Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

Share
1 Min Read
SHARE

newsics.com/ನ್ಯೂಸಿಕ್ಸ್

ಇದೇ ವರ್ಷಾರಂಭದಲ್ಲಿ ಮದುವೆಯಾದ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವಕರೊಂಡ ಅವರು ದಾಂಪತ್ಯ ಆರಂಭಿಸುವ ಮುನ್ನ ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಶಿಕ್ಷಣಕ್ಕೆ ನೆರವಾಗುವ ಭರವಸೆಯನ್ನು ನೀಡಿದ್ದರು. ಇದೀಗ ಆ ಭರವಸೆಯನ್ನು ಈಡೇರಿಸಿದ್ದಾರೆ.

ನಾಗರ್ ಕರ್ನೂಲ್ ಜಿಲ್ಲೆಯ ಅಚ್ಚಂಪೇಟೆಯ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ವಿಜಯ್ ದೇವರಕೊಂಡ-ರಶ್ಮಿಕಾ ದಂಪತಿ ಸ್ಕಾಲರ್‌ಶಿಪ್ ವಿತರಿಸುತ್ತಿದ್ದಾರೆ. ಈ ವರ್ಷದ ಆರಂಭದಲ್ಲಿ ಅಂದರೆ ಮದುವೆಯಾದ ತಕ್ಷಣವೇ, ವಿಜಯ್ ದೇವರಕೊಂಡ ತಮ್ಮ ಸ್ವಂತ ಊರಾದ ನಾಗರ್ ಕರ್ನೂಲ್ ಜಿಲ್ಲೆಯ ತುಮ್ಮನ್‌ಪೇಟೆ ಗ್ರಾಮಕ್ಕೆ ಭೇಟಿ ನೀಡಿದ್ದರು.

ಆ ಸಂದರ್ಭದಲ್ಲಿ, ಅಚ್ಚಂಪೇಟೆ ಡಿವಿಷನ್ ವ್ಯಾಪ್ತಿಯ ಸರ್ಕಾರಿ ಶಾಲೆಗಳ ಟಾಪರ್ಸ್ (ಹೆಚ್ಚು ಅಂಕ ಗಳಿಸಿದ) ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡುವುದಾಗಿ ಭರವಸೆ ನೀಡಿದ್ದರು. ಈಗ ಆ ಭರವಸೆಯನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ‘ದಿ ದೇವರಕೊಂಡ ಫೌಂಡೇಶನ್’ ಮೂಲಕ, 44 ಸರ್ಕಾರಿ ಶಾಲೆಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಸ್ವತಃ ಸ್ಕಾಲರ್‌ಶಿಪ್ ವಿತರಿಸುತ್ತಿದ್ದಾರೆ.

ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಅವರು ಜಂಟಿಯಾಗಿ ದೇವರಕೊಂಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅಚ್ಚಂಪೇಟ್ ಜಿಲ್ಲೆಯ 180 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡುತ್ತಿದ್ದಾರೆ. ನಟ ವಿಜಯ್ ದೇವರಕೊಂಡ ಅವರು ವಿದ್ಯಾರ್ಥಿವೇತನಕ್ಕೆ ಆಯ್ಕೆಯಾದವರ ಪಟ್ಟಿಯನ್ನು ಟ್ವಿಟ್ಟರ್​​ನಲ್ಲಿ ಹಂಚಿಕೊಂಡಿದ್ದಾರೆ. ‘ನಾವು ಅಚ್ಚಂಪೇಟೆ ಮಂಡಲದ 9 ಮತ್ತು 10ನೇ ತರಗತಿಯ ಕಠಿಣ ಪರಿಶ್ರಮಿ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲು ಅಂದುಕೊಂಡಿದ್ದ ಸಣ್ಣ ಕನಸನ್ನು ಈಡೇರಿಸುತ್ತಿದ್ದೇವೆ. ತಮ್ಮ ಹೆತ್ತವರಿಗೆ ಹೆಮ್ಮೆ ತಂದ 180 ಮಕ್ಕಳ ಪಟ್ಟಿ ಇಲ್ಲಿದೆ’ ಎಂದು ಅವರು ಬರೆದುಕೊಂಡಿದ್ದಾರೆ.

ಈ ವಿದ್ಯಾರ್ಥಿವೇತನ ಬಹಳ ಚಿಕ್ಕದಾಗಿರಬಹುದು, ಆದರೆ ಇದು ನಮಗೆ ಮುಖ್ಯ ಎಂದು ನಾನು ಭಾವಿಸುತ್ತೇನೆ. ನಾನು ನಿಮ್ಮ ಜೀವನದ ಭಾಗವಾಗಲು ಬಯಸುತ್ತೇನೆ. ನನ್ನ ಗ್ರಾಮದಿಂದ ಆರಂಭವಾದ ಈ ಪ್ರಯತ್ನ, ಮುಂದಿನ ದಿನಗಳಲ್ಲಿ ಇಡೀ ತೆಲಂಗಾಣದಾದ್ಯಂತ ವಿಸ್ತರಣೆಯಾಗಬೇಕು ಎಂಬುದು ನನ್ನ ಕನಸು’ ಎಂದು ಅವರು ಹೇಳಿಕೊಂಡಿದ್ದಾರೆ.

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

 

 

TAGGED:Rashmika-Vijay kept their promise
Share This Article
Facebook Twitter Copy Link Print
Previous Article ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ
Next Article ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read
ಕರ್ನಾಟಕದೇಶಪ್ರಮುಖ

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?