newsics.com/ನ್ಯೂಸಿಕ್ಸ್
ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಚಾಮರಾಜನಗರ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಸಿಡಿಲು ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಈ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಇನ್ನು ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕಿಳಿಯದಂತೆ ಸೂಚಿಸಲಾಗಿದೆ.
Fertility Rate ಭಾರತದಲ್ಲಿ ಕುಸಿಯುತ್ತಿದೆ ಫಲವತ್ತತೆ ದರ; ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯಲ್ಲಿ ಬಯಲು