Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಅಲ್ಪ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಇಂದಿನ ಶುದ್ಧ ಚಿನ್ನದ ಬೆಲೆ ಎಷ್ಟಿದೆ ?
ಪ್ರಮುಖ

ಅಲ್ಪ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ಇಂದಿನ ಶುದ್ಧ ಚಿನ್ನದ ಬೆಲೆ ಎಷ್ಟಿದೆ ?

Share
2 Min Read
SHARE

ಭಾರತದಲ್ಲಿ ಇಂದು ಚಿನ್ನದ ದರ(Gold Rate today)ದಲ್ಲಿ ಅಲ್ಪ ಇಳಿಕೆ ಕಂಡಿದೆ.

ಅದೇ ರೀತಿಯಲ್ಲಿ ಅಂತರರಾಷ್ಟ್ರೀಯ ಷೇರು ಮಾರುಕಟ್ಟೆಗಳು ಚೇತರಿಕೆ ಕಂಡಾಗ ಮತ್ತು ಡಾಲರ್ ಮೌಲ್ಯ ಬಲಗೊಂಡಾಗ ಹೊಡಿಕೆದಾರರು ಚಿನ್ನದ ಬದಲು ಷೇರುಗಳತ್ತ ಆಕರ್ಷಿತರಾಗುತ್ತಾರೆ, ಇದರಿಂದ ಚಿನ್ನದ ಬೆಲೆ ಕುಸಿತ ಕಾಣುತ್ತಿದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಹಾಗೆಯೇ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾದಾಗ, ಹೂಡಿಕೆದಾರರು ಒಲವು ಆ ಕಡೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.

ಬೆಂಗಳೂರಿನಲ್ಲಿ ಇಂದಿನ ಚಿನ್ನದ ಬೆಲೆ

ಕಳೆದ ಎರಡು ದಿನಗಳಿಂದ ಬೆಂಗಳೂರು ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಬದಲಾವಣೆಯಾಗಿರಲಿಲ್ಲ. ಯಥಾಸ್ಥಿತಿ ಮುಂದುವರೆದಿತ್ತು. ಆದರೆ, ಇಂದು ಬೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಎಂಸಿಎಕ್ಸ್ ಮಾರುಕಟ್ಟೆ ಆರಂಭದ ಸಂದರ್ಭದಲ್ಲಿಯೇ ಇಳಿಕೆ ದಾಖಲಿದೆ.

24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತಿ ಗ್ರಾಂಗೆ 11 ರೂಪಾಯಿ ಇಳಿಕೆ ದಾಖಲಿಸಿದರೆ, 22 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗಿದೆ. ಈ ಅಲ್ಪ ಇಳಿಕೆಯು ಆಭರಣ ಪ್ರಿಯರಲ್ಲಿ ವಿಶೇಷವಾಗಿ ಮಹಿಳೆಯರಲ್ಲಿ ಸಂತಸ ತಂದಿದೆ.
22 ಕ್ಯಾರೆಟ್ ಚಿನ್ನದ ಬೆಲೆ ಬೆಂಗಳೂರು ಮಾರುಕಟ್ಟೆಯಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 11 ರೂಪಾಯಿ ಇಳಿಕೆ ಕಂಡು 15,611 ರೂಪಾಯಿ ದಾಖಲಿಸಿದೆ. ಅದೇ ರೀತಿಯಲ್ಲಿ 22 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಬೆಲೆಯಲ್ಲಿ 10 ರೂಪಾಯಿ ಇಳಿಕೆಯಾಗಿದ್ದು, 14,310 ರೂಪಾಯಿ ದಾಖಲಾಗಿದೆ. 18 ಕ್ಯಾರೆಟ್ ಚಿನ್ನದ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 9 ರೂಪಾಯಿ ಇಳಿಕೆ ಕಂಡಿದ್ದು 11,708 ರೂಪಾಯಿ ದಾಖಲಾಗಿದೆ.

