newsics.com/ನ್ಯೂಸಿಕ್ಸ್
ಹೈದ್ರಾಬಾದ್: ಯುವಕನೊಬ್ಬ ಚಲಿಸುತ್ತಿರುವ ಬೈಕ್‌ನ ಮುಂಭಾಗದಲ್ಲಿ (ಪೆಟ್ರೋಲ್ ಟ್ಯಾಂಕ್ ಮೇಲೆ) ತನ್ನ ಆಫೀಸ್ ಲ್ಯಾಪ್ಟಾಪ್ ಇಟ್ಟುಕೊಂಡು ಕೆಲಸ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಆಗಿದೆ.
ಈ ವಿಡಿಯೋದಲ್ಲಿ ಯುವಕ ಒಂದು ಕೈಯಿಂದ ಬೈಕ್ ಹ್ಯಾಂಡಲ್ ಹಿಡಿದು ವಾಹನ ಚಲಾಯಿಸುತ್ತಾ, ಮತ್ತೊಂದು ಕೈಯಿಂದ ಲ್ಯಾಪ್ಟಾಪ್ ಕೀಬೋರ್ಡ್ ಬಳಸಿ ಆಫೀಸ್ ಕೆಲಸ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಸ್ಪಷ್ಟವಾಗಿ ಕಾಣಬಹುದು. ರಸ್ತೆಯಲ್ಲಿ ಸಂಚಾರ ದಟ್ಟಣೆ ಇರುವಾಗಲೇ ಈತ ಇಂತಹ ಅಪಾಯಕಾರಿ ಸಾಹಸಕ್ಕೆ ಕೈ ಹಾಕಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಟ್ವಿಟರ್‌ನಲ್ಲಿ ಆಕ್ರೋಶ ಹೊರಹಾಕಿದ ಸಾರ್ವಜನಿಕರು: ಈ ದೃಶ್ಯವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಮತ್ತೊಬ್ಬ ವಾಹನ ಸವಾರರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದು ಎಕ್ಸ್ (ಟ್ವಿಟರ್) ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋ ಹಂಚಿಕೊಂಡ ವ್ಯಕ್ತಿ ತೀವ್ರ ಕಳಕಳಿ ಮತ್ತು ಆಕ್ರೋಶ ವ್ಯಕ್ತಪಡಿಸಿದ್ದು, “ಪ್ರತಿಯೊಂದು ಕೆಲಸಕ್ಕೂ ಒಂದು ವಿಧಾನವಿದೆ. ಆದರೆ, ಈ ರೀತಿ ಚಲಿಸುವ ಬೈಕ್‌ನಲ್ಲಿ ಕುಳಿತು ಆಫೀಸ್ ಕೆಲಸ ಮಾಡುವ ಮೂಲಕ ಜನರು ತಮ್ಮ ಪ್ರಾಣವನ್ನೇ ಪಣಕ್ಕಿಡುತ್ತಿದ್ದಾರೆ. ಒಮ್ಮೆ ಹೋದ ಜೀವ ಮರಳಿ ಸಿಗುತ್ತದೆ ಎನ್ನುವ ಗ್ಯಾರಂಟಿ ಆದರೂ ಎಲ್ಲಿದೆ?” ಎಂದು ಪ್ರಶ್ನಿಸಿದ್ದಾರೆ.
ಸದ್ಯ ಇಂಟರ್ನೆಟ್‌ನಲ್ಲಿ ಈ ವಿಡಿಯೋ ಸಖತ್ ವೈರಲ್ ಆಗುತ್ತಿದ್ದು, ಕಚೇರಿ ಕೆಲಸದ ಒತ್ತಡ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ದೊಡ್ಡ ಚರ್ಚೆ ಆರಂಭವಾಗಿದೆ.
ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?