Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ
ಕರ್ನಾಟಕಪ್ರಮುಖ

ಇನ್ಮುಂದೆ ಮದುವೆ ದಿಬ್ಬಣ ಚಿತ್ರೀಕರಣ ಬಂದ್ : ಫೋಟೋಗ್ರಾಫರ್ ಅಸೋಸಿಯೇಷನ್ ನಿರ್ಧಾರ

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಮದುವೆ ಸಮಾರಂಭಗಳಲ್ಲಿ ಮದುಮಗನ ಮನೆಗೆ ಸಾಗುವ ದಿಬ್ಬಣ  ಕಾರ್ಯಕ್ರಮಗಳ ಫೋಟೊ ಹಾಗೂ ವಿಡಿಯೊ ಚಿತ್ರೀಕರಣವನ್ನು ಇನ್ನು ಮುಂದೆ ಮಾಡದಿರಲು ಕಾರವಾರ ತಾಲೂಕು ಫೋಟೋಗ್ರಾಫರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅಸೋಸಿಯೇಷನ್ ಸದಸ್ಯರು ಮಾತನಾಡಿ, ಛಾಯಾಗ್ರಾಹಕರು ಎದುರಿಸುತ್ತಿರುವ ಭದ್ರತಾ ಸಮಸ್ಯೆಗಳು ಹಾಗೂ ಸಮಯದ ಅಭಾವದ ಕುರಿತು ತಮ್ಮ ಅಳಲು ತೋಡಿಕೊಂಡರು.

ಕಾರವಾರ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಅಧ್ಯಕ್ಷ ಸಂತಾನ್ ಫರ್ನಾಂಡೀಸ್, ಈಚಿನ ದಿನಗಳಲ್ಲಿ ಮದುವೆ ದಿಬ್ಬಣ ಕಾರ್ಯಕ್ರಮಗಳು ತಡರಾತ್ರಿ ವರೆಗೂ ಮುಂದುವರಿಯುತ್ತಿವೆ. ಇದರಿಂದಾಗಿ ಫೋಟೋಗ್ರಾಫರ್‌ಗಳು ಯಾವುದೇ ಸಮಯದ ಮಿತಿಯಿಲ್ಲದೆ, ವಿಶ್ರಾಂತಿ ಇಲ್ಲದೆ ಕೆಲಸ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಅಲ್ಲದೆ, ತಡರಾತ್ರಿಯ ದಿಬ್ಬಣಗಳಲ್ಲಿ ಕೆಲವೆಡೆ ಫೋಟೋಗ್ರಾಫರ್‌ಗಳು ಹಾಗೂ ವಿಡಿಯೋಗ್ರಾಫರ್‌ಗಳೊಂದಿಗೆ ಕೆಲವರು ಅತ್ಯಂತ ಅನುಚಿತವಾಗಿ ವರ್ತಿಸಿದ ಘಟನೆಗಳು ನಡೆದಿವೆ. ಕೆಲವು ಸಂದರ್ಭಗಳಲ್ಲಿ ಲಕ್ಷಾಂತರ ರು. ಬೆಲೆಬಾಳುವ ಕ್ಯಾಮೆರಾಗಳನ್ನು ಕಸಿದುಕೊಳ್ಳುವ ಹಾಗೂ ಹಾನಿ ಮಾಡುವ ಯತ್ನಗಳು ನಡೆದಿವೆ ಎಂದು ಅಸೋಸಿಯೇಷನ್ ಸದಸ್ಯರು ತೀವ್ರ ಆತಂಕ ವ್ಯಕ್ತಪಡಿಸಿದರು‌.

ಇದೇ ವೇಳೆ ಫೋಟೋಗ್ರಫಿ ಕ್ಷೇತ್ರದಲ್ಲಿ ಬಳಸುವ ಕ್ಯಾಮೆರಾ, ಲೈಟಿಂಗ್ ಸೇರಿದಂತೆ ವಿವಿಧ ಉಪಕರಣಗಳ ಬೆಲೆ ಹಾಗೂ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಏರಿಕೆಯಾಗಿರುವ ಕಾರಣ ಪಾಸ್‌ಪೋರ್ಟ್ ಸೈಜ್ ಫೋಟೊ ಸೇರಿದಂತೆ ವಿವಿಧ ಫೋಟೋಗ್ರಫಿ ಸೇವೆಗಳ ದರ ಪರಿಷ್ಕರಣೆ ಮಾಡಲಾಗುತ್ತಿದೆ ಎಂದು ಗೌರವಾಧ್ಯಕ್ಷ ಸೂರಜ್ ಜೋಗಳೇಕರ್, ಮಾಹಿತಿ ನೀಡಿದರು.

 

ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್

 

TAGGED:Wedding photography to be banned from now on: Photographers Association's decision
Share This Article
Facebook Twitter Copy Link Print
Previous Article ನರೇಂದ್ರ ಮೋದಿ ಅವರು ನನಗೆ ಶುಭ ಹಾರೈಸಿದ್ದಾರೆ, ನಾನು ಅವರನ್ನು ಭೇಟಿ ಮಾಡುತ್ತೇನೆ : ಡಿ.ಕೆ. ಶಿವಕುಮಾರ್
Next Article ಅಡುಗೆ ಎಣ್ಣೆ ಪ್ಯಾಕೇಜಿಂಗ್ ಗಾತ್ರದಲ್ಲಿ ಏಕರೂಪತೆ ಕಡ್ಡಾಯ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?