newsics.com
ನವದೆಹಲಿ: ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಹಳೆಯ ಪಿಂಚಣಿ ಯೋಜನೆ ಮತ್ತು ಹೊಸ ಪಿಂಚಣಿ ಯೋಜನೆಗೆ ಬದಲಾಗಿ ಏಕೀಕೃತ ಪಿಂಚಣಿ ಯೋಜನೆಗೆ (ಯುಪಿಎಸ್) ಅನುಮೋದನೆ ನೀಡಲಾಗಿದೆ.
25 ವರ್ಷ ಕೆಲಸ ಮಾಡುವ ನೌಕರರಿಗೆ ಪೂರ್ಣ ಪಿಂಚಣಿ ಸಿಗಲಿದೆ ಎಂದು ಸರ್ಕಾರ ಹೇಳಿದೆ. ಯುಪಿಎಸ್ ಯೋಜನೆಯಿಂದ 23 ಲಕ್ಷ ಕೇಂದ್ರ ನೌಕರರು ಪ್ರಯೋಜನ ಪಡೆಯಲಿದ್ದಾರೆ. ಈ ಯೋಜನೆಯು 2025ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ.
ಪ್ರತಿಪಕ್ಷಗಳು ಹಳೆಯ ಪಿಂಚಣಿ ಯೋಜನೆಯಲ್ಲಿ ರಾಜಕೀಯ ಮಾಡುತ್ತಿವೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ನಮ್ಮ ಉದ್ಯೋಗಿಗಳ ಬಗ್ಗೆ ನಾವು ಗಂಭೀರವಾಗಿರುತ್ತೇವೆ. ಹೀಗಾಗಿ, ಏಕೀಕೃತ ಪಿಂಚಣಿ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ನಿರ್ಧರಿಸಿದೆ. 25 ವರ್ಷ ಕೆಲಸ ಮಾಡಿದ ಪ್ರತಿಯೊಬ್ಬ ನೌಕರನಿಗೆ ಪೂರ್ಣ ಪಿಂಚಣಿ ಸಿಗಲಿದೆ.