Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಕರ್ನಾಟಕದೇಶಪ್ರಮುಖ

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

Share
3 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ : ಪ್ರವಾಸದಲ್ಲಿರುವ ಸಿಎಂ ಡಿ.ಕೆ. ಶಿವಕುಮಾರ್ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ರಾಷ್ಟ್ರಪತಿಯವರನ್ನು ಭೇಟಿಯಾಗಲಿದ್ದಾರೆ.

ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ, ಪೊಲೀಸ್ ಇಲಾಖೆ ಚಟುವಟಿಕೆಗಳಿಗೆ ಸಿಎಸ್ಆರ್ ನಿಧಿ ಬಳಕೆ, ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ, ಕಾರಾಗೃಹಗಳ (ಜೈಲುಗಳ) ಆಧುನೀಕರಣ ಸೇರಿದಂತೆ ಕರ್ನಾಟಕ ರಾಜ್ಯದ ಭದ್ರತಾ ಮೂಲಸೌಕರ್ಯ ಮತ್ತು ಪೊಲೀಸ್ ಸಾಮರ್ಥ್ಯ ಸುಧಾರಣೆಗೆ ನೆರವಾಗುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಿದರು.

 

ದೆಹಲಿಯಲ್ಲಿ ಕೇಂದ್ರ ಗೃಹ ಸಚಿವರ ಜತೆ ಸಮಾಲೋಚನೆ ಸಂದರ್ಭದಲ್ಲಿ ಈ ಮನವಿ ಸಲ್ಲಿಸಿದರು.

 

ಮನವಿಯ ಪ್ರಮುಖ ಅಂಶಗಳು:

 

1. ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ (ರಾಷ್ಟ್ರಪತಿಗಳ ಅತ್ಯುನ್ನತ ಗೌರವ) ಪ್ರಶಸ್ತಿ:

 

ಕರ್ನಾಟಕ ರಾಜ್ಯ ಪೊಲೀಸ್‌ಗೆ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿಯನ್ನು ನೀಡುವ ಕುರಿತಾದ ಪ್ರಸ್ತಾವನೆಯನ್ನು 08-05-2024 ರಂದು ಭಾರತ ಸರ್ಕಾರಕ್ಕೆ ಸಲ್ಲಿಸಲಾಗಿದ್ದು, ಪ್ರಸ್ತುತ ಅದು ಪರಿಶೀಲನೆಯಲ್ಲಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಇನ್ನು ಸಹ ಈ ಪ್ರತಿಷ್ಠಿತ ಗೌರವವನ್ನು ಸ್ವೀಕರಿಸಬೇಕಾಗಿದೆ. ಈ ವಿಷಯವನ್ನು ಶೀಘ್ರವಾಗಿ ಪರಿಶೀಲಿಸಿ ‘ಪ್ರೆಸಿಡೆಂಟ್ಸ್ ಕಲರ್’ ಪ್ರಶಸ್ತಿ ನೀಡಲು ಅನುಮೋದನೆ ನೀಡಬೇಕು.

 

2. ಎರಡು ಹೆಚ್ಚುವರಿ ಇಂಡಿಯಾ ರಿಸರ್ವ್ ಬೆಟಾಲಿಯನ್ಸ್ (IRBs) ಸೃಷ್ಟಿ:

 

ವಿಜಯನಗರ ಮತ್ತು ರಾಮನಗರ ಜಿಲ್ಲೆಗಳಲ್ಲಿ ಇನ್ನೂ ಎರಡು ಹೆಚ್ಚುವರಿ ಐಆರ್‌ಬಿ (IRB) ಬೆಟಾಲಿಯನ್‌ಗಳನ್ನು ಸ್ಥಾಪಿಸಲು ಅಂದಾಜು 243.87 ಕೋಟಿ ರೂ.ಗಳ ವೆಚ್ಚದ ಹೊಸ ಪ್ರಸ್ತಾವನೆಯನ್ನು ಪತ್ರ ಸಂಖ್ಯೆ HD/133/POP/2024 ದಿನಾಂಕ 04-02-2025 ರ ಮೂಲಕ ಸಚಿವಾಲಯಕ್ಕೆ ಕಳುಹಿಸಲಾಗಿದೆ. ಇದಕ್ಕೆ ಶೀಘ್ರವಾಗಿ ಮಂಜೂರಾತಿ ನೀಡಬೇಕೆಂದು ನಾನು ವಿನಂತಿಸುತ್ತೇನೆ.

