Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ಅವರ ನಡುವಿನ ಜಗಳಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಮಹತ್ವದ ಸಲಹೆ ನೀಡಿದೆ.

ಇಬ್ಬರೂ ತಮ್ಮ ನಡುವಿನ ವಿವಾದವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಡಿ. ರೂಪಾ ತಮ್ಮ ವಿರುದ್ಧ ಮಾಡಿರುವ ಮಾನನಷ್ಟ ಮೊಕದ್ದಮೆ ವಿಚಾರಣೆಯನ್ನು ಎದುರಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ನೀಡಿದ ಆದೇಶವನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿಯವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಶುಕ್ರವಾರ ನ್ಯಾಯಮೂರ್ತಿ ಸತೀಶ್ ಚಂದ್ರಶರ್ಮಾ ಮತ್ತು ನ್ಯಾಯಮೂರ್ತಿ ಸಂಜೀವ್ ಸಚ್ ದೇವ್ ಅವರಿದ್ದ ಪೀಠದಲ್ಲಿ ನಡೆದಿದೆ.

ಈ ಇಬ್ಬರು ಅಧಿಕಾರಿಗಳು ತಮ್ಮ ಕಾನೂನು ಹೋರಾಟದ ಮೂಲಕ ಪರಸ್ಪರರ ವೃತ್ತಿಜೀವನವನ್ನು ತಾವೇ ಹಾಳುಮಾಡಿಕೊಳ್ಳುತ್ತಿದ್ದಾರೆ’ ಎಂದು ನ್ಯಾಯಮೂರ್ತಿ ಶರ್ಮಾ ಮಾರ್ಮಿಕವಾಗಿ ನುಡಿದರು.

ಸುದೀರ್ಘ ಕೋರ್ಟ್ ಕಲಾಪಗಳಿಗಿಂತ ಮಧ್ಯಸ್ಥಿಕೆಯ ಮೂಲಕ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವುದು ಸೂಕ್ತ ಎಂಬ ಅಭಿಪ್ರಾಯಕ್ಕೆ ನ್ಯಾಯಾಲಯ ಬಂದಿದೆ.

ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುವವರೆಗೆ ಇಬ್ಬರು ಅಧಿಕಾರಿಗಳ ನಡುವೆ ನಡೆಯುತ್ತಿರುವ ಎಲ್ಲಾ ಕ್ರಿಮಿನಲ್ ಮತ್ತು ಸಿವಿಲ್ ಪ್ರಕರಣಗಳ ವಿಚಾರಣೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಧಿಕಾರಿಗಳು ಈಗ ನ್ಯಾಯಮೂರ್ತಿ ಕುರಿಯನ್ ಜೋಸೆಫ್ ಅವರ ಮುಂದೆ ಹಾಜರಾಗಿ ಮಾತುಕತೆಯ ಮೂಲಕ ವಿವಾದವನ್ನು ಅಂತ್ಯಗೊಳಿಸಲು ಪ್ರಯತ್ನಿಸಬೇಕಿದೆ.

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

TAGGED:Supreme Court gives important advice to end Rohini Sindhuri-Roopa Moudgil feud
Share This Article
Facebook Twitter Copy Link Print
Previous Article ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ
Next Article 6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?