Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!
ಕರ್ನಾಟಕದೇಶಪ್ರಮುಖ

Shivayoga samadhi ಲೋಕಕಲ್ಯಾಣಕ್ಕಾಗಿ ಗದಗ ಸ್ವಾಮೀಜಿಯಿಂದ 33 ದಿನಗಳ ಶಿವಯೋಗ ಸಮಾಧಿ ತಪಸ್ಸು!

Share
2 Min Read
SHARE

newsics.com/ನ್ಯೂಸಿಕ್ಸ್

ರಾಮನಗರ: ಲೋಕ ಕಲ್ಯಾಣ, ವಿಶ್ವಶಾಂತಿ ಹಾಗೂ ಸಕಾಲದಲ್ಲಿ ಮಳೆ-ಬೆಳೆ ಉತ್ತಮವಾಗಿ ಬರಲಿ ಎಂಬ ಸಂಕಲ್ಪದೊಂದಿಗೆ ಗದಗ (gadag) ತಾಲೂಕಿನ ಅಂತೂರು ಬೆಂತೂರು ಗ್ರಾಮದ ಶ್ರೀ ಜಗದ್ಗುರು ಬೂದೀಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ‘ಶಿವಯೋಗ ಸಮಾಧಿ’ (Shiva Yoga Samadhi) ತಪಸ್ಸನ್ನು ಆರಂಭಿಸಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲೂ ಅಧ್ಯಾತ್ಮದ ಶಕ್ತಿ ಎಷ್ಟರಮಟ್ಟಿಗೆ ಪ್ರಭಾವ ಬೀರಬಲ್ಲದು ಎಂಬುದಕ್ಕೆ ಸಾಕ್ಷಿಯಾಗಿದ್ದಾರೆ‌‌. ಶ್ರೀ ಮಠದ ಗರ್ಭಗುಡಿಯನ್ನು ಬಂದ್​​ ಮಾಡಿಕೊಂಡು ಸಮಾಧಿ ಯೋಗದಲ್ಲಿ ಮಗ್ನರಾಗಿದ್ದಾರೆ. ಸದ್ಯ ಮಠದಲ್ಲಿ ಭಕ್ತರಿಂದ 24 ಗಂಟೆ ಶಿವನಾಮಸ್ಮರಣೆ ನಡೆದಿದೆ.

ಸ್ವಾಮೀಜಿ ಲೋಕ ಕಲ್ಯಾಣಕ್ಕಾಗಿ ಕಠಿಣ ಶಿವಯೋಗ ಸಮಾಧಿ ಅನುಷ್ಠಾನ ಕೈಗೊಂಡಿದ್ದು, 775 ಗಂಟೆ ಅಂದರೆ 33 ದಿನಗಳ‌ ಕಾಲ ಶಿವಯೋಗ ಸಮಾಧಿ ತಪಸ್ಸು ಮಾಡಲಿದ್ದಾರೆ.

ಗದಗ ತಾಲೂಕಿನ ಅಂತೂರು ಬೆಂತೂರು ಗ್ರಾಮದಲ್ಲಿ ಈಗ ಸಂಭ್ರಮದ ವಾತಾವರಣಮನೆ ಮಾಡಿದೆ.

ಶ್ರೀ ಬೂದೀಶ್ವರ ಮಠದ ಪೀಠಾಧಿಪತಿ ಶ್ರೀ ರಾಚೋಟೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಕಠಿಣವಾದ ಶಿವಯೋಗ ಸಮಾಧಿ ಯೋಗವನ್ನು ಮಾಡುತ್ತಿದ್ದಾರೆ.

ಒಂದು ತಿಂಗಳು ಮೌನಾನುಷ್ಠಾನ ಮಾಡಿದ್ದು, ಜೂನ್‌ 3ರಂದು ಮಧ್ಯರಾತ್ರಿ 3 ಗಂಟೆಗೆ, ಗರ್ಭಗುಡಿ ಪ್ರವೇಶ ಮಾಡಿದ್ದಾರೆ. ಶ್ರೀಗಳು ಗರ್ಭಗುಡಿ ಪ್ರವೇಶ ಮಾಡಿದ ನಂತರ ಬಾಗಿಲು ಬಂದ್​ ಮಾಡಿ ಇಟ್ಟಿಗೆ, ಸಿಮೆಂಟ್​ನಿಂದ ಕ್ಲೋಸ್ ಮಾಡಲಾಗಿದೆ.

ಗರ್ಭಗುಡಿಯಲ್ಲಿ ಯಾವುದೇ ಬೆಳಕು, ಗಾಳಿ, ನೀರು ಇಲ್ಲದೆ 33 ದಿನಗಳು ಇರಲಿದ್ದಾರೆ. ರಾಚೋಟೇಶ್ವರ ಸ್ವಾಮೀಜಿಗಳು ಲೋಕ ಕಲ್ಯಾಣಕ್ಕಾಗಿ ಈ ಹಿಂದೆ ಕೂಡ ಹಲವು ಶಿವಯೋಗ ಸಮಾಧಿ ವ್ರತ ಮಾಡಿದ್ದಾರೆ. ‌ಈ ಬಾರಿ ಕೂಡ ಮಾಡುತ್ತಿದ್ದಾರೆ. ಸದ್ಯ ಶ್ರೀಗಳು ಗರ್ಭಗುಡಿಯಲ್ಲಿನ ಶಿವಲಿಂಗದ ಮುಂದೆ ಕಠಿಣ ತಪಸ್ಸು ಮಾಡುತ್ತಿದ್ದಾರೆ.

