Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

Share
2 Min Read
SHARE

newsics.com/ನ್ಯೂಸಿಕ್ಸ್

ಬಳ್ಳಾರಿ: ಬರ್ತಡೇ ದಿನ ಪಾರ್ಟಿ ನೆಪದಲ್ಲಿ ಪತ್ನಿಯನ್ನೇ ಪತಿ ಕೊಲೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ  ನಡೆದಿದೆ.

ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಆಫ್ರೀನ್ ಬಾನು ಕೊಲೆಯಾದ ದುರ್ದೈವಿ. ಪತಿ ನೂರ್ ಅಹ್ಮದ್ ಕೊಲೆ ಮಾಡಿರುವ ಆರೋಪಿ. ಇಬ್ಬರು ಪ್ರೀತಿಸಿ, ಎರಡು ವರ್ಷಗಳ ಹಿಂದೆ ಮದ್ವೆಯಾಗಿದ್ದರು. ದಂಪತಿಗೆ ಎಂಟು ತಿಂಗಳ ಗಂಡು ಮಗು ಇದೆ ಎಂದು ತಿಳಿದುಬಂದಿದೆ.

ಇತ್ತೀಚಿಗೆ ಇಬ್ಬರ ಮಧ್ಯೆ ಗಲಾಟೆಯಾಗಿತ್ತು. ಇದೇ ಕಾರಣದಿಂದ ಪತ್ನಿ ಆಫ್ರೀನ್ ಬಾನು ತವರು ಮನೆ ಸೇರಿದ್ದಳು. ಬಳಿಕ ಮೇ 21ರಂದು ಪತ್ನಿಯ ಹುಟ್ಟುಹಬ್ಬದ ಹಿನ್ನೆಲೆ ಆಕೆಗೆ ಕರೆ ಮಾಡಿ, ಮನೆಗೆ ಬರ್ತಿನಿ ಅಲ್ಲೇ ಆಚರಣೆ ಮಾಡೋಣ ಎಂದು ಹೇಳಿದ್ದ. ಗಂಡ ಬರುವ ಖುಷಿಯಲ್ಲಿ ಆಫ್ರೀನ್ ಬಾನು ಒಳ್ಳೆಯ ಅಡುಗೆ ಮಾಡಿ, ಗಂಡನಿಗೆ ಊಟ ಮಾಡಿಸಿ, ಕೇಕ್ ಕಟ್ ಮಾಡಿದ್ದರು.

ಅದೇ ದಿನ ಸಂಜೆ ಪಾರ್ಟಿ ಕೊಡಿಸುತ್ತೇನೆ ಎಂದು ಹೇಳಿ ಹೊರಗೆ ಕರೆದುಕೊಂಡು ಹೋಗಿದ್ದ. ರಾತ್ರಿಯಾದ್ರೂ ಮನೆಗೆ ವಾಪಾಸ್ ಆಗದೇ ಇದ್ದಾಗ ಆಫ್ರೀನ್ ಬಾನು ಕುಟುಂಬಸ್ಥರು ಆತಂಕಗೊಂಡು, ಅಳಿಯ ನೂರ್ ಅಹ್ಮದ್‌ಗೆ ಕರೆ ಮಾಡಿದ್ದಾರೆ. ಆಗ ಆತ ನನಗೇನೂ ಗೊತ್ತಿಲ್ಲ, ಎಲ್ಲರೂ ಸೇರಿ ಹುಡುಕೋಣ ಎಂದು ನಾಟಕ ಆಡಿದ್ದ. ಆದರೆ ಅಷ್ಟರಲ್ಲಾಗಲೇ ಆಫ್ರೀನ್ ಬಾನುಳನ್ನ ಕೊಲೆ ಮಾಡಿ, ಕುಡತಿನಿ ಸಮೀಪದ ನಿರ್ಜನ ಪ್ರದೇಶನವೊಂದರಲ್ಲಿ ಶವ ಬಿಸಾಡಿ ಬಂದಿದ್ದ.

ಶವ ಬಿಸಾಕಿದ ಸ್ಥಳದಿಂದ 10 ಕಿ.ಮೀಟರ್ ದೂರದಲ್ಲಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿ, ಆ ಬಳಿಕ ತನ್ನದೇ ಬೈಕ್‌ನಲ್ಲಿ ಶವ ತಂದು ಬಿಸಾಕಿದ್ದ. ಕೊನೆಗೆ ಏನೂ ಆಗಿಲ್ಲ ಎನ್ನುವಂತೆ ಮನೆಗೆ ಬಂದು ಆಫ್ರೀನ್ ಹುಡುಕಾಡುವ ನಾಟಕ ಮಾಡಿದ್ದ. ಬಳಿಕ ಆಫ್ರೀನ್ ಕುಟುಂಬಸ್ಥರು ನೂರ್ ಅಹ್ಮದ್ ಮೇಲೆ ಅನುಮಾನಗೊಂಡು ದೂರು ಕೊಟ್ಟಿದ್ದರು.

ದೂರಿನ ಆಧಾರದ ಮೇಲೆ ಪೊಲೀಸರು ವಿಚಾರಣೆ ನಡೆಸಿದಾಗ ಆರೋಪಿ ಅಹ್ಮದ್ ಕೊಲೆ ಸತ್ಯ ಬಾಯ್ಬಿಟ್ಟಿದ್ದಾನೆ. ಕೊಲೆ ನಡೆದ 13 ದಿನಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಸಂಪೂರ್ಣ ಕೊಳೆತು ಹೋಗಿದೆ. ಈ ಸಂಬಂಧ ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ನೂರ್ ಅಹ್ಮದ್‌ನನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

TAGGED:Sinful husband cuts wife's birthday cakethen cuts himself
Share This Article
Facebook Twitter Copy Link Print
Previous Article Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!
Next Article ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

Popular Posts

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

70ರೂ. ಇದ್ದ ಕಾಯಿ ದಿಢೀರ್ 30ರೂಗೆ ಇಳಿಕೆ, ಕಾರಣವೇನು?

3 Min Read

ನಾಲ್ವರಿಂದ ಯುವತಿ ಮೇಲೆ 10 ತಿಂಗಳು ಗ್ಯಾಂಗ್‌ ರೇಪ್

2 Min Read

ಸ್ನಾನದ ನೀರಿಗೆ ಒಂದು ಚಿಟಿಕೆ ಕರ್ಪೂರ ಸೇರಿಸಿ; ಪ್ರಯೋಜನ ಸಾಕಷ್ಟಿವೆ!

2 Min Read

You Might Also Like

ಪ್ರಮುಖಮನರಂಜನೆ

ಡಿವೋರ್ಸ್​ ಕೋರಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ-ಸುಮಂತ್

1 Min Read
ವಿದೇಶಪ್ರಮುಖ

ರೆಡ್‌ ಝೋನ್‌ಗೆ ಎಂಟ್ರಿ ಕೊಡಲಿದೆ ಜಗತ್ತು, ಜೂನ್‌ನಿಂದ ವಿನಾಶ ಆರಂಭ

3 Min Read
ಪ್ರಮುಖಮನರಂಜನೆ

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read
ಕರ್ನಾಟಕಪ್ರಮುಖ

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?