Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!
ಕರ್ನಾಟಕದೇಶಪ್ರಮುಖ

No women ministers ಮಹಿಳಾಪರ ‘ಗ್ಯಾರಂಟಿ’ಗಳಿದ್ದರೂ ಡಿಕೆ ಸಂಪುಟದಲ್ಲಿ ಮಹಿಳೆಗಿಲ್ಲ ಸ್ಥಾನ!

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದ್ದು, ಅವರ ಹೊಸ ಮಂತ್ರಿಮಂಡಲದಲ್ಲಿ ಓರ್ವ ಮಹಿಳೆಗೂ ಸ್ಥಾನ ಸಿಕ್ಕಿಲ್ಲ.

ಹೈಕಮಾಂಡ್ ಜತೆ ಸುದೀರ್ಘವಾಗಿ ಚರ್ಚೆ ನಡೆಸಿ ಅಳೆದು ತೂಗಿ ಅಂತಿಮಗೊಳಿಸಲಾಗಿದ್ದರೂ ಮಹಿಳೆಗೆ ಸ್ಥಾನ ಸಿಗದಿರುವುದು ಈಗ ಚರ್ಚೆಯ ವಿಷಯವಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಒಟ್ಟು 8 ಜನ (ಐವರು ವಿಧಾನಸಭೆ ಸದಸ್ಯರು, ಮೂವರು ವಿಧಾನ ಪರಿಷತ್ ಸದಸ್ಯರು) ಮಹಿಳಾ ಶಾಸಕರಿದ್ದರೂ ಮೊದಲ ಹಂತದ ಸಚಿವ ಸಂಪುಟ ರಚನೆಯಲ್ಲಿ ಯಾವ ಮಹಿಳಾ ಶಾಸಕರಿಗೂ ಅವಕಾಶ ಸಿಕ್ಕಿಲ್ಲ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮೊದಲ ಹಂತದಲ್ಲಿಯೇ ಸಚಿವ ಸ್ಥಾನ ನೀಡಲಾಗುತ್ತದೆ ಎಂದು ಹೇಳಲಾಗಿದ್ದರೂ ಹಾಗೆ ಆಗಿಲ್ಲ.

ಸದ್ಯದಲ್ಲಿಯೇ ನಡೆಯುವ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಮಹಿಳೆಗೆ ಮಂತ್ರಿಯಾಗುವ ಅವಕಾಶ ಸಿಗಬಹುದು ಎಂದು ಹೇಳಲಾಗುತ್ತಿದೆ. ಮಹಿಳೆಯರ ಕೋಟಾದಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್, ಹಿರಿಯ ಮುಖಂಡರಾಗಿರುವ ಕೆ.ಹೆಚ್.ಮುನಿಯಪ್ಪನವರ ಪುತ್ರಿ ರೂಪಕಲಾ ಶಶಿಧರ್, ಹಿರಿಯ ನಾಯಕಿ ಮೋಟಮ್ಮನವರ ಪುತ್ರಿ ನಯನಾ ಮೋಟಮ್ಮ ಮತ್ತು ಕನೀಜ್ ಫಾತೀಮಾ ಇದ್ದಾರೆ. ಇದಲ್ಲದೆ ವಿಧಾನ ಪರಿಷತ್ ಸದಸ್ಯೆಯಾಗಿ ಚಿತ್ರನಟಿ ಉಮಾಶ್ರೀ, ಡಾ.ಆರತಿ ಕೃಷ್ಣ, ಬಲ್ಕೀಸ್ ಬಾನು, ಪಕ್ಷೇತರ ಶಾಸಕಿಯಾಗಿ ಗೆದ್ದು ನಂತರ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರಿ ಲತಾ ಮಲ್ಲಿಕಾರ್ಜುನ್ ಸಹ ಇದ್ದಾರೆ.
ಸಚಿವರಾಗಲು ಮುನಿಯಪ್ಪನವರ ಪುತ್ರಿಯಾದ ರೂಪಕಲಾ ಶಶಿಧರ್ ಅವರು ಸಾಕಷ್ಟು ಪ್ರಯತ್ನ ನಡೆಸಿದ್ದರು. ಆದರೆ ಅಂತಿಮವಾಗಿ ಕೆ.ಹೆಚ್​.ಮುನಿಯಪ್ಪನವರಿಗೇ ಮತ್ತೆ ಸಚಿವರಾಗುವ ಅವಕಾಶ ಸಿಕ್ಕಿದ್ದರಿಂದ ರೂಪಕಲಾ ಅವರಿಗೆ ಮಂತ್ರಿ ಭಾಗ್ಯ ದೊರೆಯುವುದು ಕಷ್ಟವಾಗಿದೆ. ನಯನ ಮೋಟಮ್ಮ ಸಹ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ. ಆದರೆ ಮೊದಲ ಬಾರಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದಿಲ್ಲ ಎನ್ನುವ ಪಕ್ಷದ ನಿಯಮ ನಯನಾ ಮೋಟಮ್ಮನವರಿಗೆ ಅಡ್ಡಿಯಾಗುವ ಸಾಧ್ಯತೆಗಳಿವೆ.

ಕಾಂಗ್ರೆಸ್ ಸರ್ಕಾರದಲ್ಲಿ ಜಾರಿಗೆ ತರಲಾದ ಗ್ಯಾರಂಟಿ ಯೋಜನೆಗಳು ಹೆಚ್ಚಾಗಿ ಮಹಿಳಾ ಕೇಂದ್ರಿತ ಯೋಜನೆಗಳೆ ಆಗಿವೆ. ಮಹಿಳೆಯರಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ”ಗೃಹಲಕ್ಷ್ಮಿ” ಗ್ಯಾರಂಟಿ ಯೋಜನೆ ಮತ್ತು ಮಹಿಳಾ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ”ಶಕ್ತಿ” ಗ್ಯಾರಂಟಿ ಯೋಜನೆ ಮಹಿಳೆಯರಿಗಾಗಿಯೇ ಜಾರಿಗೆ ತಂದಿರುವ ಕಾರ್ಯಕ್ರಮಗಲಾಗಿವೆ. ಆದರೆ ಡಿಕೆಶಿ ನೇತೃತ್ವದ 13 ಜನ ಸಚಿವರ ಹೊಸ ಮಂತ್ರಿಮಂಡಲದಲ್ಲಿ 8 ಜನ ಶಾಸಕರಿರುವರಲ್ಲಿ ಯಾವ ಮಹಿಳಾ ಶಾಸಕರಿಗೂ ಮಂತ್ರಿಯಾಗುವ ಸೌಭಾಗ್ಯ ದೊರೆಯದಿರುವುದು ವಿಪರ್ಯಾಸ.

ನೂತನ ಸಚಿವರಿಗೆ ವೇದಿಕೆ ಮೇಲೆಯೇ ಖಡಕ್ ಕ್ಲಾಸ್ ತೆಗೆದುಕೊಂಡ ರಾಜ್ಯಪಾಲರು

 

TAGGED:Despite 'guarantees' for womenthere is no place for women in the DK cabinet!
Share This Article
Facebook Twitter Copy Link Print
Previous Article ನೂತನ ಸಚಿವರಿಗೆ ವೇದಿಕೆ ಮೇಲೆಯೇ ಖಡಕ್ ಕ್ಲಾಸ್ ತೆಗೆದುಕೊಂಡ ರಾಜ್ಯಪಾಲರು
Next Article ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

Popular Posts

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?