newsics.com/ನ್ಯೂಸಿಕ್ಸ್
ನವದೆಹಲಿ : ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಪ್ರತಿ ಸಿಲಿಂಡರ್‌ಗೆ 29 ರೂ. ಹೆಚ್ಚಳ ಮಾಡಲಾಗಿದೆ.ಜಾಗತಿಕ ಇಂಧನ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಹೊಸ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ.
ಕಳೆದ ಮೂರು ತಿಂಗಳಲ್ಲಿ ನಡೆದಿರುವ ಎರಡನೇ ದರ ಏರಿಕೆ ಇದಾಗಿದೆ. ಈ ಹೊಸ ಪರಿಷ್ಕರಣೆಯೊಂದಿಗೆ, ದೆಹಲಿಯಲ್ಲಿ 14.2 ಕೆಜಿ ತೂಕದ ಗೃಹಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ಏರಿಕೆಯಾಗಿದೆ. ಪರಿಷ್ಕೃತ ದರಗಳು ಜೂನ್ 7 ರಿಂದಲೇ ಜಾರಿಗೆ ಬಂದಿವೆ ಎಂದು ಉದ್ಯಮದ ಮೂಲಗಳನ್ನು ಉಲ್ಲೇಖಿಸಿ ಪಿಟಿಐ (PTI) ಸುದ್ದಿ ಸಂಸ್ಥೆ ವರದಿ ಮಾಡಿದೆ.
ಗುರುವಾರದಂದು ನಡೆದ ಅಂತರ-ಸಚಿವಾಲಯದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ, ದೇಶೀಯ ಉತ್ಪಾದನೆಯನ್ನು ಹೆಚ್ಚಿಸುವುದು ಮತ್ತು ಆಮದನ್ನು ಖಚಿತಪಡಿಸಿಕೊಳ್ಳುವುದು ಸೇರಿದಂತೆ ಎಲ್‌ಪಿಜಿ ಲಭ್ಯತೆಯನ್ನು ಸಮರ್ಪಕವಾಗಿ ಕಾಯ್ದುಕೊಳ್ಳಲು ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
Vaibhav Suryavanshi ವೈಭವ್ ಸೂರ್ಯವಂಶಿಗೆ ನೆರವಾಗಲು ಬಿಸಿಸಿಐ ಮಹತ್ವದ ನಿರ್ಧಾರ