newsics.com/ನ್ಯೂಸಿಕ್ಸ್
ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಸಂಪುಟದಲ್ಲಿ ಖಾತೆ ಹಂಚಿಕೆ ಬೆನ್ನಲ್ಲೇ ಭಿನ್ನಮತ ಸ್ಫೋಟಗೊಂಡಿದೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನದ ರಾಜೀನಾಮೆ ನೀಡಿದ ವಿಚಾರ ಹೈಕಮಾಂಡ್ ನಾಯಕರು ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ.
ಬೆಂಗಳೂರಿಗೆ ಬರ್ತಿದ್ದಂತೆ ರಾಹುಲ್ ಗಾಂಧಿ ಖಡಕ್ ಸೂಚನೆ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಸುರ್ಜೇವಾಲಾಗೆ ರಾಹುಲ್ ಸೂಚನೆ
ರಾಮಲಿಂಗಾರೆಡ್ಡಿ ರಾಜೀನಾಮೆ ವಿಚಾರವನ್ನ ಉಸ್ತುವಾರಿ ಸುರ್ಜೇವಾಲಾ ಅವರು ಬೆಳಗ್ಗೆಯೇ ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, ರಾಮಲಿಂಗಾರೆಡ್ಡಿ ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಕೆ ಮಾಡಿ ಎಂದು ಸುರ್ಜೇವಾಲಾಗೆ ಜವಾಬ್ದಾರಿ ನೀಡುತ್ತಾ ಖಡಕ್ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
‘ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ’
ಒಮ್ಮೆ ಮನವೊಲಿಕೆ ಪ್ರಯತ್ನಿಸಿ ಆದ್ರೂ ರಾಜೀನಾಮೆ ಹಿಂಪಡೆಯದಿದ್ರೆ, ಯಾವುದೇ ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್ ಗಾಂಧಿ ಖಡಕ್ ಆಗಿ ಸುರ್ಜೇವಾಲಾಗೆ ಸೂಚನೆ ಕೊಟ್ಟಿದ್ದಾರೆ ಎನ್ನಲಾಗ್ತಿದೆ. ಒಮ್ಮೆ ಮಣಿದರೆ ಉಳಿದವರು ಇದೇ ರೀತಿ ರಾಜೀನಾಮೆಗೆ ಮುಂದಾಗ್ತಾರೆ ಅನ್ನೋ ಚಿಂತನೆಯಿಂದ ಸೂಚನೆ ನೀಡಲಾಗಿದೆ ಎನ್ನಲಾಗ್ತಿದೆ.
ಏರ್ಪೋರ್ಟ್ನಲ್ಲೇ ಡ್ಯಾಮೇಜ್ ಕಂಟ್ರೋಲ್!
ಏರ್ಪೋರ್ಟ್ನಲ್ಲಿ ರಾಹುಲ್ ಗಾಂಧಿ ಹಾಗೂ ಹೈಕಮಾಂಡ್ ನಾಯಕರು ಡ್ಯಾಮೇಜ್ ಕಂಟ್ರೋಲ್ಗೆ ಮುಂದಾಗಿದ್ದು, ಹಿರಿಯ ಸಚಿವರೊಂದಿಗೆ ಮೀಟಿಂಗ್ ನಡೆಸಿದ್ದಾರೆ. ಕೆಲ ಕಾಲ ಮೀಟಿಂಗ್ ಮಾಡಿ ಅಸಮಾಧಾನಕ್ಕೆ ಬ್ರೇಕ್ ಹಾಕಲು ಮುಂದಾದ ರಾಹುಲ್ ಮುಂದಾದ್ರು.
ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