newsics.com/ನ್ಯೂಸಿಕ್ಸ್
ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಿರಲಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚಿಸಲಾಗಿದೆ.
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಗುಡುಗು ಸಹಿತ ಗಾಳಿ ಬೀಸುವ ಸಾಧ್ಯತೆಯಿದೆ. ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಮುನ್ಸೂಚನೆ ಇರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಾಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
30 ದಿನಗಳ ಕಾಲ ಸ್ಮಾರ್ಟ್‌ಫೋನ್ ಇಲ್ಲದೆ ಬದುಕಿದ ವ್ಯಕ್ತಿ : ಕೊನೆಗೆ ಏನಾಯಿತು ಗೊತ್ತಾ..?