newsics.com/ನ್ಯೂಸಿಕ್ಸ್
ಬೆಂಗಳೂರು : ಮುಂದಿನ ಒಂದು ವಾರ ರಾಜ್ಯಾದ್ಯಂತ ಭಾರೀ ಮಳೆ ಹಾಗೂ ಬಲವಾದ ಬಿರುಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಸೇರಿದಂತೆ ಕೆಲವು ಜಿಲ್ಲೆಗಳು, ದಕ್ಷಿಣ ಒಳನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದೆ.
ದಕ್ಷಿಣ ಒಳನಾಡು ಕರ್ನಾಟಕದಲ್ಲಿಯೂ ಇದೇ ರೀತಿಯ ಹವಾಮಾನ ಮುಂದುವರಿಯಲಿದ್ದು, ಬೆಂಗಳೂರು ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು-ಮಿಂಚು, ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಹಾಗೂ ಗಂಟೆಗೆ 30-40 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಒಂದು ಅಥವಾ ಎರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೀದಿ ಕೋಟೆಯಲ್ಲಿ ಬಿರುಕು :ಕಾಂಗ್ರೆಸ್ ಜೊತೆ ಟಿಎಂಸಿ ವಿಲೀನ?ದೀದಿಗೆ ಉಪಾಧ್ಯಕ್ಷ ಪಟ್ಟ?