newsics.com/ನ್ಯೂಸಿಕ್ಸ್
ಬೆಂಗಳೂರು: ರಾಜ್ಯದ ಜನತೆ ಕಾತರದಿಂದ ಕಾಯುತ್ತಿದ್ದ ಮುಂಗಾರು ಮಳೆಯ ಆಗಮನಕ್ಕೆ ಕಾಲ ಸನ್ನಿಹಿತವಾಗಿದೆ. ನಿಗದಿತ ದಿನಾಂಕದಂತೆ ಜೂನ್ 5 ರಂದೇ ಮಳೆರಾಯ ಕರ್ನಾಟಕವನ್ನು ಪ್ರವೇಶಿಸಲಿದ್ದು, ರಾಜ್ಯದಲ್ಲಿ ಮಳೆಗಾಲಕ್ಕೆ ಅಧಿಕೃತ ಚಾಲನೆ ಸಿಗಲಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಇತ್ತೀಚಿನ ಮಾಹಿತಿ ಪ್ರಕಾರ, ಜೂನ್ 5 ರಂದು ಮುಂಗಾರು ಕರ್ನಾಟಕವನ್ನು ಪ್ರವೇಶಿಸಲಿದೆ. ರ್ನಾಟಕದಲ್ಲಿ ಮುಂಗಾರು ಪ್ರವೇಶ ತಡವಾಗುವುದಿಲ್ಲ. ಹವಾಮಾನ ಇಲಾಖೆಯ ಇತ್ತೀಚಿನ ವರದಿಯ ಪ್ರಕಾರ, ಜೂನ್ 5 ರಂದೇ ಮುಂಗಾರು ಮಳೆಯು ರಾಜ್ಯವನ್ನು ಪ್ರವೇಶಿಸಲಿದ್ದು, ಕೃಷಿ ಚಟುವಟಿಕೆಗಳಿಗೆ ಮರುಜೀವ ಸಿಗಲಿದೆ.
ಮುಂಗಾರು ಮಳೆಯು ಜೂನ್ 5 ರಂದು ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳ ಮೂಲಕ ಕರ್ನಾಟಕವನ್ನು ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಮುಂಗಾರು ಪ್ರವೇಶದೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ.ರಾಜ್ಯದ ಹಲವೆಡೆ ಮಳೆಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಲಹೆ ನೀಡಿದೆ.
DK Shivakumar Oath ನಾಳೆ ಡಿ.ಕೆ. ಶಿವಕುಮಾರ್ ಪಟ್ಟಾಭಿಷೇಕ : ಲೋಕಭವನದಲ್ಲಿ ಭರ್ಜರಿ ಸಿದ್ಧತೆ