newsics.com/ನ್ಯೂಸಿಕ್ಸ್
ಬೆಂಗಳೂರು: ಇಂದು ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ. ಖಾದರ್ ಅವರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.
ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಸಚಿವ ಸ್ಥಾನ ಸಿಗುವ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾದ ತಕ್ಷಣವೇ ಖಾದರ್ ಅವರು ತಮ್ಮ ಸ್ಪೀಕರ್ ಹುದ್ದೆಯನ್ನು ತೊರೆಯಲಿದ್ದಾರೆ ಮೂಲಗಳು ತಿಳಿಸಿವೆ.
ನಿಯಮಾವಳಿಗಳ ಪ್ರಕಾರ, ಯು.ಟಿ. ಖಾದರ್ ಅವರು ಇಂದು ಮಧ್ಯಾಹ್ನದ ವೇಳೆಗೆ ವಿಧಾನಸಭೆಯ ಉಪಸಭಾಪತಿಗಳಿಗೆ (ಡೆಪ್ಯುಟಿ ಸ್ಪೀಕರ್) ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಲಿದ್ದಾರೆ ಎನ್ನಲಾಗಿದೆ.
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಸಿಎಂ ಪ್ರಮಾಣವಚನ ಬೆನ್ನಲ್ಲೇ ಸಂಪುಟ ವಿಸ್ತರಣೆ ಕಸರತ್ತು ಚುರುಕಾಗಿದ್ದು, ಡಿ.ಕೆ. ಶಿವಕುಮಾರ್ ಅವರ ಜೊತೆಗೆ ಸುಮಾರು 12 ರಿಂದ 13 ಮಂದಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.
Rain Alert ರಾಜ್ಯದಲ್ಲಿ ಮುಂದಿನ ಕೆಲವು ದಿನಗಳ ಕಾಲ ಬಿರುಗಾಳಿ ಸಹಿತ ಭಾರಿ ಮಳೆ : 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್