ಅಂತೂರು ಬೆಂತೂರು ಗ್ರಾಮ ಸೇರಿದಂತೆ ಹಲವು ಗ್ರಾಮದ ಭಕ್ತರು ಶ್ರೀ ಮಠಕ್ಕೆ ಬಂದು ದರ್ಶನ ಪಡೆಯುತ್ತಿದ್ದಾರೆ. 775 ಗಂಟೆಗಳ ಕಾಲ, ಅಂದರೆ 33 ದಿನಗಳವರೆಗೆ ನಿರಂತರವಾಗಿ ಶಿವಯೋಗ ಸಮಾಧಿಯಲ್ಲಿ ತೊಡಗಿರುವ ಸ್ವಾಮೀಜಿಗಳು, ಮಠದ ಗರ್ಭಗುಡಿಯಲ್ಲಿ ಶಿವಲಿಂಗದ ಸನ್ನಿಧಿಯಲ್ಲಿ ತಪಸ್ಸು ಮಾಡುತ್ತಿದ್ದಾರೆ.

ವಿಶ್ವಶಾಂತಿ, ಮಧ್ಯ ಪ್ರಾಚ್ಯ ಯುದ್ಧದ ವಾತಾವರಣ, ಮಳೆ-ಬೆಳೆ ಚೆನ್ನಾಗಿ ಬಂದು ಸಮೃದ್ಧಿ ಫಲಿಸಲಿ ಎಂದು ಶಿವಯೋಗ ಸಮಾಧಿ ಯೋಗ ಮಾಡುತ್ತಿದ್ದಾರೆ. ಸ್ವಾಮೀಜಿಗಳು ಕಠಿಣ ವ್ರತ ಕೈಗೊಂಡ ನಂತರ ಗ್ರಾಮದಲ್ಲಿ ಮಳೆ ಆಗಿದ್ದು, ಭಕ್ತರು ಸಂತಸಗೊಂಡಿದ್ದಾರೆ.

ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಇಂತಹ ಅಪರೂಪದ ಯೋಗ ಸಾಧನೆ ಕುತೂಹಲಕ್ಕೆ ಕಾರಣವಾಗಿದೆ. ವಿಶ್ವಶಾಂತಿ ಹಾಗೂ ಲೋಕ ಕಲ್ಯಾಣಕ್ಕಾಗಿ ಕೈಗೊಂಡಿರುವ ಈ 33 ದಿನಗಳ ಶಿವಯೋಗ ಸಮಾಧಿ ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯ ಮೂಡಿಸಿದೆ. 33 ದಿನಗಳ ನಂತರ ಸ್ವಾಮೀಜಿ ಹೊರಗಡೆ ಬಂದು, ದರ್ಶನ ನೀಡಲಿದ್ದಾರೆ. ಸ್ವಾಮೀಜಿಗಳ ಈ ನಡೆ ಭಕ್ತರಲ್ಲಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

TAGGED:Swamiji performs 33 days of Shiva Yoga Samadhi penance for the welfare of the world!
Share This Article
Facebook Twitter Copy Link Print
Previous Article Student dies ಹಲಸಿನ ಹಣ್ಣು ಕೀಳಲು ಹೋದ ಕೃಷಿ ವಿವಿ ವಿದ್ಯಾರ್ಥಿ ಮರದಿಂದ ಬಿದ್ದು ಸಾವು
Next Article ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!

Popular Posts

ಆರತಿ ತಟ್ಟೆಗೆ ಹಣ ಹಾಕುವುದೇಕೆ? ಇದರ ಹಿಂದಿರುವ ವೈಜ್ಞಾನಿಕ ಕಾರಣಗಳೇನು?

2 Min Read

Tamilnadu BJP ತಮಿಳುನಾಡು ಬಿಜೆಪಿಗೆ ತೀವ್ರ ಆಘಾತ: ಇಬ್ಬರು ಮುಖಂಡರ ಎಕ್ಸಿಟ್ ಬೆನ್ನಲ್ಲೇ ಕಾರ್ಯದರ್ಶಿ ಸುಮತಿ ವೆಂಕಟೇಶ್ ರಾಜೀನಾಮೆ!

1 Min Read

Jamun Fruit ನೇರಳೆ ಹಣ್ಣಿನ ಆರೋಗ್ಯ ಗುಣಗಳು; ರುಚಿಯ ಜೊತೆಗೆ ಆರೋಗ್ಯದ ಖಜಾನೆ

2 Min Read

Porfolio issue ಖಾತೆ ಕ್ಯಾತೆಗೆ ತೇಪೆ: ಫಲಿಸಿತು ಸಿಎಂ ಡಿಕೆ ತಡರಾತ್ರಿಯ ಸಂಧಾನ

1 Min Read

You Might Also Like

ದೇಶಪ್ರಮುಖವಿದೇಶ

IND vs AFG Test ಭಾರತ vs ಅಫ್ಘಾನ್‌ ಟೆಸ್ಟ್‌ ಪಂದ್ಯ : ಐಪಿಎಲ್‌ನ ಸ್ಕ್ವಾಡ್‌ನಲ್ಲಿ ನಾಲ್ವರು ಕನ್ನಡಿಗರು?

2 Min Read
ಕರ್ನಾಟಕಪ್ರಮುಖ

Heavy Rain ರಾಜ್ಯದಲ್ಲಿ ಮಳೆಯ ಅಬ್ಬರ : ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ

1 Min Read
ಪ್ರಮುಖವಿದೇಶ

30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?

2 Min Read
ದೇಶಪ್ರಮುಖ

Annamalai ಅಣ್ಣಾಮಲೈ ಹೊಸ ಅಭಿಯಾನ : ಬಿಜೆಪಿ ತೊರೆದ ಗಂಟೆಗಳಲ್ಲೇ 8 ಲಕ್ಷ ಜನ ಸೇರ್ಪಡೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?