ ಸಚಿವ ಸಂಪುಟದಲ್ಲಿ ಮೇಜರ್ ಸರ್ಜರಿಯಾಗಲಿದೆ. ವಿವಿಧ ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಸುಮಾರು ಹತ್ತರಿಂದ ಹನ್ನೆರಡು ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆಯಿದೆ. ಜೊತೆಗೆ, ಹಾಲೀ ಸಚಿವರ ಖಾತೆಯನ್ನು ಬದಲಾಯಿಸುವ ಸಾಧ್ಯತೆಯಿದೆ. ಇದರ ಜೊತೆಗೆ, ಕರ್ನಾಟಕದಲ್ಲೂ ಬಹುಕಾಲದಿಂದ ಪೆಂಡಿಂಗ್’ನಲ್ಲಿರುವ ರಾಜ್ಯಾಧ್ಯಕ್ಷರ ಹುದ್ದೆಗೂ ಹೊಸ ಹೆಸರನ್ನು ಘೋಷಿಸುವ ಸಾಧ್ಯತೆಯ ಬಗ್ಗೆ ಸುದ್ದಿಗಳು ಕೇಳಿ ಬರುತ್ತಿದೆ.
ರಾಜ್ಯದ ಮೂವರು ಬಿಜೆಪಿ ಸಚಿವರಲ್ಲಿ ಒಬ್ಬರಿಗೆ ಕೊಕ್ ಸಾಧ್ಯತೆ

ಕನಿಷ್ಠ ಇಬ್ಬರು ಕ್ಯಾಬಿನೆಟ್ ದರ್ಜೆಯ ಸಚಿವರ ಜೊತೆಗೆ ಮೂರು ಅದಕ್ಕಿಂತ ಹೆಚ್ಚು ರಾಜ್ಯ ಸಚಿವರನ್ನು ಸಂಪುಟದಿಂದ ಕೈಬಿಡುವುದು ಬಹುತೇಕ ಕನ್ಫರ್ಮ್ ಎಂದು ಹೇಳಲಾಗುತ್ತಿದೆ. ಕ್ಯಾಬಿನೆಟ್’ನಿಂದ ಹೊರ ನಡೆಯುವ ಸಚಿವರುಗಳಿಗೆ, ರಾಜ್ಯದ ಜವಾಬ್ದಾರಿಯನ್ನು ನೀಡುವ ಬಗ್ಗೆ ಮಾತುಗಳು ಕೇಳಿ ಬರುತ್ತಿದೆ. ಇದರಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವ ಸಚಿವರುಗಳನ್ನು ಕೇಂದ್ರದಿಂದ ರಾಜ್ಯಕ್ಕೆ ಕಳುಹಿಸುವ ಸಾಧ್ಯತೆಯಿದೆ ಎನ್ನುವ ಸುದ್ದಿ, ದೆಹಲಿ ವಲಯದಲ್ಲಿ ಹರಿದಾಡುತ್ತಿದೆ.

ರಾಜ್ಯದಲ್ಲಿನ ನಾಲ್ವರು ಲೋಕಸಭಾ ಸದಸ್ಯರು ಮೋದಿ ಕ್ಯಾಬಿನೆಟ್’ನಲ್ಲಿದ್ದಾರೆ. ಅದರಲ್ಲಿ ಕ್ಯಾಬಿನೆಟ್ ದರ್ಜೆಯ ಸಚಿವರಾಗಿ ಪ್ರಲ್ಹಾದ ಜೋಶಿ, ಎಚ್.ಡಿ.ಕುಮಾರಸ್ವಾಮಿ ಅವರಿದ್ದಾರೆ. ಇನ್ನು ರಾಜ್ಯ ಸಚಿವರಾಗಿ ವಿ.ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಇದ್ದಾರೆ. ಇದರಲ್ಲಿ, ಬಿಜೆಪಿಯ ನಾಯಕರು ಮೂವರು, ಈ ಮೂವರ ಪೈಕಿ ಒಬ್ಬರನ್ನು ಕೇಂದ್ರ ಸಂಪುಟದಿಂದ ಒಬ್ಬರನ್ನು ರಾಜ್ಯ ಬಿಜೆಪಿಯ ಅಧ್ಯಕ್ಷರನ್ನಾಗಿ ಮಾಡಲಾಗುತ್ತದೆ ಎನ್ನುವ ಸುದ್ದಿ ಬಲವಾಗಿ ಹರಿದಾಡುತ್ತಿದೆ. ರಾಜ್ಯ ಬಿಜೆಪಿಗೆ ಅಧ್ಯಕ್ಷರ ಹೆಸರಿನಲ್ಲಿ ಪ್ರಲ್ಹಾದ ಜೋಶಿ ಮತ್ತು ವಿ.ಸೋಮಣ್ಣ ಅವರ ಹೆಸರೂ ಹಿಂದೆ ಕೂಡಾ, ಮಂಚೂಣಿಯಲ್ಲಿ ಕೇಳಿ ಬರುತ್ತಿತ್ತು. ಈ ಸುದ್ದಿಗೆ ಈಗ ಮತ್ತೆ ರೆಕ್ಕೆಪುಕ್ಕ ಸುತ್ತಿಕೊಂಡಿದೆ.

IPL 2026ರಲ್ಲಿ ವೈಭವ್ ಗಳಿಸಿದ ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!

TAGGED:Will there be a change in the state BJP president in a few days?
Share This Article
Facebook Twitter Copy Link Print
Previous Article IPL 2026ರಲ್ಲಿ ವೈಭವ್ ಗಳಿಸಿದ ಒಟ್ಟು ಮೊತ್ತ ಕೇಳಿದ್ರೆ ಬೆರಗಾಗ್ತೀರಾ!
Next Article ಲವ್ ಇನ್ಶೂರೆನ್ಸ್ ಕಂಪೆನಿ’ ಸಿನಿಮಾ ಸೋತಿದ್ದಕ್ಕೆ ವಿಘ್ನೇಶ್‌ ಶಿವನ್‌ಗೆ ಕೋಪ?

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?