newsics.com /ನ್ಯೂಸಿಕ್ಸ್
ಬೆಂಗಳೂರು: ಖ್ಯಾತ ಪತ್ರಕರ್ತ ಪಿ. ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಸೋಮವಾರ ಕೊನೆಯುಸಿರೆಳೆದರು.
84 ವರ್ಷದ ಇಂದಿರಾ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರು ಇಂದು ಬೆಳಗ್ಗೆ ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ ಪುತ್ರಿ ಕವಿತಾ ಲಂಕೇಶ್ ಅವರ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಇಂದಿರಾ ಲಂಕೇಶ್ ಅವರು ಪುತ್ರಿ ಕವಿತಾ ಲಂಕೇಶ್ ಮತ್ತು ಪುತ್ರ ಇಂದ್ರಜಿತ್ ಲಂಕೇಶ್ ಸೇರಿದಂತೆ ಬಂಧು-ಬಳಗವನ್ನು ಅಗಲಿದ್ದಾರೆ.
ಕನ್ನಡ ಪತ್ರಿಕೋದ್ಯಮದಲ್ಲಿ ಇತಿಹಾಸ ಸೃಷ್ಟಿಸಿದ ‘ಲಂಕೇಶ್ ಪತ್ರಿಕೆ’ಯ ಆರಂಭದ ದಿನಗಳಿಂದಲೂ ಪಿ. ಲಂಕೇಶ್ ಅವರಿಗೆ ಇಂದಿರಾ ಲಂಕೇಶ್ ಅವರು ದೊಡ್ಡ ಬೆಂಬಲವಾಗಿ ನಿಂತಿದ್ದರು. ಲಂಕೇಶ್ ಅವರ ನಿಧನದ ನಂತರವೂ ಪತ್ರಿಕೆ ಮುನ್ನಡೆಸುವಲ್ಲಿ ಹಾಗೂ ಲಂಕೇಶ್ ಪ್ರಕಾಶನದ ಜವಾಬ್ದಾರಿಯನ್ನು ನಿರ್ವಹಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.
Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!
Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!
ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!