ಅದೇ ರೀತಿಯಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 110 ರೂಪಾಯಿ ಇಳಿಕೆ ಕಂಡಿದ್ದು, 1,56,110 ರೂಪಾಯಿ ದಾಖಲಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 100 ರೂಪಾಯಿ ಇಳಿಕೆ ಕಂಡಿದ್ದು, 1,43,100 ರೂಪಾಯಿ ದಾಖಲಾಗಿದೆ. ಅದೇ ರೀತಿಯಲ್ಲಿ 18 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆಯಲ್ಲಿ 90 ರೂಪಾಯಿ ಇಳಿಕೆ ಕಂಡಿದ್ದು, 1,17,080 ರೂಪಾಯಿ ದಾಖಲಾಗಿದೆ.

ಈ ತಿಂಗಳ ಮೊದಲ ದಿನ ಅಂದರೆ ಜೂನ್ 1 ರಂದು 24 ಕ್ಯಾರೆಟ್ ಪ್ರತಿ ಗ್ರಾಂ ಚಿನ್ನದ ಬೆಲೆಯಲ್ಲಿ 82 ರೂಪಾಯಿ ಮತ್ತು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ 75 ರೂಪಾಯಿ ಇಳಿಕೆ ಕಂಡಿತ್ತು. ಅದಾದ ಬಳಿಕ ಎರಡು ದಿನ ಚಿನ್ನದ ಬೆಲೆಯಲ್ಲಿ ಯಾವುದೇ ರೀತಿಯ ಏರಿಳಿತ ಕಂಡುಬಂದಿರಲಿಲ್ಲ. ಇದೀಗ ಇಂದು ಜೂನ್ 4 ರಂದು ಮತ್ತೆ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದೆ.

ಕಳೆದ ಒಂದು ವಾರದಿಂದ ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಾಣುತ್ತಿಲ್ಲ. ಬದಲಾಗಿ ಸ್ಥಿರವಾಗಿದೆ. ಪ್ರತಿ ಗ್ರಾಂ ಬೆಳ್ಳಿಯ ಬೆಲೆ 280 ರೂಪಾಯಿ ದಾಖಲಾಗಿದೆ. 10 ಗ್ರಾಂ ಬೆಳ್ಳಿ ಬೆಲೆ 2,800 ರೂಪಾಯಿ ದಾಖಲಾಗಿದೆ.

ಬೆಲೆ ಇಳಿಕೆ ಮತ್ತು ಯಥಾಸ್ಥಿತಿ ಮುಂದುವರೆದಿರುವುದರಿಂದ ಚಿನ್ನ ಮತ್ತು ಬೆಳ್ಳಿ ಖರೀದಿಯಲ್ಲಿ ಖರೀದಿದಾರರು ಆಸಕ್ತಿ ತೋರುತ್ತಿದ್ದಾರೆ. ಆದರೆ ಈ ಇಳಿಕೆ ತಾತ್ಕಾಲಿಕವಾಗಿದ್ದು ಮುಂಬರುವ ದಿನಗಳಲ್ಲಿ ಚಿನ್ನ ಮತ್ತು ಬೆಳ್ಳಿ ಬೆಳ್ಳಿ ಬೆಲೆ ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಣೆ ಮಾಡಿದ್ದಾರೆ.

20 ಮಹಿಳೆಯರ ಜತೆ ಸರಸ, ಲೈಂಗಿಕ ಕಾಯಿಲೆ; ಕೊನೆಗೂ ಸತ್ಯ ಒಪ್ಪಿಕೊಂಡ ಬಿಲ್ ಗೇಟ್ಸ್!

TAGGED:gold-prices-have-seen-a-slight-decline-what-is-the-price-of-pure-gold-in-bangalore-today
Share This Article
Facebook Twitter Copy Link Print
Previous Article 20 ಮಹಿಳೆಯರ ಜತೆ ಸರಸ, ಲೈಂಗಿಕ ಕಾಯಿಲೆ; ಕೊನೆಗೂ ಸತ್ಯ ಒಪ್ಪಿಕೊಂಡ ಬಿಲ್ ಗೇಟ್ಸ್!
Next Article ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?