newsics.com/ನ್ಯೂಸಿಕ್ಸ್
ಬೆಂಗಳೂರು : ರಾಜ್ಯದಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಹವಾಮಾನ ಇಲಾಖೆಯು ಚಿಕ್ಕಮಗಳೂರು ಸೇರಿದಂತೆ 5 ಜಿಲ್ಲೆಗಳಿಗೆ ಅತ್ಯಂತ ಭಾರಿ ಮಳೆಯ ಹಿನ್ನೆಲೆ ರೆಡ್ ಅಲರ್ಟ್ ಘೋಷಿಸಿದೆ.
ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಬಿರುಗಾಳಿ ಸಹಿತ ಅತ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಸೂಚಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ನೀಡಲಾಗಿದ್ದು, ಇಲ್ಲೂ ಭಾರಿ ಮಳೆಯಾಗಲಿದೆ. ಬಾಗಲಕೋಟೆ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದರೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣದಿಂದ ಉತ್ತಮ ಮಳೆಯಾಗಲಿದೆ.
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಹೈ ಅಲರ್ಟ್ ಘೋಷಿಸಿದ್ದಾರೆ. ಸಾರ್ವಜನಿಕರ ರಕ್ಷಣೆಗಾಗಿ ಜಿಲ್ಲಾಡಳಿತ ಹಲವು ಕಟ್ಟುನಿಟ್ಟಿನ ಆದೇಶಗಳನ್ನು ಹೊರಡಿಸಿದೆ.
Supreme Court ಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ತಪ್ಪಲ್ಲ : ಸುಪ್ರೀಂಕೋರ್ಟ್ ತೀರ್ಪು