Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Peddi First Review ಪೆದ್ದಿ ಫಸ್ಟ್ ರಿವ್ಯೂ : ರಾಮ್ ಚರಣ್-ಶಿವಣ್ಣ ಕಾಂಬಿನೇಷನ್ ಹೇಗಿದೆ?
ಕರ್ನಾಟಕದೇಶಪ್ರಮುಖಮನರಂಜನೆ

Peddi First Review ಪೆದ್ದಿ ಫಸ್ಟ್ ರಿವ್ಯೂ : ರಾಮ್ ಚರಣ್-ಶಿವಣ್ಣ ಕಾಂಬಿನೇಷನ್ ಹೇಗಿದೆ?

Share
2 Min Read
SHARE

newsics.com/ನ್ಯೂಸಿಕ್ಸ್

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರವು ಜೂನ್ 4 ರಂದು ವಿಶ್ವಾದ್ಯಂತ ತೆರೆ ಕಾಣಲಿದೆ. ಚಿತ್ರದ ಬಿಡುಗಡೆ ದಿನಾಂಕ ಹತ್ತಿರವಾಗುತ್ತಿದ್ದಂತೆ ನಿರೀಕ್ಷೆಗಳು ಗಗನಕ್ಕೇರುತ್ತಿವೆ. ಈ ಚಿತ್ರಕ್ಕಾಗಿ ರಾಮ್ ಚರಣ್‌ಗೆ ರಾಷ್ಟ್ರ ಪ್ರಶಸ್ತಿ ಸಿಗಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಇತ್ತೀಚೆಗೆ ಬಿಡುಗಡೆಯಾದ ಟ್ರೇಲರ್ ಈ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಟಾಲಿವುಡ್ ಮತ್ತೊಂದು ಮಾಸ್, ಆಕ್ಷನ್ ಎಂಟರ್‌ಟೈನರ್ ‘ಪೆದ್ದಿ’ ಕ್ರೇಜ್ ಎಲ್ಲೆಡೆ ಜೋರಾಗಿದೆ. ‘ಪುಷ್ಷ’ ಸಿನಿಮಾದ ನಿರ್ದೇಶಕ ಸುಕುಮಾರ್ ಶಿಷ್ಯ ಬುಚ್ಚಿ ಬಾಬು ಸನಾ ನಿರ್ದೇಶಿಸಿರುವ ಈ ಸಿನಿಮಾ ರಾಮ್‌ ಚರಣ್‌ ಕರಿಯರ್‌ಗೆ ಮತ್ತೆ ಸಕ್ಸಸ್ ತಂಡು ಕೊಡುತ್ತಾ? ಅಂತ ಅವರ ಅಭಿಮಾನಿಗಳು ಎದುರು ನೋಡುತ್ತಿದ್ದಾರೆ. ಹಾಗಿದ್ದರೆ, ‘ಪೆದ್ದಿ’ ಮೊದಲ ವಿಮರ್ಶೆ ಹೇಗಿದೆ? ತಿಳಿಯುವುದಕ್ಕೆ ಮುಂದೆ ಓದಿ.

ಈ ವರ್ಷದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಸಿನಿಮಾಗಳಲ್ಲಿ ‘ಪೆದ್ದಿ’ ಕೂಡ ಒಂದು. ಅದರಲ್ಲೂ ಗ್ಲೋಬಲ್ ಸ್ಟಾರ್ ರಾಮ್‌ ಚರಣ್ ಲೀಡ್ ರೋಲ್‌ನಲ್ಲಿ ನಟಿಸಿರುವುದರಿಂದ ಸಿನಿಮಾ ನಿರೀಕ್ಷೆಗಳನ್ನಂತೂ ಹುಟ್ಟಾಕಿದೆ. RRR ಸಿನಿಮಾ ಬಳಿಕ ಗ್ಲೋಬಲ್ ಸ್ಟಾರ್ ಆಗಿ ಹೊರ ಹೊಮ್ಮಿರುವ ರಾಮ್ ಚರಣ್‌ಗೆ ‘ಪೆದ್ದಿ’ ಪ್ಯಾನ್ ಇಂಡಿಯಾ ಲೆವಲ್‌ನಲ್ಲಿ ಸದ್ದು ಮಾಡುತ್ತಾ? ಅನ್ನೋ ಕುತೂಹಲ ಮೂಡಿದೆ. ಪ್ರಾದೇಶಿಕ ಸೆನ್ಸಾರ್ ಮಂಡಳಿಯಿಂದ ‘ಪೆದ್ದಿ’ ಅತ್ಯುತ್ತಮ ಪ್ರತಿಕ್ರಿಯೆ ಸಿಕ್ಕಿದ್ದು, ಸಿನಿಮಾ ಔಟ್‌ಪುಟ್ ಅದ್ಭುತವಾಗಿ ಮೂಡಿಬಂದಿದೆ ಎಂದು ತೆಲುಗು ಫಿಲ್ಮಿಬೀಟ್ ವರದಿ ಮಾಡಿದೆ.

