newsics.com/ನ್ಯೂಸಿಕ್ಸ್
ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಕಮಲ ಪಾಳಯದ ವಿಕೆಟ್‌ಗಳು ಒಂದರ ಬೆನ್ನಲ್ಲೇ ಮತ್ತೊಂದು ಉರುಳುತ್ತಿದ್ದು, ಭಾರಿ ತಲ್ಲಣ ಸೃಷ್ಟಿಯಾಗಿದೆ. ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಅವರ ನಿರ್ಗಮನದ ಬೆನ್ನಲ್ಲೇ, ಈಗ ಪಕ್ಷದ ಮತ್ತೊಬ್ಬ ಪ್ರಭಾವಿ ನಾಯಕ ರಾಜ್ಯ ಉಪಾಧ್ಯಕ್ಷ ಕಾರು ನಾಗರಾಜನ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.
ಬಿಜೆಪಿ ತೊರೆದಿರುವ ಕಾರು ನಾಗರಾಜನ್ ಅವರು ಅಣ್ಣಾಮಲೈ ಅವರ ಹೊಸ ರಾಜಕೀಯ ಹಾದಿಯನ್ನು ಬೆಂಬಲಿಸುವುದಾಗಿ ಮುಕ್ತವಾಗಿ ಘೋಷಿಸಿದ್ದಾರೆ.
ತಮ್ಮ ರಾಜೀನಾಮೆ ಕುರಿತು ಮಾತನಾಡಿರುವ ಕಾರು ನಾಗರಾಜನ್, “ತಮಿಳುನಾಡಿನಲ್ಲಿ ಬಿಜೆಪಿಯನ್ನು ಸಾಮಾನ್ಯ ಜನರ ಬಳಿಗೆ ಕೊಂಡೊಯ್ದು, ಪ್ರತಿ ಮನೆಮನೆಗೂ ತಲುಪಿಸಿದ ಕೀರ್ತಿ ಅಣ್ಣಾಮಲೈ ಅವರಿಗೆ ಸಲ್ಲುತ್ತದೆ. ಅವರು ತಮಿಳುನಾಡು ರಾಜಕಾರಣದಲ್ಲಿ ಹೊಸ ಆಶಾವಾದ ಮೂಡಿಸಿದ್ದಾರೆ. ಹಾಗಾಗಿ, ನಾನು ಅಣ್ಣಾಮಲೈ ಅವರು ಆರಂಭಿಸಿರುವ ಹೊಸ ಚಳವಳಿ/ಮೂವ್‌ಮೆಂಟ್ ಸೇರಲು ನಿರ್ಧರಿಸಿದ್ದೇನೆ” ಎಂದು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಪ್ರಭಾವಿ ನಾಯಕರಾಗಿದ್ದ ಕಾರು ನಾಗರಾಜನ್ ರಾಜೀನಾಮೆಯಿಂದಾಗಿ ಬಿಜೆಪಿಗೆ ದೊಡ್ಡ ಹಿನ್ನಡೆಯಾಗಿದ್ದು, ಮುಂಬರುವ ದಿನಗಳಲ್ಲಿ ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಅವರ ಹೊಸ ಚಳವಳಿ ಯಾವ ರೀತಿಯ ತಿರುವು ಪಡೆದುಕೊಳ್ಳಲಿದೆ ಎಂಬುದು ಈಗ ತೀವ್ರ ಕುತೂಹಲ ಮೂಡಿಸಿದೆ.
ತಮಿಳುನಾಡು ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದ್ದು, ಬಿಜೆಪಿ ರಾಜ್ಯ ಉಪಾಧ್ಯಕ್ಷ ಕಾರು ನಾಗರಾಜನ್ ನೇತೃತ್ವದಲ್ಲಿ ಹಲವು ಪ್ರಮುಖ ಪದಾಧಿಕಾರಿಗಳು ಪಕ್ಷಕ್ಕೆ ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಇತ್ತೀಚೆಗಷ್ಟೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದರು. ಈಗ ಅವರ ಬೆಂಬಲಕ್ಕೆ ನಿಂತಿರುವ ಕಾರು ನಾಗರಾಜನ್, ಅಣ್ಣಾಮಲೈ ಆರಂಭಿಸಿರುವ ಹೊಸ ರಾಜಕೀಯ ಚಳವಳಿಗೆ ಸಾಥ್ ಕೊಡುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಕಾಂಗ್ರೆಸ್ ನಾಯಕರ ತೀರದ ಅಧಿಕಾರ ದಾಹವಾ? ಸಿದ್ದರಾಮಯ್ಯ ಎಫೆಕ್ಟಾ? ಡಿಕೆ ಸರ್ಕಾರಕ್ಕೆ ಸ್ವಪಕ್ಷವೇ ವೈರಿ!