Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್
ಕರ್ನಾಟಕಪ್ರಮುಖ

ಸಿಎಂ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಜಿ ಪರಮೇಶ್ವರ್ ಮಾರ್ಮಿಕ ವಿಡಿಯೋ ವೈರಲ್

Share
1 Min Read
SHARE

newsics.com/ನ್ಯೂಸಿಕ್ಸ್

ರಾಜ್ಯ ರಾಜಕಾರಣದಲ್ಲಿ ತೀವ್ರ ಬದಲಾವಣೆಗಳಾಗುತ್ತಿದ್ದು, ಸಿದ್ದರಾಮಯ್ಯ  ಅವರ ರಾಜೀನಾಮೆ ಬಳಿಕ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಜ್ಜಾಗುತ್ತಿದ್ದಾರೆ. ಈ ನಡುವೆ ಹಿರಿಯ ಕಾಂಗ್ರೆಸ್ ನಾಯಕ ಡಾ. ಜಿ. ಪರಮೇಶ್ವರ್ ಅವರಿಗೆ ಮತ್ತೆ ಮುಖ್ಯಮಂತ್ರಿ ಸ್ಥಾನ ಕೈತಪ್ಪಿರುವುದಕ್ಕೆ ಅವರ ಅಭಿಮಾನಿಗಳಲ್ಲಿ ತೀವ್ರ ಅಸಮಾಧಾನ ಮೂಡಿದೆ.

ಇತ್ತೀಚೆಗಷ್ಟೇ ಪರಮೇಶ್ವರ್ ಅವರನ್ನು ಮಹಾಭಾರತದ ‘ಕರ್ಣ’ನಿಗೆ ಹೋಲಿಸಿ ವಿಡಿಯೋ ಮಾಡಿದ್ದ ಅಭಿಮಾನಿಗಳು, ಈಗ ಅವರ ಹಳೆಯ ಮಾರ್ಮಿಕ ಭಾಷಣದ ಮತ್ತೊಂದು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಪ್ರಮಾಣದಲ್ಲಿ ವೈರಲ್ ಮಾಡುತ್ತಿದ್ದಾರೆ.

ವಿಡಿಯೋದಲ್ಲೇನಿದೆ?

ವೈರಲ್ ಆಗಿರುವ ವಿಡಿಯೋದಲ್ಲಿ ಡಾ. ಜಿ. ಪರಮೇಶ್ವರ್ ಅವರು ಸಮುದಾಯದ ಹೋರಾಟ ಹಾಗೂ ರಾಜಕೀಯ ಅನ್ಯಾಯದ ಕುರಿತು ಅತ್ಯಂತ ಬೇಸರದಿಂದ ಮಾತನಾಡಿದ್ದಾರೆ. ‘ತುಳಿತಾರೆ, ತುಳಿಸಿಕೊಳ್ಳಬೇಕು. ಆದರೆ ಎಷ್ಟು ಬಾರಿ ಅಂತ ತುಳಿಸಿಕೊಳ್ಳಬೇಕು? ನಮ್ಮ ಹಿರಿಯಣ್ಣ ಮಲ್ಲಿಕಾರ್ಜುನ ಖರ್ಗೆ ಅವರು ಒಂದು ಕಾಲು ಎತ್ತಿ ಇಟ್ಟಿದ್ದರೆ ಮುಖ್ಯಮಂತ್ರಿ ಆಗುತ್ತಿದ್ದರು ರೀ. ಆದರೆ ಅವರು ತಪ್ಪಿಸಿಕೊಂಡರು. ಇನ್ನು ನನಗೆ ಮೂರು ಬಾರಿ ಮುಖ್ಯಮಂತ್ರಿ ಸ್ಥಾನ ತಪ್ಪಿ ಹೋಯಿತು. ಅಪ್ಪಾ! ಹಂಗೂ ಹಿಂಗೂ ಹೆಂಗೋ ಮಾಡಿಕೊಂಡು, ಕೊನೆಗೆ ಬೇಡ ಬೇಡ ಅಂದರೂ ನನ್ನನ್ನು ಉಪಮುಖ್ಯಮಂತ್ರಿ ಮಾಡಿದರು. ಆದರೆ ಇಂತಹ ಸ್ಥಿತಿಯನ್ನು ಎದುರಿಸಲು ಹೋರಾಟ ಎನ್ನುವುದು ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಬರಬೇಕು’ ಎಂದು ಪರಮೇಶ್ವರ್ ಭಾಷಣ ಮಾಡುತ್ತಿರುವುದು ವಿಡಿಯೋದಲ್ಲಿವೆ.

ರಾಜಕೀಯ ವಲಯದಲ್ಲಿ ಭಾರಿ ಸಂಚಲನ

ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಿರುವ ಈ ನಿರ್ಣಾಯಕ ಸಂದರ್ಭದಲ್ಲೇ, ಪರಮೇಶ್ವರ್ ಅವರ ಅಭಿಮಾನಿಗಳ ಅಧಿಕೃತ ಖಾತೆಯಿಂದ ಈ ವಿಡಿಯೋ ಹೊರಬಿದ್ದಿರುವುದು ತೀವ್ರ ಕುತೂಹಲ ಮೂಡಿಸಿದೆ. ಸದ್ಯ ದೆಹಲಿಯಲ್ಲಿ ಸಚಿವ ಸಂಪುಟದ ಬಿರುಸಿನ ಚರ್ಚೆಗಳು ನಡೆಯುತ್ತಿದ್ದು, ಸಿದ್ದರಾಮಯ್ಯ ಅವರು ತಮ್ಮ ಬಣದ ಪರಮೇಶ್ವರ್ ಅವರಿಗೆ ಮತ್ತೊಮ್ಮೆ ಉಪಮುಖ್ಯಮಂತ್ರಿ (DCM) ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ. ಪದೇ ಪದೇ ಹಿರಿಯ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈತಪ್ಪುತ್ತಿರುವುದರ ವಿರುದ್ಧ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

https://www.facebook.com/reel/3039618499564822/?mibextid=ZZyLBrZZyLBr

 

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

TAGGED:G Parameshwara's mysterious video goes viral after losing CM post
Share This Article
Facebook Twitter Copy Link Print
Previous Article ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
Next Article ನಾಳೆ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ ಪ್ರಮಾಣವಚನ: ಲೋಕಭವನಕ್ಕೆ ಬರುವ ಅತಿಥಿಗಳಿಗೆ ಮೂರು ರೀತಿಯ ಪಾಸ್ ವಿತರಣೆ

Popular Posts

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read

Ind vs Zim ಟೀಮ್ ಇಂಡಿಯಾದಲ್ಲಿ ಭಾರೀ ಸರ್ಜರಿ! 6 ಮಂದಿ ಔಟ್‌, ಯಾರೆಲ್ಲ ಸೇರಿದ್ರು?

2 Min Read

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read

You Might Also Like

ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read
ಪ್ರಮುಖಕರ್ನಾಟಕ

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read
ಪ್ರಮುಖCrimeಕರ್ನಾಟಕ

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read
ಪ್ರಮುಖದೇಶ

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

Social Networks

Facebook-f Instagram Twitter
Welcome Back!

Sign in to your account

Lost your password?