Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಮಸ್ಕತ್ : ಒಮಾನಿ ಸಮುದ್ರದಲ್ಲಿ  ಭಾರತೀಯ ಸರಕು ಹಡಗು ಎಂಎಸ್‌ವಿ ವಿರಾಟ್-1  ಮುಳುಗಿದ ಭೀಕರ ಘಟನೆಯ ವಿವರಗಳು ಈಗ ಬಹಿರಂಗಗೊಂಡಿವೆ.

ನಡುಸಮುದ್ರದಲ್ಲಿ ಹಡಗಿನ ಇಂಜಿನ್ ದಿಢೀರ್ ಕೈಕೊಟ್ಟಿದ್ದು, ರಕ್ಕಸ ಅಲೆಗಳ ಹೊಡೆತಕ್ಕೆ ಸಿಲುಕಿ ಹಡಗು ನಿಯಂತ್ರಣ ಕಳೆದುಕೊಂಡಿತು. ನೀರು ಒಳನುಗ್ಗುತ್ತಿದ್ದಂತೆ ಮುಳುಗುವ ಹಂತ ತಲುಪಿದಾಗ ಸಿಬ್ಬಂದಿ SOS ಸಂದೇಶ ರವಾನಿಸಿದರು. ಪರಿಸ್ಥಿತಿಯ ಗಂಭೀರತೆ ಅರಿತು ಅಮೆರಿಕದ ನೌಕಾಪಡೆ  ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಬಂದಿದೆ.

ಈ ವೇಳೆ ಅತ್ಯಂತ ವೇಗವಾಗಿ ಕಾರ್ಯಾಚರಣೆಗೆ ಇಳಿದ ಅಮೆರಿಕ ನೌಕಾಪಡೆಯ P-8 ಗಸ್ತು ವಿಮಾನವು ಸಮುದ್ರಕ್ಕೆ ಲೈಫ್ ರಾಫ್ಟ್ ಅನ್ನು ಏರ್‌ಡ್ರಾಪ್ ಮಾಡುವ ಮೂಲಕ ಎಲ್ಲಾ 14 ಭಾರತೀಯ ನಾವಿಕರನ್ನು ಪ್ರಾಣಾಪಾಯದಿಂದ ಪಾರು ಮಾಡಿದೆ.

ಒಮಾನ್‌ನ ರಾಸ್ ಅಲ್ ಹದ್ದ್‌ನಿಂದ ಸುಮಾರು 80 ನಾಟಿಕಲ್ ಮೈಲಿ ದೂರದಲ್ಲಿ ಈ ತುರ್ತು ಪರಿಸ್ಥಿತಿ ಸೃಷ್ಟಿಯಾಗಿತ್ತು. ಹಡಗು ಮುಳುಗುತ್ತಿರುವುದನ್ನು ಖಚಿತಪಡಿಸಿಕೊಂಡ ಅಮೆರಿಕದ ವಿಮಾನವು ನಾವಿಕರ ತಲೆಯ ಮೇಲೆಯೇ ಸುರಕ್ಷಿತವಾಗಿ ಲೈಫ್ ರಾಫ್ಟ್ ಅನ್ನು ಕೆಳಗೆ ಹಾಕಿತು. ವಿಮಾನದಲ್ಲಿದ್ದ ಸಿಬ್ಬಂದಿ ಇಡೀ ಕಾರ್ಯಾಚರಣೆಯ ಮೇಲೆ ನಿಗಾ ವಹಿಸಿದ್ದು, ಮುಳುಗುತ್ತಿದ್ದ ಹಡಗಿನಿಂದ ಹೊರಬಂದ ಎಲ್ಲಾ 14 ಭಾರತೀಯರು ಯಶಸ್ವಿಯಾಗಿ ಆ ಜೀವ ರಕ್ಷಕ ದೋಣಿಯನ್ನು ಹತ್ತಿ ಕುಳಿತುಕೊಂಡಿದ್ದನ್ನು ದೃಢಪಡಿಸಿದ್ದಾರೆ.

ಭಾರತೀಯ ನಾವಿಕರು ಅಪಾಯದಲ್ಲಿರುವ ಸುದ್ದಿ ತಿಳಿಯುತ್ತಿದ್ದಂತೆ, ಅರಬ್ಬಿ ಸಮುದ್ರದಲ್ಲಿ ಗಸ್ತು ತಿರುಗುತ್ತಿದ್ದ ಭಾರತೀಯ ನೌಕಾಪಡೆಯ ಯುದ್ಧ ಹಡಗುಗಳನ್ನು ತಕ್ಷಣವೇ ಘಟನಾ ಸ್ಥಳದ ಕಡೆಗೆ ತಿರುಗಿಸಲಾಯಿತು. ಇದೇ ಸಮಯದಲ್ಲಿ ಸೆಂಟ್‌ ಕಿಟ್ಸ್ ಮತ್ತು ನೆವಿಸ್ ದೇಶದ ಧ್ವಜ ಹೊತ್ತ ಎಂಬಿ ಜಬಲ್ ಅಲಿ 9 (MV Jabal Ali 9) ಎಂಬ ವಾಣಿಜ್ಯ ಹಡಗು ಕೂಡ ತನ್ನ ಮಾರ್ಗವನ್ನು ಬದಲಾಯಿಸಿ ನಾವಿಕರ ರಕ್ಷಣೆಗೆ ಧಾವಿಸಿದೆ. ಪ್ರಸ್ತುತ ಲೈಫ್ ರಾಫ್ಟ್‌ನಲ್ಲಿರುವ ಎಲ್ಲಾ 14 ಭಾರತೀಯ ನಾವಿಕರು ಸುರಕ್ಷಿತವಾಗಿದ್ದಾರೆ ಎಂದು ಆ ಹಡಗಿನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

TAGGED:Ship carrying 14 Indians sinks in Omani waters; rescued by US Navy
Share This Article
Facebook Twitter Copy Link Print
Previous Article Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್
Next Article ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

Popular Posts

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read
ದೇಶಪ್ರಮುಖ

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?