 

3. ಪೊಲೀಸ್ ವ್ಯವಸ್ಥೆ ಆಧುನೀಕರಣಕ್ಕಾಗಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೆರವು (ASUMP) – 2025-26:

 

ನಾಲ್ಕು ಪ್ರಮುಖ ನಗರಗಳಲ್ಲಿ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ಗಳು ಹಾಗೂ ಸಂವಹನ ಉಪಕರಣಗಳ ಸ್ಥಾಪನೆಗಾಗಿ ASUMP ಯೋಜನೆಯಡಿ 280.00 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಆದಷ್ಟು ಬೇಗ ಮಂಜೂರಾತಿ ನೀಡಬೇಕು.

 

4. ಕಂಪನಿಗಳ ಕಾಯ್ದೆ, 2013 ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳ ಸೇರ್ಪಡೆ (CSR):

 

ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಯನ್ನು ಬಳಸಿಕೊಳ್ಳಲು ಅನುಕೂಲವಾಗುವಂತೆ ಕಂಪನಿಗಳ ಕಾಯ್ದೆ, 2013 ರ ಶೆಡ್ಯೂಲ್ VII ರ ಅಡಿಯಲ್ಲಿ ಪೊಲೀಸ್ ಸಂಬಂಧಿತ ಚಟುವಟಿಕೆಗಳನ್ನು ಸೇರಿಸುವ ಪ್ರಸ್ತಾವನೆ ಸಲ್ಲಿಸಲಾಗುತ್ತಿದ್ದು, ಶೀಘ್ರವಾಗಿ ಅನುಮೋದನೆ ನೀಡಬೇಕು.

 

5. ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯ ಮೇಲ್ದರ್ಜೀಕರಣ:

 

BPR&D ಯ ಗ್ಯಾಪ್ ಅನಾಲಿಸಿಸ್ (GAP Analysis) ಮಾರ್ಗಸೂಚಿಗಳ ಪ್ರಕಾರ ಪೊಲೀಸ್ ತರಬೇತಿ ಸಂಸ್ಥೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೆ ಏರಿಸಲು 258.53 ಕೋಟಿ ರೂ.ಗಳ ವಿವರವಾದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಇದಕ್ಕೆ ನಿಮ್ಮ ಅನುಮೋದನೆ ಕೋರುತ್ತೇನೆ.

 

6. ಕಾರಾಗೃಹಗಳ (ಜೈಲುಗಳ) ಆಧುನೀಕರಣ:

 

ಕಾರಾಗೃಹಗಳ ಆಧುನೀಕರಣ ಯೋಜನೆಯಡಿ 2025-26 ರ ಆರ್ಥಿಕ ವರ್ಷಕ್ಕೆ (ಸಿಸಿಟಿವಿ, ವಾಕಿ-ಟಾಕಿ ಮತ್ತು ಇತರ ಭದ್ರತಾ ಉಪಕರಣಗಳ ಖರೀದಿಗೆ) 20 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಮೊತ್ತವನ್ನು ಶೀಘ್ರ ಮಂಜೂರು ಮಾಡಬೇಕು.

 

7. ಕೇಂದ್ರ ಮೋಟಾರು ವಾಹನಗಳ ನಿಯಮಗಳು, 1989 ರ ನಿಯಮ 52-A ಅನುಷ್ಠಾನದ ಗಡುವು ವಿಸ್ತರಣೆ:

 

ಕರ್ನಾಟಕದಲ್ಲಿ ನಿಯಮ 52-A ಅನ್ನು ಅನುಷ್ಠಾನಗೊಳಿಸಲು ಗಡುವನ್ನು ವಿಸ್ತರಿಸುವಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಪತ್ರ ಬರೆಯಲಾಗಿದೆ. ದಯವಿಟ್ಟು ತಾವು ಈ ವಿಷಯವನ್ನು ಸಂಬಂಧಪಟ್ಟ ಸಚಿವಾಲಯದೊಂದಿಗೆ ಚರ್ಚಿಸಿ, ಆದಷ್ಟು ಬೇಗ ಅನುಮೋದನೆ ಕೊಡಿಸಬೇಕು.

