newsics.com/ನ್ಯೂಸಿಕ್ಸ್
ನವದೆಹಲಿ: ಭೀಕರ ಅಗ್ನಿ ಅವಘಡದಲ್ಲಿ 10 ಜನರು ಸಾವನ್ನಪ್ಪಿದ್ದು, ಮತ್ತು 11 ಜನರು ಗಾಯಗೊಂಡಿರುವ ಘಟನೆ ದಕ್ಷಿಣ ದೆಹಲಿಯ ಹೌಜ್ ರಾಣಿ ಪ್ರದೇಶದಲ್ಲಿರುವ ಬಹುಮಹಡಿಯ ಲೆಮನ್ ಗ್ರೀನ್ ರೆಸ್ಟೋರೆಂಟ್ ನಲ್ಲಿ ನಡೆದಿದೆ.
ಬುಧವಾರ ಮುಂಜಾನೆ ಸುಮಾರು 8.50ರ ಸುಮಾರಿಗೆ ರೆಸ್ಟೋರೆಂಟ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬೆಳಗಿನ ಉಪಾಹಾರದ ಸಮಯದಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ, ಘಟನೆಯ ತೀವ್ರತೆ ಹೆಚ್ಚಾಗಿದೆ ಎನ್ನಲಾಗಿದೆ.
ಮುಂಜಾನೆ ಸುಮಾರು 9.45 ಕ್ಕೆ ದೆಹಲಿ ಅಗ್ನಿಶಾಮಕ ಸೇವೆಗೆ (DFS) ಕರೆ ಬಂದ ತಕ್ಷಣ, ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ನೆಹರೂ ಪ್ಲೇಸ್ ಅಗ್ನಿಶಾಮಕ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ವಿಭಾಗೀಯ ಅಧಿಕಾರಿ (DO) ರವೀಂದರ್ ಅವರ ನೇತೃತ್ವದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಹಿರಿಯ ಕಾಂಗ್ರೆಸ್ ನಾಯಕ ಬಿಕೆ ಹರಿ ಪ್ರಸಾದ್ ಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