ದುಬೈ ಸೆನ್ಸಾರ್ ವರದಿಯ ಪ್ರಕಾರ, ಸಿನಿಮಾ ಮೊದಲ ನಿಮಿಷದಿಂದಲೇ ಪ್ರೇಕ್ಷಕರನ್ನು ಕಥೆಯೊಳಗೆ ಹಿಡಿದಿಡುತ್ತದೆ. ಚಿತ್ರದಲ್ಲಿ ಎಲ್ಲೂ ಬೋರ್ ಹೊಡೆಯುವುದಿಲ್ಲ. ಈ ಸಿನಿಮಾ ಖಂಡಿತವಾಗಿಯೂ ಬ್ಲಾಕ್‌ಬಸ್ಟರ್ ಹಿಟ್ ಆಗಲಿದೆ ಎಂದು ವರದಿ ಹೇಳಿದೆ. ಚಿತ್ರದ ಮೊದಲಾರ್ಧದಲ್ಲಿ ಕೆಲವು ಹಾಸ್ಯ ದೃಶ್ಯಗಳು ಚೆನ್ನಾಗಿ ಮೂಡಿಬಂದಿವೆ. ರಾಮ್ ಚರಣ್, ಶಿವರಾಜ್‌ಕುಮಾರ್ ಮತ್ತು ಜಗಪತಿ ಬಾಬು ನಡುವಿನ ಸಂಭಾಷಣೆಗಳು ಚಿತ್ರದ ಹೈಲೈಟ್ ಎನ್ನಲಾಗಿದೆ. ಮಧ್ಯಂತರದ ಮೊದಲು ಚಿತ್ರದಲ್ಲಿ ನಿಜವಾದ ಭಾವನಾತ್ಮಕ ಪಯಣ ಶುರುವಾಗುತ್ತದೆ. ಕಥೆ ಭಾವನಾತ್ಮಕವಾಗಿದ್ದರೂ, ಮೈ ಜುಮ್ಮೆನಿಸುವ ದೃಶ್ಯಗಳು ಸಾಕಷ್ಟಿವೆ.

ರಾಮ್ ಚರಣ್ ಜೊತೆ ಶಿವಣ್ಣನ ಪಾತ್ರದ ಮೇಲೂ ನಿರೀಕ್ಷೆಯಿದೆ. ಈ ಸಿನಿಮಾದಲ್ಲಿ ಶಿವಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದರೂ, ಶಿಳ್ಳೆಗಳು ಬೀಳೋದು ಗ್ಯಾರಂಟಿ ಅನ್ನೋ ಅಭಿಪ್ರಾಯ ವ್ಯಕ್ತವಾಗಿದೆ. ಸುಮಾರು 20 ನಿಮಿಷಗಳಷ್ಟು ಶಿವಣ್ಣ ಸ್ಕ್ರೀನ್‌ನಲ್ಲಿ ಕಾಣಿಸಿಕೊಳ್ಳುತ್ತಾರೆಂಬ ಅಭಿಪ್ರಾಯ ವ್ಯಕ್ತವಾಗಿದೆ.

ರಾಮ್‌ ಚರಣ್ ‘ಪೆದ್ದಿ’ಗೆ ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಸಿನಿಮಾ ಅನೌನ್ಸ್ ಆದ ದಿನದಿಂದಲೂ ಭಾರಿ ಕುತೂಹಲವನ್ನು ಮೂಡಿಸಿದೆ. ಕಮರ್ಷಿಯಲ್ ಅಂಶಗಳ ಜೊತೆಗೆ ಹಳ್ಳಿಯ ಹಿನ್ನೆಲೆಯುಳ್ಳ ಕಥೆಯನ್ನು ತೆರೆಮೇಲೆ ತರಲಾಗಿದೆ. ಸದ್ಯ ಸೆನ್ಸಾರ್ ಪ್ರಕ್ರಿಯೆ ಮುಗಿದಿದ್ದು, ದೇಶಾದ್ಯಂತ ಕೊನೆಯ ಹಂತದ ಪ್ರಚಾರ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ

ಮನೆ ಹರಾಜು ಮಾಡಲು ಹೋಗಿ ಬಡತನವನ್ನು ಕಂಡು ಸ್ವಂತ ಹಣದಲ್ಲೇ 4 ವರ್ಷ ಸಾಲ ಕಟ್ಟಿದ ಅಧಿಕಾರಿ

 

 

 

 

TAGGED:Peddi First Review: How is the Ram Charan-Shivanna combination?
Share This Article
Facebook Twitter Copy Link Print
Previous Article ಮನೆ ಹರಾಜು ಮಾಡಲು ಹೋಗಿ ಬಡತನವನ್ನು ಕಂಡು ಸ್ವಂತ ಹಣದಲ್ಲೇ 4 ವರ್ಷ ಸಾಲ ಕಟ್ಟಿದ ಅಧಿಕಾರಿ
Next Article ಡಿಕೆಶಿ ಪಟ್ಟಾಭಿಷೇಕ : ಕುತ್ತಿಗೆಯ ಸ್ಕಾರ್ಫ್ ಮತ್ತು ಬ್ರಾಂಡೆಡ್ ವ್ಯಾಲ್ಯೂ ಎಷ್ಟು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?