newsics.com/ನ್ಯೂಸಿಕ್ಸ್
ಇಂದು ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇವರೊಂದಿಗೆ ಜಿ. ಪರಮೇಶ್ವರ್ ಅವರು ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ‘ಎಂ.ಬಿ. ಪಾಟೀಲ್ ಅವರಿಗೆ ರಾಜ್ಯಪಾಲ ಥಾವರ್‌ಚಾಂದ್ ಗೆಹೋಟ್ ಮೇಲೆಯೇ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.
ಡಿ.ಕೆ ಶಿವಕುಮಾರ್ ಸಂಪುಟದಲ್ಲಿ ಸಂಪುಟದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ, ಎಂ.ಬಿ ಪಾಟೀಲ್ ಅವರು ವಿಶ್ವಗುರು, ಅಣ್ಣ ಬಸವಣ್ಣ, ಬಸವಾದಿ ಶರಣರು ಲಿಂಗೈಕ್ಯ ಸಿದ್ದೇಶ್ವರ ಸ್ವಾಮೀಜಿ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಆದ್ರೆ, ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯಪಾಲರು, “ಪ್ರಮಾಣವಚನದಲ್ಲಿ ಲಿಖಿತ ಪ್ರತಿಯ ಅಂಶವನ್ನು ಮಾತ್ರವೇ ಓದುವಂತೆ” ಸೂಚನೆ ನೀಡಿದರು.
ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರಾಗಿದ್ದ ಎಂ.ಬಿ.ಪಾಟೀಲ, ಈಗ ಡಿಕೆ ಶಿವಕುಮಾರ್ ಸಂಪುಟದಲ್ಲಿಯೂ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಎಂಬಿ ಪಾಟೀಲ ವಿಶ್ವಗುರು ಬಸವಣ್ಣ ಹಾಗೂ ಸಿದ್ದೇಶ್ವರ ಸ್ವಾಮಿಗಳ ಹೆಸರಿನಲ್ಲಿ ಸಚಿವರಾಗಿ ರಾಜ್ಯಪಾಲರಿಂದ ಪ್ರಮಾಣ ವಚನ ಸ್ವೀಕರಿಸಿದ್ರು.
ಸಿಎಂ ಡಿಕೆ ಶಿವಕುಮಾರ್ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಬೆನ್ನಲ್ಲೇ ಎರಡನೆಯವರಾಗಿ ಡಾ. ಜಿ. ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿಸಿದ್ರು. ಉಪ ಮುಖ್ಯಮಂತ್ರಿಯಾಗಿ ಪರಮೇಶ್ವರ್ ಪ್ರಮಾಣ ವಚನ ಸ್ವೀಕರಿದ್ದು, ಡಾ. ಬಿಆರ್ ಅಂಬೇಡ್ಕರ್ ಹೆಸರಲ್ಲಿ ಪರಮೇಶ್ವರ್ ಅಧಿಕಾರ ಸ್ವೀಕರಿಸಿದರು.
ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕರಿಸಿದ್ದಾರೆ. ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಪ್ರತಿಜ್ಞಾ ವಿಧಿ ಬೋಧಿಸಿದ್ರು. ಖರ್ಗೆ, ರಾಹುಲ್ ಗಾಂಧಿ, ಸಿದ್ದರಾಮಯ್ಯ ಸೇರಿದಂತೆ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Sushmita Sen and Modi ಅವಳು ನನ್ನ ಹಣ ನೋಡಿ ಬರಲಿಲ್ಲ, ಆಕೆಯೇ ಶ್ರೀಮಂತೆ!