newsics.com/ನ್ಯೂಸಿಕ್ಸ್
ಮಂಗಳೂರು : ಕೊಲ್ಲೂರು ಮೂಕಾಂಬಿಕೆ ದೇವಿಯ ದರ್ಶನಕ್ಕೆ ಇಂದು ತಮಿಳುನಾಡು ಸಿಎಂ ವಿಜಯ್ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಾಗ ಸಾಕಷ್ಟು ಜನ ಅವರನ್ನು ನೋಡಲೆಂದೇ ನೆರೆದಿದ್ದರು. ತಮಿಳುನಾಡು ಸಿಎಂ ಜೊಸೆಫ್ ವಿಜಯ್ ನೀತಿ ಆಯೋಗ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿದ್ದರು.
Advertisement
ದೇವಾಲಯಕ್ಕೆ ಭೇಟಿ ನೀಡಿದ ವಿಜಯ್ ರನ್ನು ದೇವಾಲಯದ ಆಡಳಿತ ಮಂಡಳಿ ಸ್ವಾಗತಿಸಿತು.ಶರ್ಟ್ ಕಳಚಿ ಕೆಂಪು ಬಣ್ಣದ ಶಲ್ಯ ಹೊದ್ದು ದೇವಾಲಯದ ಒಳಗೆ ಆಗಮಿಸಿದ್ದಾರೆ.
ವಿಶೇಷ ವಿಮಾನದ ಮೂಲಕ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು.
ಮಧ್ಯಾಹ್ನ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದ ವಿಜಯ್, ಅಲ್ಲಿಂದ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ತೆರಳಿದರು..ವಿಜಯ್ ಅವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಜಡ್-ಪ್ಲಸ್ ಭದ್ರತೆ ಹೊಂದಿರುವ ಮುಖ್ಯಮಂತ್ರಿ ವಿಜಯ್ ಅವರ ಭದ್ರತೆಗೆ ಕರ್ನಾಟಕ ಮತ್ತು ತಮಿಳುನಾಡು ಪೊಲೀಸರ ವಿಶೇಷ ತಂಡ ನಿಯೋಜಿಸಲಾಗಿತ್ತು.
ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ : ಸರ್ಕಾರ ಮಹತ್ವದ ತೀರ್ಮಾನ