 

8. ಪೊಲೀಸ್ ಠಾಣೆಗಳಲ್ಲಿ ಸಿಸಿಟಿವಿ (CCTV) ಕ್ಯಾಮೆರಾಗಳ ಮೇಲ್ದರ್ಜೀಕರಣ:

 

ಗೌರವಾನ್ವಿತ ಭಾರತದ ಸುಪ್ರೀಂ ಕೋರ್ಟ್ ಮುಂದೆ ನಡೆದ ಚರ್ಚೆಗಳ ಅನುಸಾರ, ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ದರ್ಜೆಗೆ ಏರಿಸಲು ASUMP ಅಡಿಯಲ್ಲಿ 278.26 ಕೋಟಿ ರೂ.ಗಳ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಪರಿಗಣಿಸಬೇಕು.

9. ಕರ್ನಾಟಕ ಸೈಬರ್ ಕ್ರೈಮ್ ಕಂಟ್ರೋಲ್ ಅಂಡ್ ಕೋಆರ್ಡಿನೇಷನ್ ಯುನಿಟ್ (K4C) ಸ್ಥಾಪನೆ:

ಸೈಬರ್ ಅಪರಾಧಗಳು ಸಮಾಜ, ಆರ್ಥಿಕತೆ ಮತ್ತು ರಾಷ್ಟ್ರೀಯ ಭದ್ರತೆಗೆ ಗಂಭೀರ ಹಾಗೂ ನಿರಂತರ ಸವಾಲನ್ನು ಒಡ್ಡುತ್ತಿವೆ.

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

TAGGED:CM DK Shivakumar meets Union Home Minister Amit Shah
Share This Article
Facebook Twitter Copy Link Print
Previous Article 40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು
Next Article ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

Popular Posts

12 ವರ್ಷ ಪೂರೈಸಿದ ಮೋದಿ ಸರ್ಕಾರದ ವಿಶೇಷ ಹಾಡು ಬಿಡುಗಡೆ ಮಾಡಿದ ಬಿಜೆಪಿ ಸಂಸದ ಮನೋಜ್ ತಿವಾರಿ

1 Min Read

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

ಹುಲಿಕಲ್ ಘಾಟ್‌ ನಲ್ಲಿ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಅವಕಾಶ

1 Min Read

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

3 Min Read

You Might Also Like

ಪ್ರಮುಖಆರೋಗ್ಯ

40 ವರ್ಷಕ್ಕಿಂತ ಮೊದಲೇ ಮುಟ್ಟು ನಿಂತ್ರೆ ಈ ಅಪಾಯ ಹೆಚ್ಚು

2 Min Read
ಕರ್ನಾಟಕದೇಶಪ್ರಮುಖ

CM Vijay to Kollur ಮೂಕಾಂಬಿಕೆಗೆ ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ! ಅರ್ಚಕರಲ್ಲಿ ವಿಜಯ್ ಮಾಡಿದ ಆ ಒಂದು ಸ್ಪೆಷಲ್ ರಿಕ್ವೆಸ್ಟ್ ಏನು?

1 Min Read
ದೇಶಪ್ರಮುಖ

ವೃದ್ಧಾಪ್ಯಕ್ಕೆ ಬ್ರೇಕ್ ಹಾಕುವ ಪ್ರಯೋಗ ಆರಂಭ!

2 Min Read
ಕರ್ನಾಟಕಪ್ರಮುಖ

ಹಾಸ್ಟೇಲ್‌ನಲ್ಲಿ ಮಗುವಿಗೆ ಜನ್ಮಕೊಟ್ಟ 9ನೇ ತರಗತಿ ವಿದ್ಯಾರ್ಥಿನಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?