newsics.com/ನ್ಯೂಸಿಕ್ಸ್
ಕರ್ನಾಟಕ ಸಿಇಟಿ 2026ರ ಫಲಿತಾಂಶವನ್ನು ಇಂದು ಅಧಿಕೃತವಾಗಿ ಪ್ರಕಟಿಸಲಾಗಿದೆ. ಈ ಪರೀಕ್ಷೆಯ ಫಲಿತಾಂಶಕ್ಕಾಗಿ ಹಲವು ತಿಂಗಳಿನಿಂದ ಕಾಯುತ್ತಿದ್ದ ವಿದ್ಯಾರ್ಥಿಗಳ ನಿರೀಕ್ಷೆಗೆ ಇಂದು ತೆರೆ ಬಿದ್ದಿದೆ. ಉನ್ನತ ಶಿಕ್ಷಣ ಸಚಿವರು ಅಧಿಕೃತವಾಗಿ ಮಧ್ಯಾಹ್ನ 12 ಗಂಟೆಗೆ ಫಲಿತಾಂಶಗಳನ್ನು ಘೋಷಿಸಿದ್ದಾರೆ
ಸುಮಾರು 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಮಹತ್ವದ ಫಲಿತಾಂಶ ಇದಾಗಿದೆ.
ಎಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಈ ಬಾರಿಯ ಪರೀಕ್ಷೆಗೆ ಒಟ್ಟು 3.30 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡು ಪರೀಕ್ಷೆ ಬರೆದಿದ್ದರು. ಕಳೆದ ಏಪ್ರಿಲ್ 23, 24ರಂದು ರಾಜ್ಯಾದ್ಯಂತ 745 ಪರೀಕ್ಷಾ ಕೇಂದ್ರಗಳಲ್ಲಿ ಸುಸೂತ್ರವಾಗಿ ಪರೀಕ್ಷೆ ನಡೆಸಲಾಗಿತ್ತು.
ಅಧಿಕೃತ ವೆಬ್‌ಸೈಟ್ ಭೇಟಿ: KEA ಅಧಿಕೃತ ಪೋರ್ಟಲ್ ಅಥವಾ Careers360 KCET ಫಲಿತಾಂಶ ಪುಟಕ್ಕೆ ಭೇಟಿ ನೀಡಿ.ಲಾಗಿನ್ ವಿವರಗಳು: ಲಾಗಿನ್ ಪುಟದಲ್ಲಿ ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.ಡೌನ್‌ಲೋಡ್: ನಿಮ್ಮ ವಿಷಯವಾರು ಅಂಕಗಳು, ಒಟ್ಟು ಅಂಕಗಳು ಮತ್ತು ರ್ಯಾಂಕ್ ವಿವರಗಳನ್ನು ಒಳಗೊಂಡಿರುವ ಸ್ಕೋರ್‌ಕಾರ್ಡ್ ಪರದೆಯ ಮೇಲೆ ಕಾಣಿಸುತ್ತದೆ. ಅದನ್ನು ಪರಿಶೀಲಿಸಿ ಡೌನ್‌ಲೋಡ್ ಮಾಡಿಕೊಳ್ಳಿ