Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು
ಕರ್ನಾಟಕಪ್ರಮುಖ

Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು

Share
2 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಹಲಸಿನ ಹಣ್ಣು ಕೀಳಲು ಹೋಗಿ ಮರದಿಂದ ಕೆಳಗೆ ಬಿದ್ದ ಗಾಂಧಿ ಕೃಷಿ ವಿಶ್ವವಿದ್ಯಾಲಯದ ಎಂ.ಎಸ್ಸಿ (M.Sc Agriculture) ವಿದ್ಯಾರ್ಥಿಯೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.

ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನವರಾದ ಆಕಾಶ್ (23) ಮೃತಪಟ್ಟ ವಿದ್ಯಾರ್ಥಿ.

ರೈತಾಪಿ ಕುಟುಂಬದಿಂದ ಬಂದು, ಕಷ್ಟಪಟ್ಟು ಓದಿ ಸರ್ಕಾರಿ ಸೀಟು ಪಡೆದುಕೊಂಡು ಬೆಂಗಳೂರಿನಲ್ಲಿ ಉನ್ನತ ವಿದ್ಯಾಭ್ಯಾಸ ಮಾಡುತ್ತಿದ್ದ ಯುವಕ ಹಲಸಿನ ಹಣ್ಣಿನ ಆಸೆಗೆ ಸಿಲುಕಿ ಪ್ರಾಣ ಕಳೆದುಕೊಂಡಿರುವುದು ಇಡೀ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ತೀವ್ರ ಶೋಕವನ್ನು ಉಂಟುಮಾಡಿದೆ.

ಮಧ್ಯರಾತ್ರಿ ನಡೆದಿದ್ದೇನು?

ಪೊಲೀಸ್ ಮೂಲಗಳ ಪ್ರಕಾರ, ಈ ದುರಂತ ಗುರುವಾರ ರಾತ್ರಿ 12 ರಿಂದ 1 ಗಂಟೆಯ ಅವಧಿಯಲ್ಲಿ ಜಿಕೆವಿಕೆ ಕ್ಯಾಂಪಸ್ ಆವರಣದಲ್ಲಿ ನಡೆದಿದೆ. ನಿನ್ನೆ ರಾತ್ರಿ ವಿದ್ಯಾರ್ಥಿ ಆಕಾಶ್ ಮರದಲ್ಲಿದ್ದ ಹಲಸಿನ ಹಣ್ಣನ್ನು ಕೀಳುವ ಆಸೆಯಿಂದ ಜಿಕೆವಿಕೆ ಆವರಣದ ದೊಡ್ಡ ಮರವನ್ನು ಹತ್ತಿದ್ದ ಎನ್ನಲಾಗಿದೆ. ಆದರೆ, ಮಧ್ಯರಾತ್ರಿಯ ಕತ್ತಲಿನಲ್ಲಿ ಆಯತಪ್ಪಿ ಮರದ ಮೇಲಿಂದ ನೇರವಾಗಿ ಕೆಳಗೆ ಬಿದ್ದಿದ್ದಾನೆ. ಕೆಳಗೆ ಬಿದ್ದ ರಭಸಕ್ಕೆ ಆಕಾಶ್ ತಲೆ ಹಾಗೂ ದೇಹದ ಭಾಗಗಳಿಗೆ ಗಂಭೀರವಾದ ಪೆಟ್ಟಾಗಿದೆ.

ಘಟನೆಯ ವಿಷಯ ತಿಳಿಯುತ್ತಿದ್ದಂತೆ ಆಕಾಶ್ ಜೊತೆಯಲ್ಲಿದ್ದ ಸ್ನೇಹಿತರು ಮತ್ತು ಸಹಪಾಠಿಗಳು ತಕ್ಷಣವೇ ಆತನನ್ನು ರಕ್ಷಿಸಿ, ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಆಕಾಶ್ ಮೃತಪಟ್ಟಿದ್ದಾನೆ.

ರಾಷ್ಟ್ರಪತಿ ಪ್ರಶಸ್ತಿ ವಿಜೇತ ಯುವಕ!

ಮೃತ ಆಕಾಶ್ ಕೇವಲ ಓದಿನಲ್ಲಿ ಮಾತ್ರವಲ್ಲದೆ ಇತರೆ ಚಟುವಟಿಕೆಗಳಲ್ಲೂ ಅತ್ಯಂತ ಮುಂಚೂಣಿಯಲ್ಲಿದ್ದ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದನು. ಕಾಲೇಜಿನ ಎನ್.ಎಸ್.ಎಸ್ (NSS) ವಿಭಾಗದಲ್ಲಿ ಅತ್ಯುತ್ತಮ ಸ್ವಯಂಸೇವಕನಾಗಿ ಗುರುತಿಸಿಕೊಂಡಿದ್ದ ಈತನಿಗೆ ರಾಷ್ಟ್ರಪತಿಯವರಿಂದ “ಉತ್ತಮ ಸ್ವಯಂಸೇವಕ” ಪ್ರಶಸ್ತಿ ಲಭಿಸಿತ್ತು. ಅಷ್ಟೇ ಅಲ್ಲದೆ, 2024 ರ ಗಣರಾಜ್ಯೋತ್ಸವದ (Republic Day Parade) ಪರೇಡ್‌ನಲ್ಲಿ ಕರ್ನಾಟಕ ರಾಜ್ಯವನ್ನು ಹೆಮ್ಮೆಯಿಂದ ಪ್ರತಿನಿಧಿಸಿ ಕೀರ್ತಿ ತಂದಿದ್ದನು. ಬಡತನದ ಹಿನ್ನೆಲೆಯುಳ್ಳ ರೈತ ಕುಟುಂಬದಿಂದ ಬಂದಿದ್ದ ಆಕಾಶ್, ಇಡೀ ಗ್ರಾಮಕ್ಕೆ ಹಾಗೂ ಕಾಲೇಜಿಗೆ ಹೆಮ್ಮೆಯಾಗಿದ್ದನು. ಆತನ ಅಕಾಲಿಕ ಮರಣವು ಕುಟುಂಬದ ದೊಡ್ಡ ಶಕ್ತಿಯನ್ನೇ ಕಳೆದುಕೊಂಡಂತಾಗಿದೆ.

ಯಲಹಂಕ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಜಿಕೆವಿಕೆ ಆವರಣದಲ್ಲಿರುವ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ಮೃತರ ಪೋಷಕರಿಗೆ ಮತ್ತು ಕುಟುಂಬಸ್ಥರಿಗೆ ಯಲಹಂಕ ಪೊಲೀಸರು ಮಾಹಿತಿ ರವಾನಿಸಿದ್ದಾರೆ.

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

 

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

 

 

TAGGED:#jackfruit #GKVK #bangalore #student #dies
Share This Article
Facebook Twitter Copy Link Print
Previous Article Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ
Next Article Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?